ಬ್ರೇಕಿಂಗ್ ನ್ಯೂಸ್
01-08-21 04:15 pm Mangaluru Correspondent ಕರಾವಳಿ
ಮಂಗಳೂರು, ಆ.1: ಒಂದೆಡೆ ಕೊರೊನಾ 3ನೇ ಅಲೆಯ ನೆಪದಲ್ಲಿ ಕೋವಿಡ್ ನಿಯಮಗಳನ್ನು ಜಿಲ್ಲಾಡಳಿತ ಹೇರಿದ್ದು ಸಭೆ, ಸಮಾರಂಭಗಳನ್ನು ನಿಷೇಧಿಸಿದೆ. ಆದರೆ, ಜಿಲ್ಲಾಡಳಿತದ ನಿಯಮವನ್ನೇ ಉಲ್ಲಂಘಿಸಿ ಕಾಂಗ್ರೆಸ್ ಕಚೇರಿಯಲ್ಲಿ ಅದ್ದೂರಿ ಪದಗ್ರಹಣ ಕಾರ್ಯಕ್ರಮ ನಡೆಸಲಾಗಿದೆ.
ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಘಟಕದ ಪದಗ್ರಹಣ ಸಮಾರಂಭ ನಡೆಸಲಾಗಿದ್ದು ಕೋವಿಡ್ ನಿಯಮ ಅನುಸರಿಸದೆ ಇನ್ನೂರಕ್ಕೂ ಹೆಚ್ಚು ಜನರು ಸೇರಿದ್ದಾರೆ.




ರಾಜಕೀಯ ಸಮಾರಂಭಗಳಿಗೆ ನಿರ್ಬಂಧ ವಿಧಿಸಿದ್ದರೂ ಕ್ಯಾರೇ ಅನ್ನದೇ ಕಾರ್ಯಕ್ರಮ ನಡೆಸಿದ್ದು ನೂರಾರು ಕಾರ್ಯಕರ್ತರು ಸಾಮಾಜಿಕ ಅಂತರ ಮರೆತು ಕಾರ್ಯಕ್ರಮ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡರಾದ ಬಿ.ಕೆ.ಹರಿಪ್ರಸಾದ್, ಐವನ್ ಡಿಸೋಜಾ, ಮೊಯಿದ್ದೀನ್ ಬಾವಾ ಸೇರಿ ಹಲವರು ಭಾಗಿಯಾಗಿದ್ದರು. ಹಿಂದುಳಿದ ವರ್ಗದ ಘಟಕದ ಅಧ್ಯಕ್ಷರಾಗಿ ವಿಶ್ವಾಸ್ ಕುಮಾರ್ ದಾಸ್ ನೇಮಕಗೊಂಡಿದ್ದು ನೂತನ ಪದಾಧಿಕಾರಿಗಳ ಪದಗ್ರಹಣಕ್ಕಾಗಿ ಸಮಾರಂಭ ಏರ್ಪಡಿಸಲಾಗಿತ್ತು. ವೇದಿಕೆಯಲ್ಲೂ ಸಾಮಾಜಿಕ ಅಂತರವಿಲ್ಲದೇ ಹತ್ತಾರು ನಾಯಕರು ಸೇರಿದ್ದರು.
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 10ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಭೆ ಸಮಾರಂಭಗಳಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಎಲ್ಲ ರೀತಿಯ ಕಾರ್ಯಕ್ರಮ ನಿಷೇಧಿಸಿ ನಿನ್ನೆಯಷ್ಟೇ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದರು. ಇದೇ ಹಿನ್ನೆಲೆಯಲ್ಲಿ ನಗರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಟಿಯನ್ನು ರದ್ದು ಪಡಿಸಲಾಗಿತ್ತು. ಇದೀಗ ಡಿಸಿ ಆದೇಶ ಉಲ್ಲಂಘಿಸಿ ಅದ್ದೂರಿ ಪದಗ್ರಹಣ ಕಾರ್ಯಕ್ರಮ ನಡೆಸಿದ್ದು ಕೈ ನಾಯಕರ ವಿರುದ್ಧ ಜಿಲ್ಲಾಡಳಿತ ಯಾವ ರೀತಿಯ ಕ್ರಮ ಕೈಗೊಳ್ಳುತ್ತೆ ಎಂದು ಕಾದು ನೋಡಬೇಕು.
Congress leaders break covid 19 rules hundreds gathered amid no permission for political program. The program was held at Congress Bhavan at Mallikate in Mangalore.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm