ಬ್ರೇಕಿಂಗ್ ನ್ಯೂಸ್
01-08-21 10:03 pm Mangaluru Correspondent ಕರಾವಳಿ
ಮಂಗಳೂರು, ಆ.1: ಕೇರಳ ಕಂಟಕ ಎನ್ನುವ ಆತಂಕದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣ ಕಂಡುಬಂದಿದೆ. ಆಗಸ್ಟ್ 1 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 410 ಪ್ರಕರಣಗಳು ದೃಢಪಟ್ಟಿದ್ದು ಆರು ಮಂದಿ ಮೃತಪಟ್ಟಿದ್ದಾರೆ. ಇದೇ ವೇಳೆ ಉಡುಪಿ ಜಿಲ್ಲೆಯಲ್ಲಿ 162 ಕೊರೊನಾ ಕೇಸ್ ದೃಢಪಟ್ಟಿದೆ. ಇಂದಿನ ದಕ್ಷಿಣ ಕನ್ನಡ ಜಿಲ್ಲೆಯ ರಿಪೋರ್ಟ್ ರಾಜ್ಯದ ಇತರ ಜಿಲ್ಲೆಗಳಿಗಿಂತ ಗರಿಷ್ಠವಾಗಿದ್ದು ಆತಂಕದ ಗಂಟೆ ಬಾರಿಸಿದೆ.
ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1430 ಮಂದಿ ಕೊರೊನಾ ಕಾರಣದಿಂದ ಮೃತಪಟ್ಟಿದ್ದಾರೆ. ಇದೇ ವೇಳೆ 2943 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಪ್ರಕರಣ ಹೆಚ್ಚಿತ್ತು. ಆದರೆ, ಇಂದಿನ ವರದಿಯಲ್ಲಿ ಬೆಂಗಳೂರಿನಲ್ಲಿ 400 ರ ಒಳಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ರೇಟಿಂಗ್ ಅದನ್ನು ಮೀರಿ ನಿಂತಿದೆ. ಹೀಗಾಗಿ ಕರಾವಳಿಯಲ್ಲಿ ಕೊರೊನಾ ಮತ್ತೆ ವ್ಯಾಪಕವಾಗಲಿದೆಯೇ ಎಂಬ ಆತಂಕ ಮನೆ ಮಾಡಿದೆ.
ಗಡಿಭಾಗ ಕೇರಳದಲ್ಲಿ ಕೊರೊನಾ ಪ್ರಕರಣ ತೀವ್ರ ಆಗಿರುವುದರಿಂದ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯತ್ತ ಹರಡುತ್ತಿದೆ ಎನ್ನುವ ಆತಂಕವಿದೆ. ಹೀಗಾಗಿ ಗಡಿಭಾಗದಲ್ಲಿ ಕೇರಳದಿಂದ ಬರುವ ಮಂದಿಯ ಬಗ್ಗೆ ನಿಗಾ ಇಡಲಾಗಿದೆ. ಅಲ್ಲದೆ, ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಇಲ್ಲದೆ ಕಾಣಿಸಿಕೊಂಡವರ ಮೇಲೆ ದಂಡ ವಿಧಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಮಾಸ್ಕ್ ಇಲ್ಲದ 82634 ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಈವರೆಗೆ ಒಂದು ಕೋಟಿ 42 ಸಾವಿರ ರೂಪಾಯಿ ದಂಡ ಸಂಗ್ರಹಿಸಿದ್ದಾರೆ.
As per the bulletin released by the state health department, the active cases in the state stand at 24,144. Among the districts, Dakshina Kannada registered the highest number of single-day cases with 410 new infections, while Bengaluru Urban reported 409 new cases. As many as 25 deaths due to coronavirus were reported in the state on Sunday, with Bengaluru Urban and Dakshina Kannada recording 8 and 6 deaths respectively. With this, the toll so far has risen to 36,587.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm