ಬ್ರೇಕಿಂಗ್ ನ್ಯೂಸ್
21-07-21 12:54 pm Mangalore Correspondent ಕರಾವಳಿ
ಮಂಗಳೂರು, ಜು.21 : ನಕಲಿ ಪಾಸ್‌ಪೋರ್ಟ್ ಪ್ರಕರಣದ ಆರೋಪಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮುರಲೀಧರ ಪೈ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಕಾಸರಗೋಡು ಜಿಲ್ಲೆಯ ಕಾಞಂಗಾಡ್ ನಿವಾಸಿ ಅಬ್ದುಲ್ ಬಶೀರ್ (45) ಶಿಕ್ಷೆಗೊಳಗಾದ ಆರೋಪಿ.
2010ರ ಆಗಸ್ಟ್ 17ರಂದು ಬೇರೊಬ್ಬರ ಪಾಸ್‌ಪೋರ್ಟ್‌ಗೆ ತನ್ನ ಭಾವಚಿತ್ರವನ್ನು ಲಗತ್ತಿಸಿ ಮಂಗಳೂರು ವಿಮಾನ ನಿಲ್ದಾಣದ ಮೂಲಕ ದುಬೈಗೆ ತೆರಳಿದ್ದ. ದುಬೈನಲ್ಲಿ ಇಮಿಗ್ರೇಷನ್ ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭ ಸಿಕ್ಕಿಬಿದ್ದಿದ್ದು ಬಳಿಕ ಮಂಗಳೂರಿಗೆ ವಾಪಸ್ ಕಳುಹಿಸಿದ್ದರು. ಇಲ್ಲಿ ಪಾಸ್‌ಪೋರ್ಟ್ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಸಹಕರಿಸಿದ ಉಕ್ಕಾಸ್, ಮುಹಮ್ಮದ್ ಕುಂಞಿ ಮತ್ತು ಮುನೀರ್ ಕೆ. ಎಂಬವರ ವಿರುದ್ಧ ಕೂಡ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ಅಬ್ದುಲ್ ಬಶೀರ್ ವಿಚಾರಣೆಗೆ ಹಾಜರಾಗಿದ್ದ. ಉಳಿದವರು ತಲೆಮರೆಸಿಕೊಂಡಿದ್ದರು. ಹಾಗಾಗಿ ಪ್ರಕರಣವನ್ನು ವಿಭಜಿಸಿ ಅಬ್ದುಲ್ ಬಶೀರ್‌ನನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಹಿರಿಯ ನ್ಯಾಯಿಕ ದಂಡಾಧಿಕಾರಿ 2019ರ ಫೆಬ್ರವರಿ 19ರಂದು ಅಬ್ದುಲ್ ಬಶೀರ್ ಬಿಡುಗಡೆಗೆ ಆದೇಶಿಸಿದ್ದರು. ಈ ಆದೇಶ ಪ್ರಶ್ನಿಸಿ ಸರಕಾರದ ಪರವಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.
ಮೇಲ್ಮನವಿಯನ್ನು ಭಾಗಶಃ ಪುರಸ್ಕರಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮುರಲೀಧರ ಪೈ ಬಿ. ಆರೋಪಿಗೆ ನಾಲ್ಕು ಅಪರಾಧಗಳಿಗೆ ತಲಾ ಒಂದು ವರ್ಷ ಶಿಕ್ಷೆ ಮತ್ತು 1,000 ರೂ. ದಂಡ ವಿಧಿಸಿ (ಏಕಕಾಲದಲ್ಲಿ ಅನುಭವಿಸುವಂತೆ) ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ರಾಜು ಪೂಜಾರಿ ಬನ್ನಾಡಿ ವಾದಿಸಿದ್ದಾರೆ.
The chief district and sessions court here has awarded punishment to a person who was accused of using a fake passport after the charge was found to have been proved. Judge of the court, Muraleedhar Pai, announced the judgment. The person who was found guilty and sentenced in the case happens to be Abdul Basheer alias Basheer (45), residing near Kanhangad beach in Kasargod district.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm