ಆಳ್ವಾಸ್ ಸಂಸ್ಥೆಯ ಇಬ್ಬರು ಕ್ರೀಡಾಪಟುಗಳು ಈ ಬಾರಿಯ ಟೋಕಿಯೋ ಒಲಿಂಪಿಕ್ಸ್ ಆಯ್ಕೆ

14-07-21 08:48 pm       Mangaluru Correspondent   ಕರಾವಳಿ

ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಕ್ರೀಡಾ ಕೋಟಾದಡಿ ಕಲಿಯುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ಜಪಾನ್ ನಲ್ಲಿ ನಡೆಯುವ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಮಂಗಳೂರು, ಜುಲೈ 14: ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಕ್ರೀಡಾ ಕೋಟಾದಡಿ ಕಲಿಯುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ಜಪಾನ್ ನಲ್ಲಿ ನಡೆಯುವ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಆಳ್ವಾಸ್ ಸಂಸ್ಥೆಯ ಕ್ರೀಡಾ ವಿಭಾಗದ ದತ್ತು ಶಿಕ್ಷಣದಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕು.ಧನಲಕ್ಷ್ಮಿ ಮತ್ತು ಕು.ಶುಭಾ ಇವರು 4*400 ಮೀಟರ್ ರಿಲೇಯಲ್ಲಿ ಒಲಿಂಪಿಕ್ಸ್ ಕೂಟದಲ್ಲಿ ದೇಶವನ್ನು ಪ್ರತಿನಿಧಿಸಲಿದ್ದಾರೆ.

2016-17ನೇ ಶೈಕ್ಷಣಿಕ ವರ್ಷದಿಂದ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಾಗಿರುವ ಈ ವಿದ್ಯಾರ್ಥಿನಿಯರು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಕೂಟಗಳಲ್ಲಿ ಮತ್ತು ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ದೇಶವನ್ನು ಪ್ರತಿನಿಧಿಸಿದ್ದರು. ಇವರ ಸಾಧನೆಯನ್ನು ಮತ್ತಷ್ಟು ಉತ್ತೇಜಿಸುವ ಸಲುವಾಗಿ ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವಾ ವಿದ್ಯಾರ್ಥಿನಿಯರಿಗೆ ತಲಾ ಒಂದು ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ. ಜಪಾನ್ ದೇಶದ ಟೋಕಿಯೋನಲ್ಲಿ ಇದೇ ಜುಲೈ 23ರಿಂದ ಈ ಬಾರಿಯ ಒಲಿಂಪಿಕ್ಸ್ ಕ್ರೀಡಾಕೂಟ ಆರಂಭವಾಗಲಿದೆ. 

Moodbidri Two students from Alvas College qualified for the Tokyo Olympics 2021. Dhanlakshmi and Shuba are the two girls qualified.