ಬ್ರೇಕಿಂಗ್ ನ್ಯೂಸ್
11-07-21 02:24 pm Mangaluru Correspondent ಕರಾವಳಿ
ಉಳ್ಳಾಲ, ಜು.11: ಧಾರಾಕಾರ ಮಳೆಯ ನಡುವೆ ಹೆದ್ದಾರಿಯಲ್ಲಿ ಬ್ರೇಕ್ ಹೊಡೆದು ಹಠಾತ್ತನೆ ನಿಂತ ಸಿಟಿ ಬಸ್ಸಿನ ಹಿಂಬದಿಗೆ ಬೈಕ್ ಡಿಕ್ಕಿಯಾಗಿದ್ದು ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರಾ.ಹೆ. 66 ರ ಉಚ್ಚಿಲದಲ್ಲಿ ನಡೆದಿದೆ.
ಬೈಕ್ ಸವಾರ ಆಂಧ್ರ ಪ್ರದೇಶದ ಮೂಲದ ಶಶಿಧರ್ ರೆಡ್ಡಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಧ್ರ ಮೂಲದ ಶಶಿಧರ್ ರೆಡ್ಡಿ (27) ಮತ್ತು ಶಾನು ಭಾಝ್ (31) ಎಂಬವರು ತಲಪಾಡಿ ಟೋಲ್ ಪ್ಲಾಝಾದ ಸಿಬ್ಬಂದಿಗಳಾಗಿದ್ದು ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಉಚ್ಚಿಲದಲ್ಲಿ ಖಾಸಗಿ ಸಿಟಿ ಬಸ್ಸೊಂದು ಹಠಾತ್ತಾಗಿ ಬ್ರೇಕ್ ಹೊಡೆದ ಕಾರಣ ಹಿಂದಿನಿಂದ ಧಾವಿಸುತ್ತಿದ್ದ ಬೈಕ್ ಸವಾರರು ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಬಸ್ಸಿನ ಒಳಗೆ ನುಗ್ಗಿದೆ. ಬೈಕ್ ಸವಾರ ಶಶಿಧರ್ ತಲೆಗೆ ಗಂಭೀರ ಗಾಯಗಳಾಗಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಹ ಸವಾರ ಶಾನು ಭಾಝ್ ಕೂಡ ಗಾಯಾಳುವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಚ್ಚಿಲ ಹೆದ್ದಾರಿಯಲ್ಲಿ ರಸ್ತೆಯಲ್ಲೇ ಅವೈಜ್ಞಾನಿಕವಾಗಿ ಬಸ್ಸುಗಳನ್ನು ನಿಲುಗಡೆ ಮಾಡುವುದರಿಂದ ಇಲ್ಲಿ ಅಪಘಾತಗಳಾಗುತ್ತಿವೆ. ಈ ಹಿಂದೆಯೂ ಇದೇ ರೀತಿ ಅಪಘಾತ ಆಗಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Rider Critical after Bike rams Speeding Bus after sudden brake at Uchila Near Talapady.
04-10-25 09:18 pm
HK News Desk
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm