ಬ್ರೇಕಿಂಗ್ ನ್ಯೂಸ್
30-07-21 10:43 pm Udupi Correspondent ಕರಾವಳಿ
ಉಡುಪಿ, ಜುಲೈ 30: ಸರಳ ಸಜ್ಜನ ರಾಜಕಾರಣಿ ಎಂದೇ ಹೆಸರು ಗಳಿಸಿರುವ ಕೋಟ ಶ್ರೀನಿವಾಸ ಪೂಜಾರಿಯವರು ತಮ್ಮ ಬಗ್ಗೆ ಆದಾಯಕ್ಕಿಂತ ಹೆಚ್ಚು ಗಳಿಕೆಯ ಟೀಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಮಾಡುತ್ತಿರುವ ಬಗ್ಗೆ ಲೋಕಾಯುಕ್ತಕ್ಕೆ ಪತ್ರ ಬರೆದಿದ್ದಾರೆ. ಮೂರು ಅವಧಿಗೆ ವಿಧಾನ ಪರಿಷತ್ ಸದಸ್ಯನಾಗಿದ್ದು ಎರಡು ಬಾರಿಗೆ ಕ್ಯಾಬಿನೆಟ್ ದರ್ಜೆಯ ಸಚಿವನಾಗಿದ್ದೆ. ತನ್ನ ಹುದ್ದೆಯ ಉದ್ದಕ್ಕೂ ಪಾರದರ್ಶಕ ಕೆಲಸ ಮಾಡಿದ್ದು ಯಾವುದೇ ರೀತಿಯ ಅಕ್ರಮ ನಡೆದಿದ್ದರೆ ತನಿಖೆ ನಡೆಸಿ ನನ್ನ ವಿರುದ್ಧ ಕ್ರಮ ಜರುಗಿಸಿ ಎಂದು ಪತ್ರ ಬರೆದು ಒತ್ತಾಯಿಸಿದ್ದಾರೆ.
ಕೋಟಾ ಶ್ರೀನಿವಾಸ ಪೂಜಾರಿಯವರು ತಮ್ಮ ಸ್ವಂತ ಊರಾದ ಕುಂದಾಪುರದ ಗಿಳಿಯಾರಿನಲ್ಲಿ 6 ಕೋಟಿ ಮೌಲ್ಯದ ಮನೆಯನ್ನು ಕಟ್ಟಿಸುತ್ತಿದ್ದು, ಇದು ಸರಳ ರಾಜಕಾರಣಿಯ ಲಕ್ಷಣವೇ ಎಂದು ಕೆಲವು ರಾಜಕೀಯ ವಿರೋಧಿಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ಹರಡುತ್ತಿರುವ ಸುದ್ದಿ ಅಪಪ್ರಚಾರದ ಬಗ್ಗೆ ನೊಂದಿರುವ ಕೋಟ ಶ್ರೀನಿವಾಸ ಪೂಜಾರಿಯವರು ತನ್ನ ಬಗ್ಗೆಯೇ ತನಿಖೆ ನಡೆಸುವಂತೆ ಕೋರಿ ಪತ್ರ ಬರೆದು ಹುಬ್ಬೇರಿಸಿದ್ದಾರೆ.
ಬೊಮ್ಮಾಯಿ ಸರಕಾರದಲ್ಲಿ ಸಚಿವ ಸಂಪುಟದ ವಿಸ್ತರಣೆ ಆಗುತ್ತಿರುವಾಗ ಸಾಮಾಜಿಕ ಜಾಲತಾಣದಲ್ಲಿ ಉದ್ದೇಶಪೂರ್ವಕ ಅಪಪ್ರಚಾರ ನಡೆಸುತ್ತಿದ್ದಾರೆಂದು ಕೋಟಾ ಶ್ರೀನಿವಾಸ ಪೂಜಾರಿ ಬೇಸರ ವ್ಯಕ್ತಪಡಿಸಿದ್ದು ತನ್ನ ಮೇಲೆಯೇ ತನಿಖೆ ಮಾಡುವಂತೆ ಲೋಕಾಯುಕ್ತ ನ್ಯಾಯಾಧೀಶ ವಿಶ್ವನಾಥ್ ಶೆಟ್ಟಿಗೆ ಪತ್ರ ಬರೆದಿದ್ದಾರೆ. ನಾನು ಮೂರು ಬಾರಿ ವಿಧಾನ ಪರಿಷತ್ ಶಾಸಕನಾಗಿ ಆಯ್ಕೆಯಾಗಿದ್ದು, ಎರಡು ಬಾರಿ ಸಂಪುಟ ದರ್ಜೆಯ ಮಂತ್ರಿಯಾಗಿದ್ದೇನೆ. ಪ್ರತಿ ವರ್ಷ ಲೋಕಾಯುಕ್ತರಿಗೆ ಆಸ್ತಿಪಾಸ್ತಿಯ ವಿವರ ನೀಡುತ್ತಿದ್ದೇನೆ. ಎರಡು ವರ್ಷದಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ಗಿಳಿಯಾರು ಗ್ರಾಮದಲ್ಲಿ ಮನೆ ಕಟ್ಟುತ್ತಿದ್ದು, ಜಾಗದ ತಕರಾರಿನಿಂದ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣ ಬಾಕಿಯಿದ್ದು, ಮನೆ ನಿರ್ಮಾಣ ಸ್ಥಗಿತವಾಗಿದೆ.
ನನ್ನ ಮಗ ಶಶಿಧರ ಎಂಬಿಎ ಮುಗಿಸಿ ಸ್ವಂತ ಉದ್ದಿಮೆ ನಡೆಸುತ್ತಿದ್ದಾನೆ. ಇಬ್ಬರು ಪುತ್ರಿಯರ ವಿದ್ಯಾಭ್ಯಾಸ ಅಂತಿಮ ಹಂತದಲ್ಲಿದೆ. ನನ್ನ ಮಗನ ಸ್ವಂತ ದುಡಿಮೆ ಮತ್ತು ನನ್ನ ದುಡಿಮೆಯ ಹಣದಲ್ಲಿ 60 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಾಣವಾಗುತ್ತಿದೆ. ಮನೆ ನಿರ್ಮಾಣಕ್ಕಾಗಿ ಎರಡು ವರ್ಷಗಳ ಹಿಂದೆ ಅಪೆಕ್ಸ್ ಬ್ಯಾಂಕಿನಲ್ಲಿ 35 ಲಕ್ಷ ಸಾಲ ಪಡೆದಿದ್ದು ನನ್ನ ಸಂಬಳ ಮತ್ತು ಗೌರವಧನದ ಮೂಲಕ ಸಾಲವನ್ನು ಮರುಪಾವತಿ ಮಾಡಿದ್ದೇನೆ. ಮನೆ ಕಟ್ಟಲು ಹಣ ಕಡಿಮೆಯಾಗಿದ್ದರಿಂದ ಮತ್ತೆ ಬ್ರಹ್ಮಾವರದ ವಾರಂಬಳ್ಳಿ ಎಸ್‌ಬಿಐ ಬ್ಯಾಂಕ್ ಶಾಖೆಯಲ್ಲಿ 40 ಲಕ್ಷ ಸಾಲಕ್ಕಾಗಿ ಅರ್ಜಿ ಹಾಕಿದ್ದು ಅಂತಿಮ ಹಂತದಲ್ಲಿದೆ.
ಹದಿಮೂರು ಸೆಂಟ್ಸ್ ಜಾಗದಲ್ಲಿ 60 ಲಕ್ಷ ರೂಪಾಯಿ ವೆಚ್ಚದಲ್ಲಿ ಸ್ವಂತ ಉದ್ದೇಶಕ್ಕೆ ಮಗ ಮತ್ತು ನಾನು ಸೇರಿ ಮನೆ ಕಟ್ಟುತ್ತಿದ್ದೇವೆ. ಆದರೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಇದು ಆರು ಕೋಟಿ ರೂಪಾಯಿ ಮೌಲ್ಯದ ಮನೆ ಅಂತಾ ಅಪಪ್ರಚಾರ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ನನ್ನ ಆದಾಯ ಮತ್ತು ಮನೆಯನ್ನು ಪರಿಶೀಲಿಸಿ, ಆದಾಯಕ್ಕಿಂತ ಹೆಚ್ಚು ವೆಚ್ಚದ ಮನೆಯಾಗಿದ್ದರೆ ಅಥವಾ ನನ್ನ ಖಾತೆಯಲ್ಲಿ ಆದಾಯಕ್ಕಿಂತ ಹೆಚ್ಚು ಹಣ ಇದ್ದರೆ ನನ್ನ ಮೇಲೆ ಕ್ರಮ ಕೈಗೊಳ್ಳಬೇಕು. ಅಥವಾ ನನ್ನ ಆದಾಯದ ವ್ಯಾಪ್ತಿಯಲ್ಲೇ ಮನೆ ನಿರ್ಮಾಣ ಆಗಿದ್ದರೆ, ಅಪಪ್ರಚಾರದ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿನಂತಿಸುತ್ತಿದ್ದೇನೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಲೋಕಾಯುಕ್ತರಿಗೆ ಪತ್ರ ಬರೆದಿದ್ದಾರೆ.
ಮನೆ ನಿರ್ಮಾಣ ವಿಚಾರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಯಾರೋ ಟೀಕಿಸಿದರೆಂದು ಅದನ್ನೇ ಗಂಭೀರವಾಗಿ ಪರಿಗಣಿಸಿದ ಶ್ರೀನಿವಾಸ ಪೂಜಾರಿ, ತನ್ನ ಮೇಲಿನ ಆರೋಪದ ಬಗ್ಗೆ ತನಿಖೆ ನಡೆಸುವಂತೆ ತಾನೇ ಲೋಕಾಯುಕ್ತಕ್ಕೆ ಪತ್ರ ಬರೆಯುವ ಮೂಲಕ ಅಚ್ಚರಿ ಸೃಷ್ಟಿಸಿದ್ದಾರೆ. ಈ ಕುರಿತು ಲೋಕಾಯುಕ್ತ ನ್ಯಾಯಮೂರ್ತಿ ಯಾವ ರೀತಿಯ ತನಿಖೆ ಕೈಗೊಳ್ಳುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ.
ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಕೋಟಾ ಶ್ರೀನಿವಾಸ ಪೂಜಾರಿ ಮುಜರಾಯಿ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಖಾತೆ ಸಚಿವರಾಗಿದ್ದರು
After few netizens alleged that minister for Hindu Religious Organisations, Endowments and Backward Class Welfare Department, Kota Srinivas Poojary is constructing a new house at cost of Rs 6 crore, the minister on Friday July 30 in a letter to Lokayukta urged for detailed probe on allegations levelled against him. In a letter written, Kota stated that he was appointed as the member of Legislative Council for three tenures, twice as minister in the state cabinet and once as the leader of opposition. “Being a representative, it is mandatory to provide details of assets to Lokayukta once in a year. But, rumours are being spread on social media about the house which has been under construction for the past two years.
28-11-24 10:41 pm
Bangalore Correspondent
Karkala Drowning, Udupi News; ಕಾರ್ಕಳದ ದುರ್ಗಾ...
28-11-24 09:41 pm
ಲಾಕಪ್ ಡೆತ್ ; ನಾಲ್ವರು ಪೊಲೀಸರಿಗೆ ಏಳು ವರ್ಷ ಜೈಲು...
28-11-24 05:04 pm
MLA Gaviyappa, DK Shivakumar: ಯಾವುದೇ ಕಾರಣಕ್ಕೂ...
26-11-24 10:46 pm
Shivamogga, Monkey fever, Dinesh Gundu Rao: ಮ...
26-11-24 10:23 pm
27-11-24 02:00 pm
HK News Desk
ರಸ್ತೆ ಬದಿ ಮಲಗಿದ್ದ ಅಲೆಮಾರಿ ಗುಂಪಿನ ಮೇಲಿಂದ ಹರಿದ...
27-11-24 12:36 pm
ಕ್ಯುಆರ್ ಕೋಡ್ ಸಹಿತ ಹೊಸ ನಮೂನೆಯ ಪ್ಯಾನ್ 2.0 ಜಾರಿ...
26-11-24 09:43 pm
BJP Devendra Fadnavis, Eknath Shinde: ಮಹಾರಾಷ್...
26-11-24 07:32 pm
ಪ್ರವಾಸೋದ್ಯಮ ಇಲಾಖೆಗೆ ನಿಗದಿಪಡಿಸಿದ್ದ ದರ್ಶನ ಟಿಕೆಟ...
23-11-24 11:07 pm
28-11-24 09:58 pm
Mangalore Correspondent
Mangalore, DFYI protest, Anupam Agarwal: ಪೊಲೀ...
28-11-24 06:05 pm
VHP, Mangalore, Bangladesh: ಬಾಂಗ್ಲಾದೇಶದಲ್ಲಿ ಹ...
28-11-24 03:24 pm
Belthangady suicide, Crime, Mangalore; ನಂಬಿಸಿ...
28-11-24 02:13 pm
Mangalore, Anupam Agarwal, Ramanatha Rai: ರಸ್...
28-11-24 01:56 pm
27-11-24 03:36 pm
HK News Desk
Mangalore, Robbery, Crime : ಕೊಲ್ಯದ ಜಾಯ್ ಲ್ಯಾಂ...
27-11-24 01:11 pm
Mangalore crime, ACP Dhanya Nayak, Drugs: ಎಸಿ...
26-11-24 03:10 pm
ಹುಬ್ಬಳ್ಳಿ ದರೋಡೆ ಪ್ರಕರಣದಲ್ಲಿ ಮಂಗಳೂರು ನಂಟು ; ಉಳ...
25-11-24 06:17 pm
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm