ಆಡಿಯೋ ಬಾಂಬ್ ; ಅದು ನನ್ನದಲ್ಲ , ನಾನವನಲ್ಲ ! ಕಿಡಿಗೇಡಿಗಳ ಸೃಷ್ಟಿ ; ನಳಿನ್ ಕುಮಾರ್ ಪ್ರತಿಕ್ರಿಯೆ 

19-07-21 11:22 am       Mangaluru Correspondent   ಕರಾವಳಿ

ಆಡಿಯೋ ಬಾಂಬ್ ಆಗಿ ತಿರುಗುಬಾಣವಾಗುತ್ತಿದ್ದಂತೆ ಅದರ ಬಗ್ಗೆ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. 

ಮಂಗಳೂರು, ಜುಲೈ 19: ಬಿ.ಜೆ.ಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಎಬ್ಬಿಸಿದೆ. ಆಡಿಯೋ ಬಾಂಬ್ ಆಗಿ ತಿರುಗುಬಾಣವಾಗುತ್ತಿದ್ದಂತೆ ಅದರ ಬಗ್ಗೆ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. 

ಆಡಿಯೋಗು ನನಗೂ ಯಾವುದೇ ಸಂಬಂಧವಿಲ್ಲ. ನನ್ನ ಹೆಸರಲ್ಲಿ ಯಾರೋ ಕಿಡಿಗೇಡಿಗಳು ಆಡಿಯೋ ಸೃಷ್ಟಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಪತ್ರ ಬರೆಯುತ್ತೇನೆ.‌ ಈ ಬಗ್ಗೆ ತನಿಖೆಯಾಗಲಿ. ತನಿಖೆಯ ಬಳಿಕ ಆಡಿಯೋದ ಸತ್ಯಾಸತ್ಯತೆ ಹೊರ ಬರಲಿದೆ ಎಂದು ಹೇಳಿದ್ದಾರೆ. ‌

ನಾಯಕತ್ವ ಬದಲಾವಣೆ ಕುರಿತು ನಮ್ಮಲ್ಲಿ ಯಾವುದೇ ಚರ್ಚೆಗಳಿಲ್ಲ. ನಮ್ಮ ಪಕ್ಷಕ್ಕೆ ಯಡಿಯೂರಪ್ಪ ಆತ್ಮ ಇದ್ದಂತೆ.‌ ಯಡಿಯೂರಪ್ಪ ನಮ್ಮ ಸರ್ವ ಸಮ್ಮತದ ನಾಯಕ.‌ ಹಿರಿಯರಾದ ಈಶ್ವರಪ್ಪ ಮತ್ತು ಜಗದೀಶ್ ಶೆಟ್ಟರ್ ಪಾರ್ಟಿಯ ಎರಡು ಕಣ್ಣುಗಳು ಇದ್ದಂತೆ ಎಂದು ಹೇಳಿಕೊಂಡಿದ್ದಾರೆ.

ಆಡಿಯೋ ಯಾರು ಸೃಷ್ಟಿಸಿದ್ದಾರೆ ಎಂಬ ಬಗ್ಗೆ ತನಿಖೆಯಾಗದೇ ಯಾರ ಬಗ್ಗೆಯೂ ಸಂಶಯ ವ್ಯಕ್ತಪಡಿಸಲ್ಲ. ಯಾರು ಮಾಡಿದ್ದಾರೋ ಗೊತ್ತಿಲ್ಲ. ತನಿಖೆ ಮೂಲಕ ಸತ್ಯ ಹೊರಬರಲಿ. ಎಲ್ಲದಕ್ಕೂ ತನಿಖೆಯ ಬಳಿಕ ಉತ್ತರ ನೀಡ್ತೇನೆ. ಇವತ್ತು ಅಧಿವೇಶನಕ್ಕೆ ಹೋಗ್ತಾ ಇದ್ದೇನೆ.‌ ಆಡಿಯೋ ಬಗ್ಗೆ ನ್ಯಾಯಾಲಯದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಿದ್ದೇನೆ ಎಂದು ಮಂಗಳೂರಿನ ಸರ್ಕಿಟ್ ಹೌಸ್ ನಲ್ಲಿ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.

Big Breaking: ಯಾರಿಗೂ ಹೇಳಬೇಡಿ,  ಈಶ್ವರಪ್ಪ, ಶೆಟ್ಟರ್‌ ಗ್ಯಾಂಗ್‌ ಹೊರಬೀಳಲಿದ್ದಾರೆ ; ರಾಜ್ಯ ರಾಜಕಾರಣಕ್ಕೆ ನಳಿನ್‌ ಕುಮಾರ್ ಆಡಿಯೋ ಬಾಂಬ್ !! 

Naleen Kuamar Kateel in Mangalore clarifies about his audio clipping stating the audio is Fake and denied any association with the recording. He also added that a Letter will be written to CM asking to Probe the audio tape.