ಬ್ರೇಕಿಂಗ್ ನ್ಯೂಸ್
30-07-21 12:18 pm Mangaluru Correspondent ಕರಾವಳಿ
ಬಂಟ್ವಾಳ, ಜುಲೈ 30: ತಾಲೂಕಿನ ಬ್ರಹ್ಮರಕೂಟ್ಲು ಬಳಿಯ ಕಳ್ಳಿಗೆ ಗ್ರಾಮದಲ್ಲಿ ಯುವಕನೊಬ್ಬನ ಶವ ರೈಲು ಬಡಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕಳ್ಳಿಗೆ ಗ್ರಾಮದ ದೇವಂದಬೆಟ್ಟು ನಿವಾಸಿ ಕಾರ್ತಿಕ್ (25) ನಿನ್ನೆ ಸಂಜೆ ಮನೆಯಿಂದ ಹೊರಗೆ ತೆರಳಿದ್ದ. ರಾತ್ರಿ 11 ಗಂಟೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದ್ದರು. ಫೋನ್ ಕೂಡ ಸ್ವಿಚ್ ಆಫ್ ಆಗಿತ್ತು. ಮುಂಜಾನೆ 3 ಗಂಟೆಯ ವೇಳೆಗೆ ಕಾರ್ತಿಕ್ ಮೃತದೇಹ ಮನೆ ಬಳಿಯ ದೇವಂದಬೆಟ್ಟು ಪರಿಸರದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ರೈಲು ಬಡಿದು ದೂರಕ್ಕೆ ಎಸೆಯಲ್ಪಟ್ಟ ರೀತಿ ಶವ ಕಂಡುಬಂದಿದೆ. ಕೈ ತುಂಡಾಗಿ ದೂರಕ್ಕೆ ಬಿದ್ದಿದ್ದರೆ, ತಲೆಯ ಹಿಂಭಾಗ ಒಡೆದ ಸ್ಥಿತಿಯಲ್ಲಿ ದೇಹ ಮತ್ತೊಂದು ಕಡೆಗೆ ಬಿದ್ದಿತ್ತು.

ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಬಂದಿದ್ದು ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಸ್ಥಳೀಯರ ಬಳಿ, ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ಯಾರಾದ್ರೂ ರೈಲು ಹಳಿಗೆ ತಳ್ಳಿ ಕೊಲೆ ಮಾಡಿದ್ದಾರೆಯೇ ಎಂಬ ಪ್ರಶ್ನೆಗೆ ಸೂಕ್ತ ಉತ್ತರ ದೊರಕಿಲ್ಲ. ಕೊಲೆ ಅಥವಾ ಆತ್ಮಹತ್ಯೆ ಸಾಧ್ಯತೆ ಇಲ್ಲ ಎನ್ನುತ್ತಾರೆ ಸ್ಥಳೀಯರು. ಕಾರ್ತಿಕ್ ಸಾಮಾನ್ಯವಾಗಿ ಮನೆ ಬಳಿಯಿರುವ ರೈಲು ಹಳಿಯಲ್ಲಿ ಸಂಜೆ ಹೊತ್ತಿಗೆ ಕುಳಿತುಕೊಳ್ಳುವ ಅಭ್ಯಾಸ ಇಟ್ಟುಕೊಂಡಿದ್ದ. ಕಿವಿಗೆ ಇಯರ್ ಫೋನ್ ಹಾಕ್ಕೊಂಡು ಮಾತಾಡುತ್ತಿದ್ದ ವೇಳೆ ರೈಲು ಬಂದು ಡಿಕ್ಕಿಯಾಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ನೇರವಾಗಿ ಹಳಿಗೆ ಬೀಳುತ್ತಿದ್ದರೆ ಶವ ಪೂರ್ತಿ ಛಿದ್ರ ಆಗುತ್ತಿತ್ತು. ಇಲ್ಲಿ ರೈಲು ಬಡಿದು ದೂರಕ್ಕೆ ಎಸೆಯಲ್ಪಟ್ಟ ರೀತಿ ಶವ ಕಂಡುಬಂದಿದ್ದು ಅಕಸ್ಮಾತ್ ಘಟನೆ ಸಂಭವಿಸಿದ ಬಗ್ಗೆ ಸಂಶಯ ಕಂಡುಬಂದಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
The mortal remains of a youth was found on the railway track at Devandabettu here in the wee hours of Friday July 30. Suspicion behind the death is expressed by the family members of the deceased. The deceased has been identified as Karthik (25), son of Laxman of Kallige village.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm