ಬ್ರೇಕಿಂಗ್ ನ್ಯೂಸ್
19-07-21 11:15 pm Udupi Correspondent ಕರಾವಳಿ
ಉಡುಪಿ, ಜುಲೈ 19: ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಶ್ರೀ ವಿದ್ಯಾಧಿರಾಜ ತೀರ್ಥ (76) ಸ್ವಾಮೀಜಿಯವರು ಇಂದು ಬೆಳಗ್ಗೆ ಹರಿಪಾದ ಸೇರಿದ್ದಾರೆ.
ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪ್ರಮುಖ ಪೀಠಗಳಲ್ಲಿ ಒಂದಾದ ಶ್ರೀ ಗೋಕರ್ಣ ಪರ್ತಗಾಳೀ ಜೀವೋತ್ತಮ ಮಠವು ಶ್ರೀನಾರಾಯಣತೀರ್ಥರಿಂದ ಪ್ರವರ್ತಿತವಾದ ಮಠ. ಶ್ರೀರಾಮ ಹಾಗೂ ಶ್ರೀವೀರವಿಠ್ಠಲ ದೇವರನ್ನು ಮಠದ ಪ್ರಧಾನ ದೇವರಾಗಿ ಪೂಜಿಸುತ್ತಾ ಬಂದಿದ್ದಾರೆ.
ಶ್ರೀ ಮಠದ ಪರಂಪರೆಯಲ್ಲಿ ಐವತ್ತಕ್ಕೂ ಹೆಚ್ಚಿನ ಚಾತುರ್ಮಾಸಗಳನ್ನು ಆಚರಿಸಿರುವ ಶ್ರೀವಿದ್ಯಾಧಿರಾಜ ತೀರ್ಥರದು ಶ್ರೀಮಠದ ಪರಂಪರೆಯಲ್ಲಿ ಅತ್ಯಂತ ವಿಶಿಷ್ಟವಾದ ಸಾಧನೆ. ಶ್ರೀಸೇನಾಪುರ ಲಕ್ಷ್ಮೀನಾರಾಯಣಾಚಾರ್ಯ ದಂಪತಿಯ ಸುಪುತ್ರರಾಗಿ ಉಡುಪಿಯ ಸಮೀಪದ ಗಂಗೊಳ್ಳಿಯಲ್ಲಿ ಜನಿಸಿದ ಶ್ರೀಗಳ ಪೂರ್ವಾಶ್ರಮದ ಹೆಸರು ರಾಘವೇಂದ್ರ. ಶ್ರೀ ದ್ವಾರಕಾನಾಥ ತೀರ್ಥರಿಂದ 1967ರ ಫೆಬ್ರವರಿ 26ರಂದು ಸಂನ್ಯಾಸದೀಕ್ಷೆಯನ್ನು ಸ್ವೀಕರಿಸಿದ ಶ್ರೀ ರಾಘವೇಂದ್ರ ಬಳಿಕ ಶ್ರೀವಿದ್ಯಾಧಿರಾಜ ತೀರ್ಥರಾದರು.
1973ರಲ್ಲಿ ಶ್ರೀದ್ವಾರಕಾನಾಥ ತೀರ್ಥರು ಪರಂಧಾಮವನ್ನು ಸೇರುವವರೆಗೂ ತಮ್ಮಗುರುಗಳ ಬಳಿಯಲ್ಲಿ ಅಧ್ಯಯನ ನಡೆಸಿದ ಶ್ರೀವಿದ್ಯಾಧಿರಾಜರು 1973ರ ಏಪ್ರಿಲ್ 5ರಂದು ಶ್ರೀಮಠದ ಅಧಿಕಾರವನ್ನು ಸ್ವೀಕರಿಸಿದರು. ಪೀಠಾರೋಹಣದ ನಂತರ ಶಾಖಾಮಠಗಳ ಜೀರ್ಣೋದ್ಧಾರ, ದೇಗುಲಗಳ ನಿರ್ಮಾಣ, ಮೂಲಮಠದ ನವೀಕರಣ, ದಾಮೋದರ ಕುಂಡವೂ ಸೇರಿದಂತೆ ಅನೇಕ ಹಿಮಾಲಯದ ದುರ್ಗಮ ಪ್ರದೇಶಗಳ ಸಂದರ್ಶನ, ಗಂಗೋತ್ರಿಯಿಂದ ಗಂಗಾಸಾಗರ ಸಂಗಮದ ವರೆಗಿನ ಯಾತ್ರೆ, ಗಂಡಕೀ ಯಾತ್ರೆಯೂ ಸೇರಿದಂತೆ ಅಷ್ಟೋತ್ಕೃಷ್ಟ ವೈಷ್ಣವ ಕ್ಷೇತ್ರ ಸಂದರ್ಶನ (ಪಾದಯಾತ್ರೆ) ಯಜ್ಞ, ಕೋಟಿ ಶ್ರೀರಾಮನಾಮ ಯಜ್ಞ, ಶತಕೋಟಿ ರಾಮನಾಮ ಯಜ್ಞ, ಮಹಾವಿಷ್ಣುಯಾಗ ಮೊದಲಾದ ಯಾಗಗಳ ನೇತೃತ್ವ, ಅಯೋಧ್ಯ, ಮಥುರಾ, ಕಂಚಿ ಮೊದಲಾದ ಸಪ್ತ ಮೋಕ್ಷದಾಯಕ ಕ್ಷೇತ್ರಗಳ ಸಂದರ್ಶನ, ಬದರೀ ಕ್ಷೇತ್ರದಲ್ಲಿ ಚಾತುರ್ಮಾಸ ಹೀಗೆ ಹಲವು ಹತ್ತು ವೈಷ್ಣವ ಕಾರ್ಯಗಳಲ್ಲಿ ಸದಾ ತತ್ಪರರಾದ ಶ್ರೀಸ್ವಾಮಿಗಳು ಆಸೇತು ಹಿಮಾಲಯ (ನೇಪಾಳದೇಶವೂ ಸೇರಿದಂತೆ) ಭಾರತವನ್ನು ಸಂಚರಿಸಿದ್ದಾರೆ. ಶ್ರೀಗಳು 4-7-1998ರಲ್ಲಿ ಉಡುಪಿಯ ಸಮೀಪದ ಕಲ್ಯಾಣಪುರದಲ್ಲಿ ಮಾಧ್ವ ತತ್ತ್ವಜ್ಞಾನದ ಮೇರುಕೃತಿ ಶ್ರೀಜಯತೀರ್ಥರ 'ಶ್ರೀಮನ್ನ್ಯಾಯಸುಧಾ' ಮಂಗಳ ಮಹೋತ್ಸವವನ್ನು ನೆರವೇರಿಸಿದರು. ಪಲಿಮಾರು, ಭಂಡಾರಕೇರಿ ಮಠಾಧೀಶರಾದ, ಮಾಧ್ವ ತತ್ತ್ವಜ್ಞಾನದ ಮಹಾವಿದ್ವಾಂಸರಾದ ಶ್ರೀವಿದ್ಯಾಮಾನ್ಯ ತೀರ್ಥ ಶ್ರೀಪಾದಂಗಳವರು ಈ ಮಂಗಳಮಹೋತ್ಸವದಲ್ಲಿ ಭಾಗವಹಿಸಿದ್ದರು. ಸಂಸ್ಕೃತ ಭಾಷೆಯಲ್ಲಿ ಅದ್ವಿತೀಯ ಪಾಂಡಿತ್ಯವನ್ನು ಹೊಂದಿದ್ದರು.
Saddened by the demise of H.H. Shrimad Vidyadhiraj Teerth Sripad Vader Swamiji of the Shree Samsthan Gokarn Partagali Jeevottam Math. He will be remembered for his extensive service to society, particularly in healthcare. Condolences to his countless followers. Om Shanti.
— Narendra Modi (@narendramodi) July 19, 2021
The Prime Minister Narendra Modi has expressed grief over the demise of H.H. Shrimad Vidyadhiraj Teerth Sripad Vader Swamiji of the Shree Samsthan Gokarn Partagali Jeevottam Math.In a tweet, the Prime Minister said, “Saddened by the demise of H.H. Shrimad Vidyadhiraj Teerth Sripad Vader Swamiji of the Shree Samsthan Gokarn Partagali Jeevottam Math. He will be remembered for his extensive service to society, particularly in healthcare. Condolences to his countless followers. Om Shanti.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm