ಜು.19ರಿಂದ ಕಾಸರಗೋಡು - ಮಂಗಳೂರು ಮಧ್ಯೆ ಬಸ್ ಸಂಚಾರ ಆರಂಭ 

18-07-21 07:26 pm       Mangaluru Correspondent   ಕರಾವಳಿ

ಕೋವಿಡ್ ಸೋಂಕು ತಡೆಯುವ ನಿಟ್ಟಿನಲ್ಲಿ ಷರತ್ತಿಗೆ ಒಳಪಟ್ಟು ಜು.19 ರಿಂದ ಕೇರಳದ ಕಾಸರಗೋಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕೆಎಸ್ಸಾರ್ಟಿಸಿ ಬಸ್ ಸಂಚಾರ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ. 

ಮಂಗಳೂರು, ಜು.18: ಕೋವಿಡ್ ಸೋಂಕು ತಡೆಯುವ ನಿಟ್ಟಿನಲ್ಲಿ ಷರತ್ತಿಗೆ ಒಳಪಟ್ಟು ಜು.19 ರಿಂದ ಕೇರಳದ ಕಾಸರಗೋಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕೆಎಸ್ಸಾರ್ಟಿಸಿ ಬಸ್ ಸಂಚಾರ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ. 

ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಸಾವಿರಾರು ಸಂಖ್ಯೆಯಲ್ಲಿ ದಿನನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾಸರಗೋಡು - ಮಂಗಳೂರು ನಡುವೆ ಬಸ್ ಸಂಚಾರಕ್ಕೆ ಜುಲೈ 19 ರಿಂದ ಪರತ್ತಿಗೊಳಪಟ್ಟು ಅನುಮತಿಯನ್ನು ಜಿಲ್ಲಾಧಿಕಾರಿ ನೀಡಿದ್ದಾರೆ. 

ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ಗಳ ಮೂಲಕ ಪ್ರಯಾಣಿಸುವವರು ಕೋವಿಡ್ ಲಸಿಕೆಯನ್ನು ಕನಿಷ್ಠ 1(ಒಂದು) ಡೋಸ್ ಪಡೆದಿರಬೇಕು.  ಅಥವಾ 72 ಗಂಟೆಗಳ ಒಳಗೆ ಮಾಡಿಸಿರುವ RT-PCR ಪರೀಕ್ಷೆಯ ನೆಗೆಟಿವ್ ವರದಿಯನ್ನು ಆಯಾ ಬಸ್ ನ
ನಿರ್ವಾಹಕರು ಖಚಿತಪಡಿಸಿಕೊಳ್ಳಬೇಕು. 

ಕೋವಿಡ್‌ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸುವುದು. (ಮುಖ ಗವಸು, ಸ್ಯಾನಿಟೈಸರ್, ಸಾರ್ವಜನಿಕ ಅಂತರ) ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ-2020, ವಿಪತ್ತು ನಿರ್ವಹಣಾ ಕಾಯ್ದೆ, 2005 ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

KSRTC buses will be allowed to operate between Kasargod and Mangaluru from July 19.