ವೀಕೆಂಡ್ ಲಾಕ್ಡೌನ್ ; ಮಧ್ಯಾಹ್ನ 2 ಗಂಟೆ ವರೆಗೆ ಅಗತ್ಯ ಸಾಮಗ್ರಿ ಖರೀದಿಗೆ ಅವಕಾಶ 

06-08-21 09:05 pm       Mangaluru Correspondent   ಕರಾವಳಿ

ವೀಕೆಂಡ್ ಕರ್ಫ್ಯೂ ಇರುವ ಜಿಲ್ಲೆಗಳಲ್ಲಿ ಬೆಳಗ್ಗೆ 5ರಿಂದ ಮಧ್ಯಾಹ್ನ 2ರ ವರೆಗೆ ಅಗತ್ಯ ಸಾಮಗ್ರಿ ಖರೀದಿಗೆ ಮಾತ್ರ ಅವಕಾಶ ಇರಲಿದೆ.‌

ಮಂಗಳೂರು, ಆಗಸ್ಟ್ 6: ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ಗಡಿಭಾಗದ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ವೀಕೆಂಡ್ ಕರ್ಫ್ಯೂ ಇರುವ ಜಿಲ್ಲೆಗಳಲ್ಲಿ ಬೆಳಗ್ಗೆ 5ರಿಂದ ಮಧ್ಯಾಹ್ನ 2ರ ವರೆಗೆ ಅಗತ್ಯ ಸಾಮಗ್ರಿ ಖರೀದಿಗೆ ಮಾತ್ರ ಅವಕಾಶ ಇರಲಿದೆ.‌

ಪ್ರತಿದಿನವೂ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ವೀಕೆಂಡ್ ಕರ್ಫ್ಯೂ ಇರುವ ದಕ್ಷಿಣ ಕನ್ನಡ, ಕೊಡಗು, ಮೈಸೂರು ಸೇರಿ ಗಡಿಭಾಗದ ಜಿಲ್ಲೆಗಳಾದ ಬೀದರ್, ಬೆಳಗಾವಿ, ವಿಜಯಪುರ, ಕಲಬುರಗಿ, ಚಾಮರಾಜನಗರ ಜಿಲ್ಲೆಗಳಲ್ಲಿ ಶನಿವಾರ, ಭಾನುವಾರ ಪೂರ್ತಿ ಲಾಕ್ಡೌನ್ ಇರಲಿದೆ. 

ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಬೀದಿಬದಿ ವ್ಯಾಪಾರಿಗಳಿಗೆ ಮಧ್ಯಾಹ್ನ 2 ಗಂಟೆಯ ವರೆಗೆ ಅವಕಾಶ ನೀಡಿದೆ. ಅದೇ ರೀತಿ ಈ ಅವಧಿಯಲ್ಲಿ ಮದ್ಯವನ್ನು ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶವಿದೆ. 

ರೈಲು ಮತ್ತು ವಿಮಾನ ಪ್ರಯಾಣಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಈ ಭಾಗದಲ್ಲಿ ಟ್ಯಾಕ್ಸಿ ವಾಹನ ಬಳಕೆ ಮಾಡಲು ಅವಕಾಶ ನೀಡಲಾಗಿದೆ. 

ಈ ಅವಧಿಯಲ್ಲಿ ಮದುವೆ ಸಮಾರಂಭವನ್ನು 100 ಜನರು ಮೀರದಂತೆ ನಡೆಸಬಹುದು. ಅಂತ್ಯಕ್ರಿಯೆಯಲ್ಲಿ 20 ಜನರು ಭಾಗವಹಿಸಲು ಅವಕಾಶವಿದೆ.

ದಕ್ಷಿಣ ಕನ್ನಡ ಸೇರಿ ಎಂಟು ಜಿಲ್ಲೆಗಳಲ್ಲಿ ನಾಳೆಯಿಂದಲೇ ವೀಕೆಂಡ್ ಲಾಕ್ಡೌನ್ ; ರಾಜ್ಯದಲ್ಲಿ ನೈಟ್ ಕರ್ಫ್ಯೂ ಹೇರಿಕೆ

As per the order the night curfew will be imposed from 9 pm to 5 am in the state. There shall be weekend curfew in the districts bordering Maharashtra (Belagavi, Bidar, Vijaypura and Kalburagi) and Kerala (Dakshina Kannada, Kodagu, Mysuru and Chamarajanagar) from Friday 9 pm to Monday 5 am.