ಬ್ರೇಕಿಂಗ್ ನ್ಯೂಸ್
12-08-21 11:05 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 12: ಸರಕಾರಿ ಜಾಗದಲ್ಲಿ ಹೋದಲ್ಲಿ ಬಂದಲ್ಲಿ ಗಾರ್ಡ್ ಆಫ್ ಹಾನರ್ ಕೊಡುವುದು, ತಗೊಳ್ಳುವುದು ನಂಗೆ ಇಷ್ಟವಾಗಲ್ಲ. ಅದು ಬೇಡ ಎಂಬುದು ನನ್ನ ಭಾವನೆ. ಈ ಬಗ್ಗೆ ಬೆಂಗಳೂರಿಗೆ ಹೋದ ತಕ್ಷಣ ಆದೇಶವನ್ನು ಹೊರಡಿಸುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಉಡುಪಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಶಿಷ್ಟಾಚಾರ ಪ್ರಕಾರ ಒಂದು ಕಡೆ ಎಲ್ಲಾದ್ರೂ ಅದರಲ್ಲೂ ಪೊಲೀಸ್ ಸಮಾರಂಭದಲ್ಲಿ ಮಾತ್ರ ಗೌರವ ವಂದನೆ ಕೊಟ್ಟರೆ ಸಾಕು. ಅದು ಬಿಟ್ಟು ಸಿಕ್ಕಲ್ಲಿ ಎಲ್ಲಾ ಗಾರ್ಡ್ ಆಫ್ ಹಾನರ್ ಬೇಡ ಎಂದು ಹೇಳುವ ಮೂಲಕ ತಮ್ಮ ನೈಜ ಸಮಾಜವಾದಿ ಭಾವನೆಯನ್ನು ತೆರೆದಿಟ್ಟಿದ್ದಾರೆ.
ಅಲ್ಲದೆ, ಯಾರೂ ಕಟೌಟ್ ಹೋರ್ಡಿಂಗ್ ಹಾಕೋದು ಬೇಡ. ಯಾರು ಕೂಡ ಶುಭಕೋರಲು ಹೋರ್ಡಿಂಗ್ ಹಾಕಬೇಡಿ. ನನ್ನ ಪಕ್ಷದವರಿಗೆ ಮತ್ತು ಅಭಿಮಾನಿಗಳಿಗೆ ನಾನು ಮನವಿ ಮಾಡುತ್ತೇನೆ. ನಾನು ಮುಖ್ಯಮಂತ್ರಿಯಾದರೂ ಈ ನಾಡಿನ ಸೇವಕ. ಈ ಭಾವನೆ ಕಡಿಮೆಯಾಗಬಾರದು ಎಂಬ ಉದ್ದೇಶದಿಂದ ಈ ಆದೇಶ ಹೊರಡಿಸಿದ್ದೇನೆ ಎಂದು ಹೇಳಿದರು.

ಉಡುಪಿಯಲ್ಲಿ ಪುಷ್ಪ ವ್ಯಾಪಾರಿಗಳ ಪ್ರತಿಭಟನೆ ವಿಚಾರದ ಬಗ್ಗೆ ಪ್ರತಿಕ್ರಿಯೆ ಹೇಳಿದ ಅವರು, ಹೂವಿನ ವ್ಯಾಪಾರಿಗಳಿಗೆ ತೊಂದರೆ ಕೊಡಬೇಕು ಎಂಬುದು ನನ್ನ ಉದ್ದೇಶ ಅಲ್ಲ. ಖಾಸಗಿಯಾಗಿ ಅವರು ಹೂವಿನ ವ್ಯಾಪಾರವನ್ನು ಬೇಕಾದಷ್ಟು ಮಾಡಬಹುದು. ಅದಕ್ಕೆ ಬೇಡಿಕೆಯೂ ಇರುತ್ತದೆ. ಸರಕಾರಿ ಕಾರ್ಯಕ್ರಮದಲ್ಲಿ ಮಾತ್ರ ಹೂಗುಚ್ಚ, ಹಾರ, ತುರಾಯಿ ಬೇಡ ಎಂದಿದ್ದೇನೆ ಎಂದು ಸೂಚ್ಯವಾಗಿ ಹೇಳಿದರು.
ಸಚಿವ ಸ್ಥಾನದ ಆಕಾಂಕ್ಷಿಗಳ ಅಸಮಾಧಾನದ ಬಗ್ಗೆ ಕೇಳಿದ ಪ್ರಶ್ನೆಗೆ, ನಾನು ಯಾವುದೇ ಮ್ಯಾಜಿಕ್ಕನ್ನು ಮಾಡುತ್ತಿಲ್ಲ. ಅಸಮಾಧಾನ ಏನೇ ಇದ್ದರೂ ಎಲ್ಲರೊಂದಿಗೂ ಮಾತಾಡುತ್ತೇನೆ. ಪ್ರೀತಿ ಮತ್ತು ವಿಶ್ವಾಸವೇ ನಾನು ಮಾಡುತ್ತಿರುವ ಮ್ಯಾಜಿಕ್ ಅಷ್ಟೇ ಎಂದು ಹೇಳಿದರು.
ಕೋವಿಡ್ ಸಂದರ್ಭ 10,0000 ಸಾವು ಆಗಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಉತ್ತರಿಸಿದ ಮುಖ್ಯಮಂತ್ರಿ, ಎಲ್ಲಾ ಸಾವುಗಳ ಬಗ್ಗೆ ಸರಕಾರದ ದಾಖಲೆಯಲ್ಲಿದೆ. ಪ್ರತಿ ಜಿಲ್ಲೆಯಲ್ಲೂ ಸರ್ಕಾರದ ದಾಖಲೆಯಲ್ಲಿ ಸಾವಿನ ಬಗ್ಗೆ ಡಾಟಾ ಇದೆ. ಅವರು ತಮ್ಮ ಹೇಳಿಕೆಗೆ ಆಧಾರ ಕೊಟ್ಟರೆ ಪರಿಶೀಲಿಸುತ್ತೇವೆ. ಸೆಪ್ಟೆಂಬರ್ ತಿಂಗಳಲ್ಲಿ ವಿಧಾನಸಭಾ ಅಧಿವೇಶನ ನಡೆಯಲಿದ್ದು ಚರ್ಚೆಗೆ ಅವಕಾಶ ನೀಡಲಾಗುವುದು ಎಂದು ಹೇಳಿದರು.
After doing away with the practice of giving bouquets, garlands, and memorabilia at government events, Karnataka Chief Minister Basavaraj S Bommai said on Thursday that he would soon issue an order banning guard of honour given to him and other ministers at every district and public places during their visits.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm