ಬ್ರೇಕಿಂಗ್ ನ್ಯೂಸ್
13-08-21 09:45 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 13: ನಗರದ ಕೆಪಿಟಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೆಮಿಸ್ಟರ್ ಪರೀಕ್ಷೆ ಆರಂಭಗೊಂಡಿದ್ದು, ಕೋವಿಡ್ ಸೋಂಕಿತ ಮತ್ತು ಇತರ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಭಾಗ ಮಾಡದೆ ಅಲ್ಲಿನ ಸಿಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕೆಪಿಟಿ ಕಾಲೇಜಿನಲ್ಲಿ ಶುಕ್ರವಾರ ಸೆಮಿಸ್ಟರ್ ಪರೀಕ್ಷೆ ಆರಂಭಗೊಂಡಿತ್ತು. ಕೋವಿಡ್ ಸೋಂಕಿತರು ಕೂಡ ಪರೀಕ್ಷೆಯಲ್ಲಿ ಪಾಲ್ಗೊಳ್ಳಬಹುದು, ಅವರಿಗೆ ಪ್ರತ್ಯೇಕ ವಿಭಾಗ ಮಾಡುವ ನಿಟ್ಟಿನಲ್ಲಿ ಆಯಾ ಕಾಲೇಜು ಆಡಳಿತಕ್ಕೆ ಜಿಲ್ಲಾಡಳಿತದಿಂದ ನಿರ್ದೇಶನ ನೀಡಲಾಗಿತ್ತು. ಆದರೆ, ಕೆಪಿಟಿ ಕಾಲೇಜಿನಲ್ಲಿ ಈ ವಿಚಾರದಲ್ಲಿ ಸಿಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.
ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದ ಒಬ್ಬ ವಿದ್ಯಾರ್ಥಿ ಕೋವಿಡ್ ಸೋಂಕು ಆಗಿರುವ ಬಗ್ಗೆ ಆಯಾ ವಿಭಾಗದ ಪ್ರಮುಖರಿಗೆ ಮಾಹಿತಿ ನೀಡಿದ್ದ. ಆಗಸ್ಟ್ 7ರಂದು ತಾನು ಪಾಸಿಟಿವ್ ಆಗಿರುವ ಬಗ್ಗೆ ಸಂದೇಶವನ್ನು ಕಾಲೇಜು ಪ್ರಮುಖರಿಗೆ ನೀಡಿದ್ದ. ಕಾಲೇಜಿನಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತದೆ ಎನ್ನುವ ಸೂಚನೆ ನೀಡಿದ್ದರಿಂದ ಪರೀಕ್ಷೆಗೂ ಹಾಜರಾಗಿದ್ದ.
ಆದರೆ, ಪಾಸಿಟಿವ್ ಆಗಿದ್ದ ವಿದ್ಯಾರ್ಥಿಯನ್ನು ಪ್ರತ್ಯೇಕ ಹಾಲ್ ನಲ್ಲಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಿರಲಿಲ್ಲ. ಸಿಬಂದಿ ಮತ್ತು ಉಪನ್ಯಾಸಕರಿಗೆ ಈ ಬಗ್ಗೆ ಮಾಹಿತಿ ಇದ್ದರೂ, ಮಾರ್ಗಸೂಚಿಯ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರೇ ಎನ್ನುವ ಅನುಮಾನ ಎದ್ದಿದೆ. ಕೆಲವು ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದರೂ ಪರೀಕ್ಷೆಗೆ ಹಾಜರಾಗಿದ್ದರು. ಆದರೆ, ಕೆಲವರಿಗೆ ಮಾತ್ರ ಪ್ರತ್ಯೇಕ ಕೊಠಡಿ ಇದ್ದರೆ ಒಂದಷ್ಟು ಮಂದಿಯನ್ನು ಅಸ್ಪೃಶ್ಯರ ರೀತಿ ಇತರ ವಿದ್ಯಾರ್ಥಿಗಳ ನಡುವೆ ಹಾಲ್ ನಲ್ಲೇ ಒಂದು ಮೂಲೆಯಲ್ಲಿ ಕುಳ್ಳಿರಿಸಿದ ಪ್ರಸಂಗ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕೋವಿಡ್ ಸೋಂಕು ಹರಡದಂತೆ ನೋಡಿಕೊಳ್ಳಲು ಜಿಲ್ಲಾಡಳಿತ, ಸರಕಾರ ಏನೆಲ್ಲ ಕಸರತ್ತು ನಡೆಸುತ್ತಿದ್ದರೂ, ಅದರ ನಡುವೆಯೂ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪರೀಕ್ಷೆಯನ್ನೂ ನಡೆಸಲಾಗುತ್ತಿದೆ. ಆತಂಕಗಳಿದ್ದರೂ, ಪರೀಕ್ಷೆಗೆ ಕೋವಿಡ್ ಸೋಂಕಿತರಿಗೂ ಅವಕಾಶ ನೀಡಲಾಗಿತ್ತು. ಆದರೆ, ಕೆಲವು ಕಾಲೇಜು ಪ್ರಮುಖರು ಈ ಬಗ್ಗೆ ಸೂಕ್ತ ಮುನ್ನೆಚ್ಚರಿಕೆ ವಹಿಸದೆ ಅಲ್ಲಿನ ಸಿಬಂದಿ ಮತ್ತು ಇತರ ವಿದ್ಯಾರ್ಥಿಗಳಿಗೂ ಸೋಂಕು ಹರಡಲು ಕಾರಣವಾಗುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
KPT college in Mangalore is alleged of conducting Semister exams with students tested covid posting in the same examination hall. Students slam administration for negligence.
28-11-24 10:41 pm
Bangalore Correspondent
Karkala Drowning, Udupi News; ಕಾರ್ಕಳದ ದುರ್ಗಾ...
28-11-24 09:41 pm
ಲಾಕಪ್ ಡೆತ್ ; ನಾಲ್ವರು ಪೊಲೀಸರಿಗೆ ಏಳು ವರ್ಷ ಜೈಲು...
28-11-24 05:04 pm
MLA Gaviyappa, DK Shivakumar: ಯಾವುದೇ ಕಾರಣಕ್ಕೂ...
26-11-24 10:46 pm
Shivamogga, Monkey fever, Dinesh Gundu Rao: ಮ...
26-11-24 10:23 pm
27-11-24 02:00 pm
HK News Desk
ರಸ್ತೆ ಬದಿ ಮಲಗಿದ್ದ ಅಲೆಮಾರಿ ಗುಂಪಿನ ಮೇಲಿಂದ ಹರಿದ...
27-11-24 12:36 pm
ಕ್ಯುಆರ್ ಕೋಡ್ ಸಹಿತ ಹೊಸ ನಮೂನೆಯ ಪ್ಯಾನ್ 2.0 ಜಾರಿ...
26-11-24 09:43 pm
BJP Devendra Fadnavis, Eknath Shinde: ಮಹಾರಾಷ್...
26-11-24 07:32 pm
ಪ್ರವಾಸೋದ್ಯಮ ಇಲಾಖೆಗೆ ನಿಗದಿಪಡಿಸಿದ್ದ ದರ್ಶನ ಟಿಕೆಟ...
23-11-24 11:07 pm
28-11-24 09:58 pm
Mangalore Correspondent
Mangalore, DFYI protest, Anupam Agarwal: ಪೊಲೀ...
28-11-24 06:05 pm
VHP, Mangalore, Bangladesh: ಬಾಂಗ್ಲಾದೇಶದಲ್ಲಿ ಹ...
28-11-24 03:24 pm
Belthangady suicide, Crime, Mangalore; ನಂಬಿಸಿ...
28-11-24 02:13 pm
Mangalore, Anupam Agarwal, Ramanatha Rai: ರಸ್...
28-11-24 01:56 pm
27-11-24 03:36 pm
HK News Desk
Mangalore, Robbery, Crime : ಕೊಲ್ಯದ ಜಾಯ್ ಲ್ಯಾಂ...
27-11-24 01:11 pm
Mangalore crime, ACP Dhanya Nayak, Drugs: ಎಸಿ...
26-11-24 03:10 pm
ಹುಬ್ಬಳ್ಳಿ ದರೋಡೆ ಪ್ರಕರಣದಲ್ಲಿ ಮಂಗಳೂರು ನಂಟು ; ಉಳ...
25-11-24 06:17 pm
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm