ಬಕ್ರೀದ್ ; ಅಕ್ರಮ ಗೋಸಾಗಣೆ ತಡೆಗೆ 25ಕ್ಕೂ ಹೆಚ್ಚು ಚೆಕ್ ಪೋಸ್ಟ್ ; ಈದ್ಗಾಗಳಲ್ಲಿ ಪ್ರಾರ್ಥನೆಗೆ ಅವಕಾಶ ಇಲ್ಲ 

17-07-21 09:05 pm       Mangaluru Correspondent   ಕರಾವಳಿ

ಜು.21ರಂದು ಆಚರಿಸುವ ಬಕ್ರೀದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಮುಂಜಾಗರೂಕತಾ ಕ್ರಮವಾಗಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 25ಕ್ಕೂ ಅಧಿಕ ಚೆಕ್‌ ಪೋಸ್ಟ್‌ಗಳನ್ನು ತೆರೆಯಲಾಗಿದೆ

ಮಂಗಳೂರು, ಜು.17: ಜು.21ರಂದು ಆಚರಿಸುವ ಬಕ್ರೀದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಮುಂಜಾಗರೂಕತಾ ಕ್ರಮವಾಗಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 25ಕ್ಕೂ ಅಧಿಕ ಚೆಕ್‌ ಪೋಸ್ಟ್‌ಗಳನ್ನು ತೆರೆಯಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಕಮಿಷನರೇಟ್ ವ್ಯಾಪ್ತಿಯ ಪ್ರತಿಯೊಂದು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲದೆ ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ ಗಡಿಭಾಗಗಳಲ್ಲಿ ಕೂಡ ಚೆಕ್‌ ಪೋಸ್ಟ್ ತೆರೆದು ಶಾಂತಿಯುತವಾಗಿ ಬಕ್ರೀದ್ ಆಚರಿಸಲು ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಈಗಾಗಲೇ ಎಲ್ಲಾ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಧರ್ಮಗಳ ಪ್ರಮುಖರ ಸಮ್ಮುಖದಲ್ಲಿ ಶಾಂತಿಸಭೆ ನಡೆಸಲಾಗಿದೆ. ಧಾರ್ಮಿಕ ಕೇಂದ್ರಗಳ ಸುತ್ತಮುತ್ತ ಬಂದೋಬಸ್ತ್ ಮಾಡಲಾಗಿದೆ. ಸರಕಾರದ ಸೂಚನೆಯಂತೆ ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ಈದ್ಗಾಗಳಲ್ಲಿ ಪ್ರಾರ್ಥನೆ ನಡೆಸಲು ಅವಕಾಶ ನೀಡಲಾಗುವುದಿಲ್ಲ ಎಂದು ಕಮಿಷನರ್ ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.

As a preventive measure and to avoid untoward incident on the eve of Bakrid, 25 check posts has been set up in under city police commissionerate, said police commissioner N Shashi Kumar. The police commissioner said, “Bakrid will be celebrated on July 21. Two check posts under every police station limits in city police commissionerate and also on the borders of Dakshina Kannada and Kerala and Udupi borders will be set up.