ಬ್ರೇಕಿಂಗ್ ನ್ಯೂಸ್
30-06-21 09:42 pm Mangaluru Correspondent ಕರಾವಳಿ
ಮಂಗಳೂರು, ಜೂನ್ 30: ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ವೈದ್ಯರ ಖಾಲಿ ಹುದ್ದೆ ತುಂಬಲಾಗುವುದು. ಅಲ್ಲದೆ, ಪ್ರತಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹೊಸ ಕಟ್ಟಡ ಹಾಗೂ ಕೊಕ್ಕಡದಲ್ಲಿ ಸಮುದಾಯ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿದ್ದು, ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. 250 ಪಿಎಚ್ ಸಿಗಳನ್ನು ಪ್ರಾಯೋಗಿಕವಾಗಿ ಮೇಲ್ದರ್ಜೆಗೇರಿಸಿ ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೂ ಆರೋಗ್ಯ ಸವಲತ್ತುಗಳನ್ನು ನೀಡುವ ಉದ್ದೇಶವಿದೆ. ಆಸ್ಪತ್ರೆಗಳ ಖಾಲಿ ಹುದ್ದೆ ತುಂಬಲು 1,763 ವೈದ್ಯರು ಹಾಗೂ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಗುತ್ತಿಗೆ ಆಧಾರದಲ್ಲಿ ಒಂದು ವರ್ಷ ಕಡ್ಡಾಯ ಸೇವೆಯಡಿ 2,050 ಹೆಚ್ಚುವರಿ ವೈದ್ಯರ ನೇಮಕವಾಗಿದೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಗೆ 26 ವೈದ್ಯರನ್ನು ನೇಮಕಾತಿ ಮಾಡಲಾಗಿದೆ. ಹೊಸ ನೇಮಕಾತಿಯಡಿ 18 ತಜ್ಞರು, 40 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಹೇಳಿದರು.
ಕೊಕ್ಕಡದಲ್ಲಿ 30 ಹಾಸಿಗೆಗಳ 4.8 ಕೋಟಿ ರೂ. ವೆಚ್ಚದ ಸಮುದಾಯ ಆರೋಗ್ಯ ಕೇಂದ್ರ ಉದ್ಘಾಟಿಸಲಾಗಿದೆ. ಇಲ್ಲಿಗೆ ಬೇಕಾದ ಸಲಕರಣೆಗಳನ್ನು ಒದಗಿಸಲಾಗುವುದು. ಕೆಐಒಸಿಎಲ್ ಸಂಸ್ಥೆಯಿಂದ ಹಾಸಿಗೆಗಳನ್ನು ಒದಗಿಸಲಾಗಿದೆ. ಗುಣಮಟ್ಟದ ಚಿಕಿತ್ಸೆಯನ್ನು ಇಲ್ಲಿ ಪಡೆಯಬಹುದು ಎಂದು ತಿಳಿಸಿದರು.
ಕೋವಿಡ್ 3ನೇ ಅಲೆ ಎದುರಿಸಲು ರಾಜ್ಯದಲ್ಲಿ 153 ಮಕ್ಕಳ ತಜ್ಞರನ್ನು ನೇಮಿಸಲಾಗಿದೆ. ತಾಲೂಕು ಆಸ್ಪತ್ರೆಗಳಿಗೆ ನೇಮಿಸಿರುವ ವೈದ್ಯರಿಗೆ ಮಕ್ಕಳ ಚಿಕಿತ್ಸೆ ಕುರಿತು ತರಬೇತಿ ನೀಡಲಾಗುವುದು. ನರ್ಸ್ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಯನ್ನು ನೇಮಿಸಲಾಗುತ್ತಿದೆ ಎಂದರು.
ಎಂಡೋಸಲ್ಫಾನ್ ಸಂತ್ರಸ್ತರಿಗೆ ಸೌಲಭ್ಯ
ಈ ಭಾಗದಲ್ಲಿ ಎಂಡೋಸಲ್ಫಾನ್ ನಿಂದ ಜನರು ತೊಂದರೆಗೊಳಗಾಗಿದ್ದಾರೆ. 60 ಶೇ.ಕ್ಕಿಂತ ಹೆಚ್ಚು ಅಂಗವೈಕಲ್ಯ ಇರುವವರಿಗೆ ತಿಂಗಳಿಗೆ 3,000 ರೂ. ಮಾಸಾಶನ ನೀಡಲಾಗುತ್ತಿದೆ. 59 ಶೇ. ವೈಕಲ್ಯ ಆದವರಿಗೆ ಒಂದೂವರೆ ಸಾವಿರ, 25 ಶೇ. ಗಿಂತ ಕಡಿಮೆ ವೈಕಲ್ಯ ಇರುವವರಿಗೆ ರಿಯಾಯಿತಿ ಸೌಲಭ್ಯ ನೀಡಲಾಗುತ್ತಿದೆ. ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಇನ್ನೂ ಹೆಚ್ಚಿನ ಸೌಲಭ್ಯ ನೀಡಲು ಯತ್ನಿಸಲಾಗುವುದು ಎಂದರು.
ಕೋವಿಡ್ ಹೊಸ ವೈರಾಣು ಪತ್ತೆಗೆ ಮಂಗಳೂರಿನಲ್ಲಿ ಜೀನೋಮ್ ಸೀಕ್ವೆನ್ಸ್ ಲ್ಯಾಬ್ ರೂಪಿಸಲಾಗುತ್ತಿದೆ. ವೆನ್ಲಾಕ್ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಹಾಗೂ ಉತ್ಕೃಷ್ಟ ದರ್ಜೆಯ ಆಸ್ಪತ್ರೆಯಾಗಿಸುವ ಉದ್ದೇಶವಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲಾಗುವುದು. ಬೆಳ್ತಂಗಡಿಯ ಪಡಂಗಡಿ ಗ್ರಾಮದಲ್ಲಿ 8 ಕೋಟಿ ರೂ. ವೆಚ್ಚದಲ್ಲಿ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣವಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
Health and family welfare minister Dr K Sudhakar has promised to ensure that vacancies of doctors will be filled up to ensure that there was no shortage of doctors in all hospitals and at least one primary health care centre in each assembly constituency in the state will be upgraded.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm