ಬ್ರೇಕಿಂಗ್ ನ್ಯೂಸ್
05-07-21 12:38 pm Mangalore Correspondent ಕರಾವಳಿ
ಕಾಸರಗೋಡು, ಜುಲೈ 3: ದೋಣಿ ದುರಂತದಲ್ಲಿ ಸಮುದ್ರ ಪಾಲಾಗಿದ್ದ ಮೂವರ ಮೃತದೇಹ ಪತ್ತೆಯಾಗಿದೆ. ಕಾಸರಗೋಡಿನ ಕಿಯೂರಿ ನಲ್ಲಿ ರವಿವಾರ ಬೆಳಗ್ಗೆ ದೋಣಿಯೊಂದು ಮಗುಚಿ ಮೂವರು ನಾಪತ್ತೆಯಾಗಿದ್ದರು.
ಮೃತರನ್ನು ಕಸಬಾ ತೀರದ ಸಂದೀಪ್ (34), ರತೀಶ್ (35) ಮತ್ತು ಕಾರ್ತಿಕ್ (22) ಎಂದು ಗುರುತಿಸಲಾಗಿದ್ದು, ಅವರ ಮೃತದೇಹ ಇಂದು ಬೆಳಗ್ಗೆ ಬೇಕಲ ಕೋಟಿಕುಳಂ ತೀರದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಸಬಾ ತೀರದಿಂದ ಆಂಜನೇಯ ಎಂಬ ಫೈಬರ್ ದೋಣಿಯಲ್ಲಿ ಏಳು ಮಂದಿ ಮೀನುಗಾರಿಕೆಗೆ ತೆರಳಿದ್ದು, ಕಿಯೂರು ಸಮೀಪ ಅಲೆಗಳ ಅಬ್ಬರಕ್ಕೆ ದೋಣಿ ಮಗುಚಿ ಬಿದ್ದು ಈ ಘಟನೆ ನಡೆದಿತ್ತು ಎಂದು ದೂರಲಾಗಿದೆ.
ನಾಲ್ವರನ್ನು ಇನ್ನೊಂದು ದೋಣಿಯಲ್ಲಿದ್ದ ಹಾಗೂ ಸ್ಥಳೀಯ ಮೀನುಗಾರರು ರಕ್ಷಿಸಿದ್ದರು. ಅಡ್ಕತ್ತಬೈಲ್ ಬೀಚ್ ನ ಬಿ.ಮನಿಕುಟ್ಟನ್ (36), ಕೋಟಿಕುಳಂ ಕಡಪ್ಪುರದ ರವಿ (22), ನೆಲ್ಲಿಕುಂಜೆಯ ಶಶಿ(35) ಮತ್ತು ಕಸಬಾದ ಶಿಬಿನ್ (23) ಅಪಾಯದಿಂದ ಪಾರಾಗಿದ್ದರು. ದುರಂತ ಬಳಿಕ ಸ್ಥಳೀಯ ಮೀನುಗಾರರು, ಕರಾವಳಿ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಚರಣೆ ನಡೆಸಿದ್ದು, ರಾತ್ರಿ ತನಕ ಶೋಧ ಮುಂದುವರಿದಿತ್ತು.
ಸ್ಥಳಕ್ಕೆ ಆಗಮಿಸಿದ ಬೇಕಲ ಹಾಗೂ ಕರಾವಳಿ ಪೊಲೀಸರು ಮಹಜರು ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.
Three young fishermen, including a teenager, are feared dead and four others swam to safety when their boat capsized at the mouth of the harbor in Kasaragod on Sunday.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm