ಬ್ರೇಕಿಂಗ್ ನ್ಯೂಸ್
11-07-21 12:22 pm Mangaluru Correspondent ಕರಾವಳಿ
ಮಂಗಳೂರು, ಜುಲೈ 11: ಹೆಗಲಿಗೆ ಕೈಹಾಕಿದ ಕಾಂಗ್ರೆಸ್ ಕಾರ್ಯಕರ್ತನಿಗೆ ಡಿ.ಕೆ.ಶಿವಕುಮಾರ್ ಕಪಾಳಮೋಕ್ಷ ಮಾಡಿದ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್ ನಾಯಕರ ವರ್ತನೆಯೇ ಅಂಥದ್ದು ಎಂದು ಲೇವಡಿ ಮಾಡಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ರಾಜಕೀಯ ಕ್ಷೇತ್ರದಲ್ಲಿ ಇರುವವರು, ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡಲ್ಲ. ಆದ್ರೆ ಯಾವುದೇ ವಿಚಾರದಲ್ಲಿ ಸಮಾಜ ನಮ್ಮನ್ನ ಗಮನಿಸುತ್ತಿರುತ್ತದೆ ಎಂಬ ಕಾಳಜಿ ಇರಬೇಕು. ಕಾರ್ಯಕರ್ತರು ಮತ್ತು ಜನರು ನಮ್ಮ ಬಳಿ ಬೇಡಿಕೆ, ಇಚ್ಛೆ ಹಾಗೂ ಅಪೇಕ್ಷೆಯನ್ನ ಪಡ್ತಾರೆ. ಅವರು ಬಂದಾಗ ಗೌರವಯುತವಾಗಿ ನಡೆಸಿಕೊಳ್ಳಬೇಕಾಗಿರೋದು ನಮ್ಮ ಸಂಸ್ಕೃತಿ. ಯಾರೇ ರಾಜಕಾರಣಿ ಆದ್ರೂ ಎಲ್ಲೆ ಮೀರಿ ವರ್ತಿಸಬಾರದು, ಇದು ಸರಿಯಾದ ನಡತೆ ಅಲ್ಲ ಎಂದು ಹೇಳಿದರು.
ಕಾಂಗ್ರೆಸ್ಸಿಗರ ಸಂಸ್ಕೃತಿ ಏನು ಅನ್ನೋದು ಇದರಿಂದ ಗೊತ್ತಾಗುತ್ತದೆ. ಕಾಂಗ್ರೆಸ್ಸಿಗರು ಹಲ್ಲೆ ಮಾಡ್ತಾ ಇರೋದು ಇದು ಮೊದಲೇನಲ್ಲ. ವಿಧಾನಸೌಧದ ಒಳಗೆ ಸಿದ್ದರಾಮಯ್ಯ ತೊಡೆತಟ್ಟಿ, ಪ್ರತಿಪಕ್ಷದವರನ್ನು ಯುದ್ದಕ್ಕೆ ಕರೆದವರು. ದೇವಸ್ಥಾನದ ಹಾಗಿರೋ ವಿಧಾನಸೌಧಕ್ಕೆ ಅಗೌರವ ತೋರಿದವರು ಕಾರ್ಯಕರ್ತರಿಗೆ ಗೌರವ ತೋರಿಸ್ತಾರಾ? ಕಾಂಗ್ರೆಸ್ ರೌಡಿಗಳ ಪಕ್ಷ ಅಲ್ಲ ಅಂತ ಯಾರೂ ಹೇಳಲ್ಲ, ಅವರ ವ್ಯಕ್ತಿತ್ವದಲ್ಲೇ ಅದು ಕಾಣುತ್ತದೆ. ಅವರ ಇತಿಹಾಸ ತೆಗೆದು ನೋಡಿ, ರೌಡಿ ಮಾತ್ರವಲ್ಲ, ಈ ದೇಶದಲ್ಲಿ ಎಲ್ಲಾ ಕೆಟ್ಟ ಕೆಲಸಗಳಿಗೆ ಪ್ರೇರಣೆ ಆದವರು ಅವರೇ ಎನ್ನುವುದು ಗೊತ್ತಾಗುತ್ತದೆ ಎಂದು ಕುಟುಕಿದ್ದಾರೆ ನಳಿನ್.
DK Shivakumar slaps party worker MP Naleen Kumar Kateel calls Congress rowdy party during a media interaction in Mangalore. KPCC chief D.K. Shivakumar has once again embarrassed himself and the Congress party by losing his cool in public. Shivakumar, who has snatched the mobile phones of his supporters and thrown them while trying to click selfies with him, shocked everyone this time by slapping a party worker in Mandya for coming "too close" to the leader.
04-10-25 09:18 pm
HK News Desk
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm