ಬ್ರೇಕಿಂಗ್ ನ್ಯೂಸ್
26-07-21 05:45 pm Mangalore Correspondent ಕರಾವಳಿ
ಮಂಗಳೂರು, ಜುಲೈ 26: ಆದಾಯ ಮೀರಿ ಅಪಾರ ಆಸ್ತಿ ಗಳಿಸಿದ್ದ ಮಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಟೌನ್ ಪ್ಲಾನಿಂಗ್ ಆಫೀಸರ್ ಬಿ.ಪಿ. ಶಿವರಾಜುಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಐದು ವರ್ಷಗಳ ಶಿಕ್ಷೆ ಘೋಷಣೆ ಮಾಡಿದೆ.
2007ರ ಜುಲೈ 25 ರಂದು ಆಗಿನ ಲೋಕಾಯುಕ್ತ ಇನ್ಸ್ಪೆಕ್ಟರ್ ಪ್ರಸನ್ನ ವಿ. ರಾಜು ಮಾಹಿತಿ ಕಲೆ ಹಾಕಿದ್ದು, ಆಗಿನ ಲೋಕಾಯುಕ್ತ ಉಪಾಧೀಕ್ಷಕ ಪ್ರಭುದೇವ ಮಾಣೆ ಮತ್ತು ಅವರ ತಂಡ ಟೌನ್ ಪ್ಲಾನಿಂಗ್ ಅಧಿಕಾರಿ ಶಿವರಾಜು ಕುರಿತ ವಿವಿಧ ಕಡೆಯ ಆಸ್ತಿಗಳಿಗೆ ದಾಳಿ ನಡೆಸಿತ್ತು. ದಾಳಿ ಬಳಿಕ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಸುಮಾರು ಮೂವತ್ತೆಂಟು ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾಗಿತ್ತು. ತನಿಖೆಯನ್ನು ಪೂರ್ಣಗೊಳಿಸಿ ಡಿವೈಎಸ್ಪಿ ಆಗಿದ್ದ ಡಾ. ಪ್ರಭುದೇವ್ ಮಾಣೆ ಆರೋಪಿ ಶಿವರಾಜು ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಅಭಿಯೋಜನೆಯ ಪರವಾಗಿ 27 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು ಹಾಗೂ 160 ದಾಖಲೆಗಳನ್ನು ಹಾಜರು ಪಡಿಸಲಾಗಿತ್ತು. ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್. ಎನ್. ರಾಜೇಶ್ ವಾದವನ್ನು ಪುರಸ್ಕರಿಸಿ, ಆರೋಪ ಸಾಬೀತಾಗಿದೆ ಎಂದು ತೀರ್ಮಾನಕ್ಕೆ ಬಂದಿದ್ದು, ಹದಿನೇಳು ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಸೇವೆಗೆ ಸೇರಿದ ವರ್ಷದಿಂದ ದಾಳಿ ನಡೆದ ದಿನಾಂಕದ ವರೆಗೆ ಆರೋಪಿ ಹೊಂದಿದ್ದ ಎಂದು ತೀರ್ಪು ನೀಡಿತ್ತು.
ಸುದೀರ್ಘ ವಿಚಾರಣೆ ಬಳಿಕ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ಇಂದು ಶಿಕ್ಷೆ ಪ್ರಕಟಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ಖಾಯಿದೆಯ ಕಲಂ 13 (1) (ಇ) ರ ಜೊತೆಗೆ 13(2) ರ ಅಡಿಯಲ್ಲಿ ಆರೋಪಿ ಶಿವರಾಜು ಅಪರಾಧ ಎಸಗಿದ್ದಾರೆಂದು 104 ಪುಟಗಳ ಆದೇಶದಲ್ಲಿ ತೀರ್ಪು ನೀಡಿದ್ದಾರೆ.
ಆರೋಪಿಯು ಅಸೌಖ್ಯದ ಕಾರಣ ನೀಡಿ ಶಿಕ್ಷೆ ಪ್ರಮಾಣ ಕಡಿಮೆ ಮಾಡಬೇಕೆಂದು ನ್ಯಾಯಾಲಯದಲ್ಲಿ ಬೇಡಿಕೆ ಸಲ್ಲಿಸಿದ್ದ. ಅದರೆ ವಿಶೇಷ ಸರಕಾರಿ ಅಭಿಯೋಜಕ ಪ್ರಬಲ ವಾದ ಮಂಡಿಸಿ ಭ್ರಷ್ಟಾಚಾರ ಪ್ರಕರಣವಾದ್ದರಿಂದ ಗರಿಷ್ಠ ಶಿಕ್ಷೆ ವಿಧಿಸುವಂತೆ ನ್ಯಾಯಾಲಯವನ್ನ ಕೋರಿದರು. ನ್ಯಾಯಾಧೀಶರು, ಅಪರಾಧಿಗೆ 5 ವರ್ಷ ಸಾದಾ ಸಜೆ ಮತ್ತು ರೂ 34,00,000/-ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ವರ್ಷ ಹೆಚ್ಚುವರಿ ಸಾದಾ ಸಜೆ ವಿಧಿಸಿದ್ದಾರೆ. ಅಲ್ಲದೆ, ತಮ್ಮ ಆದೇಶದಲ್ಲಿ ಭ್ರಷ್ಟಾಚಾರ ಎಂಬುದು ಸಮಾಜದಲ್ಲಿ ಕ್ಯಾನ್ಸರ್ ಪಿಡುಗಿನಂತೆ ಆಗಿದ್ದು ಅಪರಾಧಿಗೆ ಯಾವುದೇ ರಿಯಾಯಿತಿ ನೀಡುವುದು ಸರಿಯಲ್ಲ. ಮತ್ತು ಹದಿನಾಲ್ಕು ವರ್ಷಗಳಲ್ಲಿ ಅಕ್ರಮವಾಗಿ ರೂ. 17,00,000 ಆಸ್ತಿ ಮಾಡಿದ್ದರಿಂದ ಅದರ ಎರಡು ಪಟ್ಟು ದಂಡ ವಿಧಿಸುವುದು ಸೂಕ್ತ ಎಂದು 34,00,000 ರೂ. ದಂಡ ಪಾವತಿಸಲು ಆದೇಶಿಸಿದ್ದಾರೆ. ಭ್ರಷ್ಟಾಚಾರ ಪ್ರಕರಣಗಳಲ್ಲಿ ಅತ್ಯಂತ ಅಪರೂಪಕ್ಕೆ ಈ ರೀತಿಯ ಶಿಕ್ಷೆ ವಿಧಿಸಲಾಗಿದೆ. ಅಪರಾಧಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Mangalore city corporation Assistant Town planning BP Shivaraj found guilty in a corruption case in which Lokayukta court has ordered five years of jail term and fine of Rs 34 lakhs.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm