ಬ್ರೇಕಿಂಗ್ ನ್ಯೂಸ್
24-07-21 02:49 pm Mangalore Correspondent ಕರಾವಳಿ
ಮಂಗಳೂರು, ಜುಲೈ 24 : ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ಆತ್ಮೀಯರೊಂದಿಗೆ ಮಾತನಾಡಿರುವ ಆಡಿಯೋ ವೈರಲ್ ಆಗಿರುವ ಪ್ರಕರಣ ಸಂಬಂಧಿಸಿ ಮಾಜಿ ಸಚಿವ ರಮಾನಾಥ ರೈ ವ್ಯಂಗ್ಯ ಮಾತುಗಳಿಂದ ಚುಚ್ಚಿದ್ದಾರೆ. ಇವರು ಆತ್ಮೀಯರಲ್ಲಿ ‘ಏನಾದರು ಕೊಡುವುದಿದ್ದರೆ ಈಗ ಕೊಡುವುದು ಬೇಡ, ಮುಖ್ಯಮಂತ್ರಿ ಬದಲಾವಣೆ ಆಗುತ್ತಿದೆ’ ಎಂದಿರುವುದು ಜಿಲ್ಲೆಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರಕ್ಕೆ ಕನ್ನಡಿ ಹಿಡಿದಂತಿದೆ ಎಂದು ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಮಾನಾಥ ರೈ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದು ಬಿಜೆಪಿ ಅಧ್ಯಕ್ಷರ ಮಾತುಗಳಿಂದ ತಿಳಿದುಬರುತ್ತಿದೆ. ಆದರೆ, ಜಿಲ್ಲೆಯ ಶಾಸಕರ ಬಗ್ಗೆ ಕನಿಕರ ಆಗುತ್ತಿದೆ. ನಳಿನ್ ಕುಮಾರ್ 15 ವರ್ಷಗಳಿಂದ ಸಂಸದರಾಗಿದ್ದಾರೆ. ಈಗ ಬಿಜೆಪಿ ರಾಜ್ಯ ಅಧ್ಯಕ್ಷರೂ ಆಗಿದ್ದಾರೆ. ಇಂಥವರು ಧ್ವನಿಯನ್ನೇ ಗುರುತು ಹಿಡಿಯಲು ಸಾಧ್ಯವಾಗುತ್ತಿಲ್ಲ ಅಂದರೆ ಇವರು ಜನರ ಅಹವಾಲುಗಳಿಗೆ ಸ್ಪಂದಿಸಲು ಸಾಧ್ಯವೇ ? ಇವರು ಇಷ್ಟು ಕಾಲ ಜೊತೆಗಿದ್ದು ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದರು.
ವೈರಲ್ ಆದ ಆಡಿಯೋ ಕ್ಲಿಪ್ ಬಗ್ಗೆ ತನಿಖೆ ನಡೆಸಬೇಕೆಂದು ಬಿಜೆಪಿ ಶಾಸಕರ ನಿಯೋಗ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ತನಿಖೆಗೆ ಮನವಿ ಮಾಡಿ ಒಂದು ವಾರ ಆದರೂ ತನಿಖೆ ಏನಾಯ್ತೆಂದು ಫಲಿತಾಂಶ ಬಂದಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಯಸ್ಸಾದರೂ ನಳಿನ್ ಕುಮಾರ್ ಧ್ವನಿ ಗೊತ್ತಿದೆ. ಆದರೆ, ನಮ್ಮ ಜಿಲ್ಲೆಯ ಯುವ ಬಿಜೆಪಿ ಶಾಸಕರಿಗೆ ಗೊತ್ತಾಗದಿರುವುದು ವಿಪರ್ಯಾಸ ಎಂದವರು ಹೇಳಿದರು. ಅಲ್ಲದೆ, ಮಂಗಳೂರಿನ ಬುದ್ಧಿವಂತ ಪತ್ರಕರ್ತರಿಗೆ ನಳಿನ್ ಕುಮಾರ್ ಧ್ವನಿ ಪರಿಚಯ ಇದೆ. ನಳಿನ್ ಅವರ ವ್ಯಂಗ್ಯ ನಗುವನ್ನು ಯಾರಿಂದಲೂ ಮಿಮಿಕ್ರಿ ಮಾಡಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು.
ಕಮಿಷನರ್ ಯಾಕೆ ಸುಮ್ಮನಿದ್ದಾರೆ ?
ಮಂಗಳೂರು ಪೊಲೀಸ್ ಕಮಿಷನರ್ ಸಾಮಾಜಿಕ ಜಾಲತಾಣದ ಪ್ರಕರಣಗಳನ್ನು ಪತ್ತೆ ಮಾಡುವುದರಲ್ಲಿ ಎಕ್ಸ್ ಪರ್ಟ್ ಇದ್ದಾರೆ. ಸೋಶಿಯಲ್ ಮೀಡಿಯಾ ಪ್ರಕರಣಗಳಲ್ಲಿ ಈ ಹಿಂದೆ ಕೆಲವರನ್ನು ಒಳಗೆ ಕೂಡ ಹಾಕಿದ್ದಾರೆ. ಅಂತಹ ನಿಸ್ಸೀಮ ಪೊಲೀಸ್ ಆಯುಕ್ತರಿಗೆ ಈ ಪ್ರಕರಣ ಕಂಡುಹಿಡಿಯಲು ಕಷ್ಟ ಆಗುವುದಿಲ್ಲ. ಆಡಿಯೋ ವೈರಲ್ ಆಗಲು ಕಾಂಗ್ರೆಸ್ ಕೈವಾಡ ಇದೆ ಎಂದು ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಈಗ ಯಾಕೆ ತನಿಖೆ ಮಾಡಿಸಲು ಆಗಿಲ್ಲ ಎಂದರು ರೈ.
ಶಿಶು ಆಹಾರವನ್ನೇ ಕದಿಯುತ್ತಾರೆ..!
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಮಕ್ಕಳಿಗೆ ನೀಡುವ ಆಹಾರದಲ್ಲೂ ಭ್ರಷ್ಟಾಚಾರ ಮಾಡುತ್ತಿರವುದು ವರದಿಯಾಗಿದೆ. ಅಂಗನವಾಡಿ ಕಾರ್ಯಕ್ರಮ ತಂದವರು ಇಂದಿರಾಗಾಂಧಿ. ಅಲ್ಲಿ ಮಕ್ಕಳಿಗೆ ಮಾತ್ರವಲ್ಲ ಗರ್ಭಿಣಿ ಮಹಿಳೆಯರಿಗೂ ಪೌಷ್ಠಿಕ ಆಹಾರ ನೀಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಹಾಲು ಮತ್ತು ಮೊಟ್ಟೆ ನೀಡಲು ಆರಂಭಿಸಿತ್ತು. ಸಚಿವೆ ಜೊಲ್ಲೆ ಮತ್ತು ಬಿಜೆಪಿಯವರು ಸೇರಿ ಗರ್ಭಿಣಿ ಶಿಶುವಿನ ಆಹಾರವನ್ನು ಕದಿಯುವ ಹೀನಾಯ ಕೆಲಸ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಯಲಿ ಎಂದು ರಮಾನಾಥ ರೈ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕಾರ್ಪೊರೇಟರ್ ಅಬ್ದುಲ್ ರವೂಫ್, ಮಹಿಳಾ ಕಾಂಗ್ರೆಸ್ ನಾಯಕಿ ಕು.ಅಪ್ಪಿ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಬಿ. ಕಂಬಳಿ, ಕಾಂಗ್ರೆಸ್ ಮುಖಂಡ ಗಣೇಶ್ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಪ್ರ. ಕಾರ್ಯದರ್ಶಿಗಳಾದ ನೀರಜ್ ಚಂದ್ರ ಪಾಲ್, ಶಬ್ಬೀರ್ ಎಸ್, ನಝೀರ್ ಬಜಾಲ್, ಯುವ ಕಾಂಗ್ರೆಸ್ ಮುಖಂಡ ಆಶೀತ್ ಜಿ. ಪಿರೇರಾ, ಎನ್.ಎಸ್.ಯು.ಐ ಮುಖಂಡ ಫಾರೂಕ್ ಉಪಸ್ಥಿತರಿದ್ದರು.
Bjp Naleen Kumar kateel audio leak reveals how corrupted is BJP party slams congress leader Ramanath Rai in Mangalore. A 47-second audio clip, allegedly of Karnataka BJP president Nalin Kumar Kateel, created ripples in the political circles on Monday as it hinted at leadership change. Though Mr. Kateel denied it was his voice and sought a probe into the ‘fake’ clip, many party legislators, cutting across camps, took the contents at face value, triggering further speculation, disappointment and intense lobbying.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm