ಬ್ರೇಕಿಂಗ್ ನ್ಯೂಸ್
22-07-21 09:52 pm Mangaluru Correspondent ಕರಾವಳಿ
ಮಂಗಳೂರು, ಜುಲೈ 22: ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರನ್ನು ನೋಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಂಗಳೂರಿಗೆ ಆಗಮಿಸಿದ್ದರು. ಆಸ್ಕರ್ ಆರೋಗ್ಯದ ಬಗ್ಗೆ ಪತ್ನಿ ಬ್ಲಾಸಮ್ ಮತ್ತು ಕುಟುಂಬಸ್ಥರ ಜೊತೆ ಡಿಕೆಶಿ ಹಾಗು ಸಿದ್ದರಾಮಯ್ಯ ಮಾತುಕತೆ ನಡೆಸಿದರು.
ಈ ವೇಳೆ, ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್, ಮಾಧ್ಯಮಗಳಲ್ಲಿ ಬರುತ್ತಿರುವಷ್ಟು ಆರೋಗ್ಯ ಹದಗೆಟ್ಟಿಲ್ಲ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ತಜ್ಞ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ದೆಹಲಿಗೆ ಕರೆದುಕೊಂಡು ಹೋಗಿ ಏಮ್ಸ್ ನಲ್ಲಿ ಚಿಕಿತ್ಸೆ ಕೊಡಿಸಬೇಕೆಂಬ ಅಭಿಪ್ರಾಯಗಳಿದ್ದವು. ಆದರೆ, ಅಂಥಾ ಅಗತ್ಯ ಕಂಡುಬಂದಿಲ್ಲ. ದೇಶದ ವಿವಿಧ ಕಡೆಯಿಂದಲೇ ಮಂಗಳೂರಿನ ಆಸ್ಪತ್ರೆಗೆ ಬರುತ್ತಾರೆ. ಹಾಗಿದ್ದ ಮೇಲೆ ಇಲ್ಲಿಂದ ಕರೆದೊಯ್ಯಬೇಕೆಂಬ ಅವಶ್ಯಕತೆ ಇಲ್ಲ ಎಂದು ಹೇಳಿದರು.
ವಲಸೆ ಶಾಸಕರು ಸಿಎಂ ಭೇಟಿ ಮಾಡಿರುವ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಅವರು ಈಗ ವಲಸೆ ಶಾಸಕರಲ್ಲ. ಈಗ ಬಿಜೆಪಿ ಶಾಸಕರು ಮತ್ತು ಸಚಿವರಾಗಿದ್ದಾರೆ. ಅವರು ಮೀಟಿಂಗ್ ಮಾಡಿ, ಯಾರನ್ನ ಭೇಟಿ ಮಾಡಿದ್ರೂ ಅದಕ್ಕೂ ನಮಗೂ ಸಂಬಂಧವಿಲ್ಲ ಎಂದರು.
ವಲಸೆ ಶಾಸಕರು ಮರಳಿ ಪಕ್ಷಕ್ಕೆ ಬರುತ್ತಾರೆಯೇ ಎಂದು ಕೇಳಿದ್ದಕ್ಕೆ, ಅದರ ಬಗ್ಗೆ ನಾನು ಈಗ ಏನನ್ನೂ ಹೇಳಲ್ಲ. ಅದಕ್ಕೆಲ್ಲಾ ಇನ್ನೂ ಸಮಯವಿದೆ. ಮುಂದೆ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನಿಮಗೂ ಸಿಗಲಿದೆ. ನಾನು ಕೂಡ ಉತ್ತರ ಕೊಡುತ್ತೇನೆ ಎಂದರು.
ಇದೇ ವೇಳೆ, ಸಿದ್ದರಾಮಯ್ಯ ಮಾತನಾಡಿ ಆಸ್ಕರ್ ಫೆರ್ನಾಂಡಿಸ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ನುರಿತ ವೈದ್ಯರು ಅವರನ್ನು ನೋಡುತ್ತಿದ್ದಾರೆ. ದೆಹಲಿಗೆ ಕರೆದೊಯ್ಯಬೇಕೇ ಬೇಡವೇ ಎನ್ನುವ ಬಗ್ಗೆ ವೈದ್ಯರು ನಿರ್ಧಾರ ಮಾಡುತ್ತಾರೆ. ನಾವು ಎಕ್ಸ್‌ಪರ್ಟ್ ಗಳಲ್ಲ. ಆದ್ರಿಂದ ನಾವು ಅದನ್ನು ನಿರ್ಧಾರ ಮಾಡಲು ಆಗಲ್ಲ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇಲ್ಲಿಗೆ ಬರುವ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಹೇಳಿದರು.
Mangalore Oscar Fernandes remains critical DK Shivakumar and Siddaramaiah visited the hospital. A few days after he was admitted to a private hospital in Karnataka’s Mangaluru following a fall at home in which he sustained internal injuries, senior Congress leader and former Union minister Oscar Fernandes.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm