ಬ್ರೇಕಿಂಗ್ ನ್ಯೂಸ್
03-08-21 06:05 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 3: ನೂತನ ಸಿಎಂ ಬೊಮ್ಮಾಯಿ ಸಂಪುಟಕ್ಕೆ ಹೊಸಬರು ಸೇರಲಿದ್ದಾರೆ ಎಂಬ ವದಂತಿ ದಟ್ಟವಾಗಿ ಹಬ್ಬಿದೆ. ಇನ್ನೆರಡು ದಿನದಲ್ಲಿ ಹೊಸ ಸಚಿವರು ಪ್ರಮಾಣವಚನ ಸ್ವೀಕರಿಸುತ್ತಾರೆ ಎನ್ನುವ ಮಾಹಿತಿಗಳೂ ಇವೆ. ಈ ನಡುವೆ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಗೆ ಮಂತ್ರಿಸ್ಥಾನ ಕೊಡಬೇಕು ಎಂಬ ಕೂಗು ಜೋರಾಗಿದೆ. ಹಾಲಾಡಿ ಅಭಿಮಾನಿಗಳು ಮಾಜಿ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರಿಗೆ ಬಹಿರಂಗ ಪತ್ರ ಬರೆದಿದ್ದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಮಾಡುವ ಮೂಲಕ ಅಭಿಮಾನ ಮೆರೆದಿದ್ದಾರೆ.
ಬೆಂಗಳೂರಿಗೆ ಹೋಗಿ ಯಾರದ್ದೋ ಕೈಕಾಲು ಹಿಡಿದು ಮಂತ್ರಿ ಸ್ಥಾನವನ್ನು ಕೇಳುವುದಿಲ್ಲ. ನನ್ನ ಉಸಿರು ಇದ್ದರೆ ನಾನು ಕಾಡಿಬೇಡಿ ಮಂತ್ರಿಯಾಗುವುದಿಲ್ಲ ಎಂದು ಹಾಲಾಡಿ ಶ್ರೀನಿವಾಸ್ ಶೆಟ್ಟಿ ಹೇಳಿಕೆ ನೀಡಿದ್ದಾರೆ. ಈ ನಡುವೆ ಹಾಲಾಡಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಗರಿಗೆ ಪತ್ರ ಅಭಿಯಾನ ನಡೆಸುತ್ತಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಬರೆದ ಪತ್ರದಲ್ಲಿ ಹಳೆಯ ಎಲ್ಲಾ ನೆನಪುಗಳನ್ನು ಕೆದಕಿದ್ದಾರೆ.


ಬೆಂಗಳೂರಿಗೆ ಕರೆಸಿ ಮಂತ್ರಿ ಸ್ಥಾನ ತಪ್ಪಿದಾಗ ಯಡಿಯೂರಪ್ಪ ಮಾತುಕತೆ ಮಾಡಿ ಸಿಹಿಸುದ್ದಿ ಕೊಡುವುದಾಗಿ ಹೇಳಿದ್ದರು. ಅದನ್ನು ಯಾಕೆ ಮರೆತಿದ್ದೀರಿ? ನೀವು ಕಿಂಗ್ ಮೇಕರ್. ಸದಾನಂದಗೌಡ, ಶೆಟ್ಟರ್, ಬೊಮ್ಮಾಯಿ ಅವರನ್ನು ಸಿಎಂ ಮಾಡಿದ್ದೀರಿ. ಹಾಲಾಡಿಯನ್ನು ಮಂತ್ರಿ ಮಾಡಬೇಕೆಂದು ಅನ್ನಿಸಲಿಲ್ಲವಾ? ಕೋಟಾ ಶ್ರೀನಿವಾಸ ಪೂಜಾರಿಗೆ ಸ್ಥಾನ ಕೊಟ್ಟದ್ದು ಯಾಕೆ ಎಂಬುದನ್ನು ನಾವು ಇನ್ನೂ ಮರೆತಿಲ್ಲ. ಶೋಭಾ ಕರಂದ್ಲಾಜೆಗೆ ಹಾಲಾಡಿ ಕ್ಷೇತ್ರದಲ್ಲಿ ಅತಿ ಹೆಚ್ಚು ಲೀಡ್ ಕೊಡಿಸಿದ್ದು ನಿಮಗೆ ಮರೆತುಹೋಯಿತೆ? ಹಾಲಾಡಿ ಜಿಲ್ಲೆಯ ಏಕೈಕ ಶಾಸಕರಾಗಿದ್ದ ದಿನಗಳನ್ನು ನೀವು ಮರೆಯಬೇಡಿ.
ಪಕ್ಷೇತರರಾಗಿದ್ದಾಗ ನಿರ್ಮಲಾ ಸೀತಾರಾಮನ್ ಗೆ ಮತ ಹಾಕಿದ್ದು ನಿಮಗೆ ನೆನಪಿಲ್ಲವೇ? ಹಾಲಾಡಿಗೆ ಸಚಿವ ಸ್ಥಾನ ಸಿಗದಿದ್ದರೆ ನಮಗೆ ಬೇಸರವಿಲ್ಲ. ಆದರೆ ಲಕ್ಷಾಂತರ ಮಂದಿಯ ಶಾಪ ನಿಮಗೆ ತಟ್ಟಲಿದೆ ಎಂದು ಅಭಿಮಾನಿಗಳು ಕಿಡಿಕಾರಿದ್ದಾರೆ. ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ಎಲ್ಲಾ ಕಡೆ ಓಡಾಡುತ್ತಿದೆ. ಕೆಲವು ಅಭಿಮಾನಿಗಳು ಪ್ರಿಂಟ್ ತೆಗೆದು ಯಡಿಯೂರಪ್ಪನವರಿಗೆ ಪೋಸ್ಟ್ ಮಾಡುತ್ತಿದ್ದಾರೆ.
ಡಿಯರ್ ಬಿಜೆಪಿ, ಮಂತ್ರಿಯಾಗಲೇಬೇಕು ಹಾಲಾಡಿ, ಇದು ನಮ್ಮ ಒಡಲ ನುಡಿ, ನೀವದನ್ನು ನಡೆಸಿಕೊಡಿ ಎನ್ನುವ ಟ್ಯಾಗ್ ಲೈನಲ್ಲಿ ಮಾಡಿರುವ ಅಭಿಯಾನ ಟೀಮ್ ಹಾಲಾಡಿ, ಥೀಮ್ ಹಾಲಾಡಿ ಹೆಸರಲ್ಲಿ ಭಾರೀ ವೈರಲ್ ಆಗಿದೆ.
Kundapur MLA Halady Srinivas Shetty fans have started twitter campaign stating has BJP party forgotten the good works of our leader on twitter.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 08:27 am
HK News Staffer
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm