ಬ್ರೇಕಿಂಗ್ ನ್ಯೂಸ್
09-08-21 11:04 am Mangaluru Correspondent ಕರಾವಳಿ
ಉಳ್ಳಾಲ, ಆಗಸ್ಟ್ 9: ಕೇರಳ ನಿವಾಸಿಗಳನ್ನು ಕೋವಿಡ್ ನೆಪದಲ್ಲಿ ನಿರ್ಬಂಧಿಸಿರುವ ಕರ್ನಾಟಕ ಸರಕಾರದ ಕ್ರಮವನ್ನು ಖಂಡಿಸಿ ಗಡಿಭಾಗ ತಲಪಾಡಿಯಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಭಾರೀ ಪ್ರತಿಭಟನೆ ನಡೆಸಲಾಗಿದೆ.
ಕೇಂದ್ರ ಸರಕಾರ ಮತ್ತು ಸುಪ್ರೀಂ ಕೋರ್ಟ್ ಅಂತಾರಾಜ್ಯ ಸಂಚಾರವನ್ನು ಯಾವುದೇ ಕಾರಣಕ್ಕೂ ನಿರ್ಬಂಧಿಸುವಂತಿಲ್ಲ ಎಂದು ಸೂಚನೆ ನೀಡಿದ್ದರೂ, ಕರ್ನಾಟಕದ ಬೊಮ್ಮಾಯಿ ಸರಕಾರ ಕೋವಿಡ್ ಹೆಸರಲ್ಲಿ ಗಡಿ ಬಂದ್ ಮಾಡಿ ಬಿಕ್ಕಟ್ಟು ಸೃಷ್ಟಿಸಿದೆ. ಜನಸಾಮಾನ್ಯರನ್ನು ಬೀದಿಗೆ ತಳ್ಳಿದೆ. ಈ ಬಗ್ಗೆ ಕೇರಳದ ಸಿಎಂ ಪಿಣರಾಯಿ ವಿಜಯನ್ ಮಧ್ಯ ಪ್ರವೇಶ ಮಾಡಿ, ಗಡಿ ಸಮಸ್ಯೆ ಇತ್ಯರ್ಥ ಪಡುಸಬೇಕೆಂದು ಪ್ರತಿಭಟನಕಾರರು ಒತ್ತಾಯಿಸಿದರು.
ಈ ವೇಳೆ, ಮಾತನಾಡಿದ ಕಾಂಗ್ರೆಸ್ ಮುಖಂಡ ಹರ್ಷಾದ್ ವರ್ಕಾಡಿ, ಹಿಂದೆಯೂ ಗಡಿ ಬಂದ್ ಮಾಡಿದಾಗ ನಾವು ಸಹಕಾರ ನೀಡಿದ್ದೇವೆ. ಆದರೆ, ಈಗ ನಾವು ಒಪ್ಪಲ್ಲ. ಕೇಂದ್ರ ಸರಕಾರವೇ ಎರಡು ಡೋಸ್ ಲಸಿಕೆ ಪಡೆದವರಿಗೆ ನಿರ್ಬಂಧ ವಿಧಿಸುವಂತಿಲ್ಲ ಎಂದು ಹೇಳಿದೆ. ಎರಡು ಡೋಸ್ ಕೋವಿಡ್ ವ್ಯಾಕ್ಸಿನ್ ಪಡೆದ ಕೇರಳದ ಗಡಿ ನಿವಾಸಿಗಳನ್ನು ಕರ್ನಾಟಕ ಪ್ರವೇಶಕ್ಕೆ ಅವಕಾಶ ನೀಡಲೇಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ಮತ್ತು ಕೇರಳದ ಉಭಯ ಸರಕಾರಗಳ ನಿರ್ಲಕ್ಷ್ಯ ಧೋರಣೆ ವಿರುದ್ಧ ಯುಡಿವೈಎಫ್ ಮಂಜೇಶ್ವರ ಪಂಚಾಯತ್ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಪ್ರತಿಭಟನಾಕಾರರು ಕೋವಿಡ್ ಲಸಿಕೆಯ ವರದಿಯನ್ನ ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಕೋವಿಡ್ ಲಸಿಕೆ ಪಡೆದರೂ ಅದಕ್ಕೆ ಬೆಲೆಯಿಲ್ಲ ಎಂದಾದ್ರೆ ಈ ಲಸಿಕೆ ಯಾಕೆ ಇರಬೇಕು. ಈ ವರದಿ ಯಾಕೆ ಬೇಕು ಎಂದು ಪ್ರಶ್ನೆ ಮಾಡಿದರು.
ಕೆಎಂಸಿಸಿ ಮುಖಂಡ ಬಾಬಾ ಉದ್ಯಾವರ, ಮುಸ್ಲಿಂ ಲೀಗ್ ಮಂಜೇಶ್ವರ ಪಂಚಾಯತ್ ಸಮಿತಿ ಅಧ್ಯಕ್ಷ ಸೈಫುಲ್ಲಾ ತಂಙಳ್, ಯೂತ್ ಕಾಂಗ್ರೆಸ್ ಮಂಜೇಶ್ವರ ಮಂಡಲ ಸಮಿತಿ ಅಧ್ಯಕ್ಷ ಇರ್ಷಾದ್ ಮಂಜೇಶ್ವರ, ಮಂಜೇಶ್ವರ ಗ್ರಾ.ಪಂ ಸದಸ್ಯರಾದ ಮುಸ್ತಫಾ ಉದ್ಯಾವರ, ಪ್ರಮುಖರಾದ ಸಿದ್ದೀಕ್ ಮಂಜೇಶ್ವರ,ಡೆರಿಕ್ ಮೊಂತೇರೊ, ಹನೀಫ್ ಪಡಿನ್ಯಾರ್, ಎಂ.ಪಿ ಬದ್ರುದ್ದೀನ್ ತುಮಿನಾಡ್ ಮೊದಲಾದವರು ಉಪಸ್ಥಿತರಿದ್ದರು.
ಆನಂತರ ಆಡಳಿತಾರೂಢ ಎಲ್ ಡಿಎಫ್ ಪಕ್ಷದ ಮಂಜೇಶ್ವರ ಮಂಡಲ ಸಮಿತಿ ನೇತೃತ್ವದಲ್ಲೂ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ಸಿಪಿಐ ಕಾಸರಗೋಡು ಜಿಲ್ಲಾ ನಿರ್ವಾಹಕ ಸಮಿತಿ ಸದಸ್ಯ ಬಿ.ವಿ ರಾಜನ್ ಪ್ರತಿಭಟನೆಯಲ್ಲಿ ಮಾತನಾಡಿದರು. ಇದೇ ವೇಳೆ, ಕಾಸರಗೋಡು ಜಿಲ್ಲಾಧಿಕಾರಿ ಸ್ವಾಗತ್ ಭಂಡಾರಿ ಗಡಿಭಾಗ ತಲಪಾಡಿಗೆ ಭೇಟಿಯಿತ್ತು ಪರಿಶೀಲನೆ ನಡೆಸಿದರು. ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಬಳಿ ತಮ್ಮ ಅಹವಾಲು ತೋಡಿಕೊಂಡರು.
Video:
LDF and UDF party protest at talapady border Kasaragod DC Bhandari Swagath Intervenes
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
03-10-25 11:28 pm
HK News Desk
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm