ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಹೋಗಿ ತಾಯಿ, ಮಗು ನೀರುಪಾಲು 

08-08-21 08:49 pm       Mangaluru Correspondent   ಕರಾವಳಿ

ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿ ಮಗುವಿನೊಂದಿಗೆ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ ನಡೆದಿದೆ. 

ಸುಳ್ಯ, ಆಗಸ್ಟ್ 8: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿ ಮಗುವಿನೊಂದಿಗೆ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ ನಡೆದಿದೆ. 

ನೆಲ್ಲೂರು ಕೇಮ್ರಾಜೆ ಗ್ರಾಮದ ಮಾಪಲಕಜೆಯಲ್ಲಿ ತವರು ಮನೆ ಹೊಂದಿರುವ ಮೆಲ್ಕಾರ್ ನಿವಾಸಿ ಅಮಿತ್ ಎಂಬವರ ಪತ್ನಿ ಸಂಗೀತಾ(30) ಮತ್ತು ಆಕೆಯ ಮಗು‌ ನಾಲ್ಕು ವರ್ಷದ ಅಭಿಮನ್ಯು ಮೃತರು.
ಎರಡು ದಿನಗಳ ಹಿಂದೆ ತವರು ಮನೆಗೆ ಪೂಜೆಯ ನಿಮಿತ್ತವಾಗಿ ಬಂದಿದ್ದು, ನಾಳೆ ಮೆಲ್ಕಾರ್​ಗೆ ಹೋಗುವವರಿದ್ದರು. 

ಪಕ್ಕದ ನೆಂಟರೋರ್ವರ ಮನೆಗೆ ಹೋಗುವಾಗ ಮಗು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದಿದೆ ಎನ್ನಲಾಗಿದೆ. ಮಗು ಕೆರೆಗೆ ಬಿದ್ದಿದ್ದನ್ನು ನೋಡಿದ ತಾಯಿ ಸಂಗೀತಾ ಅವರು ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ್ದಾರೆ. ಆದರೆ ಈಜಲು ಬಾರದ ಸಂಗೀತಾ ಅವರು ಮಗುವನ್ನು ರಕ್ಷಿಸಲೂ ಆಗದೆ ಇತ್ತ ತನ್ನ ಪ್ರಾಣವನ್ನೂ ರಕ್ಷಿಸಿಕೊಳ್ಳಲಾಗದೇ ಮೃತಪಟ್ಟಿದ್ದಾರೆ. ಸುಳ್ಯ ಅಗ್ನಿಶಾಮಕ ದಳದ ನೇತೃತ್ವದಲ್ಲಿ ಸಂಗೀತಾ ಹಾಗೂ ಮಗುವಿನ ಮೃತದೇಹಗಳನ್ನು ಮೇಲೆತ್ತಲಾಗಿದ್ದು ಸ್ಥಳಕ್ಕೆ ಸುಳ್ಯ ತಹಸೀಲ್ದಾರ್ ಅನಿತಾಲಕ್ಷ್ಮಿ ಹಾಗೂ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

In a tragic incident, a woman lost her life while trying to save her drowning child at Kemraje, Nellur here on Sunday August 8. Both the child and the mother died in the incident. The deceased have been identified as Sangeeta (30) and her son Abhimanyu (3), residents of Kemraje.