ಬ್ರೇಕಿಂಗ್ ನ್ಯೂಸ್
09-07-21 06:36 pm Udupi Correspondent ಕರಾವಳಿ
ಕಾರ್ಕಳ, ಜುಲೈ 9: ಪ್ರಕರಣ ಒಂದರಲ್ಲಿ ವಿಚಾರಣೆಗೆ ಕರೆದಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತನೊಬ್ಬನಿಗೆ ಕಾರ್ಕಳ ಠಾಣೆಯಲ್ಲಿ ಪಿಎಸ್ಐ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಬಗ್ಗೆ ತನಿಖೆ ನಡೆಸಿ ಎರಡು ದಿನದಲ್ಲಿ ವರದಿ ನೀಡುವಂತೆ ಉಡುಪಿ ಎಸ್ಪಿ ವಿಷ್ಣುವರ್ಧನ್ ಕುಂದಾಪುರ ವಿಭಾಗದ ಡಿವೈಎಸ್ಪಿಗೆ ಆದೇಶ ಮಾಡಿದ್ದಾರೆ.
ಕಾರ್ಕಳ ತಾಲೂಕಿನ ಹಿರ್ಗಾನ ನಿವಾಸಿ ರಾಧಾಕೃಷ್ಣ 2020ರ ಆಗಸ್ಟ್ ನಲ್ಲಿ ಬೆಂಗಳೂರಿನಲ್ಲಿದ್ದ ವೇಳೆ ಸೈನಿಕರ ಬಗ್ಗೆ ಅವಹೇಳಕಾರಿ ಪೋಸ್ಟ್ ಮಾಡಿದ್ದ ಆರೋಪ ಇತ್ತು. ಆದರೆ, ಅದರ ಬಗ್ಗೆ ರಾಧಾಕೃಷ್ಣ ತನ್ನ ಹೆಸರಲ್ಲಿ ಫೇಕ್ ಐಡಿ ಮಾಡಿ ಯಾರೋ ಬೇರೆಯವರು ಪೋಸ್ಟ್ ಮಾಡಿದ್ದಾರೆಂದು ಬೆಂಗಳೂರಿನ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದೇ ವೇಳೆ, ಸೈನಿಕರ ಅವಹೇಳನದ ಬಗ್ಗೆ ಕಾರ್ಕಳ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತರು ದೂರು ದಾಖಲು ಮಾಡಿದ್ದರು.
ಆನಂತರ ಊರಿಗೆ ಮರಳಿದ್ದ ರಾಧಾಕೃಷ್ಣ ಹಿರ್ಗಾನ ಅವರನ್ನು ಕಾರ್ಕಳ ಠಾಣೆಗೆ ವಿಚಾರಣೆಗೆ ಬರುವಂತೆ ನೋಟೀಸ್ ನೀಡಲಾಗಿತ್ತು. ಆದರೆ, ರಾಧಾಕೃಷ್ಣ ವಿಚಾರಣೆಗೆ ತೆರಳದೆ ನಿರ್ಲಕ್ಷ್ಯ ವಹಿಸಿದ್ದರು ಎನ್ನಲಾಗಿದೆ. ಈ ನಡುವೆ, ಕಳೆದ ಎಪ್ರಿಲ್ ತಿಂಗಳಲ್ಲಿ ರಾಧಾಕೃಷ್ಣ ನಾಯಕ್ ಅವರಿಗೆ ಹೃದಯಾಘಾತ ಆಗಿದ್ದು ಸ್ಟಂಟ್ ಅಳವಡಿಕೆ ಮಾಡಿದ್ದರು ಎನ್ನಲಾಗುತ್ತಿದೆ. ಕೆಲವು ದಿನಗಳ ಹಿಂದೆ ಕಾರ್ಕಳ ಠಾಣೆಯಿಂದ ಪೊಲೀಸರು ಕರೆ ಮಾಡಿ, ವಿಚಾರಣೆಗೆ ಬರುವಂತೆ ಹೇಳಿದ್ದರು.
ಅದರಂತೆ. ಜುಲೈ 8ರಂದು ಠಾಣೆಗೆ ತೆರಳಿದ್ದ ರಾಧಾಕೃಷ್ಣ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಅವಹೇಳಕಾರಿ ಪೋಸ್ಟ್ ಮಾಡಿದ್ದು ತಾನಲ್ಲ. ಅದು ನಕಲಿ ಐಡಿಯೆಂದು ರಾಧಾಕೃಷ್ಣ ತಿಳಿಸಿದ್ದರಿಂದ, ನಕಲಿಯೆಂದು ಸಾಬೀತು ಪಡಿಸಿ ಎಂದು ಪೊಲೀಸರು ವಿಚಾರಣೆ ವೇಳೆ ಹೇಳಿದ್ದಾರೆ ಎನ್ನಲಾಗಿದೆ. ಆದರೆ, ಠಾಣೆಯಿಂದ ನಿರ್ಗಮಿಸಿದ್ದ ರಾಧಾಕೃಷ್ಣ ತನ್ನ ಮೇಲೆ ಕಾರ್ಕಳ ಎಸ್ಐ ಹಲ್ಲೆ ಮಾಡಿದ್ದಾಗಿ ಆರೋಪಿಸಿದ್ದಾರೆ.
ರಾಧಾಕೃಷ್ಣ ತನ್ನ ಮೇಲೆ ಗಂಭೀರ ಹಲ್ಲೆ ಆಗಿರುವುದಾಗಿ ಹೇಳಿ ಮಣಿಪಾಲ ಠಾಣೆಗೆ ದಾಖಲಾಗಿದ್ದಾರೆ. ಬಿಜೆಪಿ ಶಾಸಕ ಮತ್ತು ಕಾರ್ಯಕರ್ತರ ಒತ್ತಡಕ್ಕೆ ಮಣಿದು ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಈ ಬಗ್ಗೆ ಟ್ವೀಟ್ ಮಾಡಿದ್ದು, ಕಾರ್ಯಕರ್ತನ ಮೇಲಿನ ಹಲ್ಲೆಯನ್ನು ಖಂಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಡುಪಿ ಎಸ್ಪಿ ವಿಷ್ಣುವರ್ಧನ, ಘಟನೆ ಬಗ್ಗೆ ತನಿಖೆ ನಡೆಸಿ ಎರಡು ದಿನದಲ್ಲಿ ವರದಿ ನೀಡುವಂತೆ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಗೆ ಸೂಚಿಸಿದ್ದೇನೆ. ಅದು ವರ್ಷದ ಹಿಂದಿನ ಪ್ರಕರಣವಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟೀಸ್ ನೀಡಲಾಗಿತ್ತು. ನಿನ್ನೆ ಠಾಣೆಗೆ ಆಗಮಿಸಿದ್ದ ರಾಧಾಕೃಷ್ಣ ಬಳಿ, ನಕಲಿ ಐಡಿ ಎಂದು ಪ್ರೂವ್ ಮಾಡುವಂತೆ ಕಾರ್ಕಳ ಪಿಎಸ್ಐ ಹೇಳಿದ್ದಾರೆ. ಘಟನೆ ಏನಿದ್ದರೂ, ಹಲ್ಲೆ ವಿಚಾರದ ಬಗ್ಗೆ ತಪ್ಪು ನಡೆದಿದ್ದರೆ ಕ್ರಮ ತಗೊಳ್ತೇವೆ ಎಂದು ಹೇಳಿದ್ದಾರೆ.
ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡನೀಯ.
— Siddaramaiah (@siddaramaiah) July 9, 2021
ಇವರ ಅನಾರೋಗ್ಯವನ್ನೂ ಲೆಕ್ಕಿಸದೆ,
ಹಳೆ ಸುಳ್ಳು ಕೇಸ್ ಆಧರಿಸಿ,
ಪೊಲೀಸರು ದೌರ್ಜನ್ಯ ನಡೆಸಿದ್ದಾರೆ.
ಈ ಬಗ್ಗೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳು ತನಿಖೆ ನಡೆಸಿ ನೊಂದ ಯುವಕನಿಗೆ ನ್ಯಾಯ ಒದಗಿಸಬೇಕು.@DgpKarnataka pic.twitter.com/8zjPtLu3Lm
A Congress party worker of Karkala, Udupi had been brutally beaten by the Karkala PSI when he had come to the station to attend an inquiry into a case filed against him. SP N Vishnuvardhan has ordered a probe into the alleged incident of brutality by Karkala police sub-inspector (PSI) on a Congress worker.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm