ಬ್ರೇಕಿಂಗ್ ನ್ಯೂಸ್
13-08-21 10:21 pm Mangaluru Correspondent ಕರಾವಳಿ
ಉಳ್ಳಾಲ, ಆ.13: ದಕ್ಷಿಣದ ಅಜ್ಮೀರ್ ಎಂದೇ ಖ್ಯಾತವಾಗಿರುವ ಉಳ್ಳಾಲ ಸೈಯದ್ ಮದನಿ ದರ್ಗಾದಲ್ಲಿ 2021ರ ಡಿಸೆಂಬರ್ 23 ರಿಂದ ಜನವರಿ 16 ರ ವರೆಗೆ ನಡೆಯಲಿರುವ 21ನೇ ಪಂಚ ವಾರ್ಷಿಕ ಉರೂಸ್ ಸಮಾರಂಭಕ್ಕೆ ಇಂದು ಧ್ವಜಾರೋಹಣ ನೆರವೇರಿಸಲಾಗಿದೆ.
ಉಳ್ಳಾಲ ದರ್ಗಾ ವಠಾರದಲ್ಲಿ ಧ್ವಜಾರೋಹಣ ನಡೆಯಿತು. ಉಳ್ಳಾಲ ಖಾಝಿ ಆಗಿದ್ದ ತಾಜುಲ್ ಉಲಮಾ ರವರ ಪುತ್ರರಾದ ಇಂಬಿಚ್ಚಿ ಕೋಯ ತಂಙಳ್ ರವರು ಧ್ವಜಾರೋಹಣ ನೆರವೇರಿಸಿದರು. ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್, ಉಳ್ಳಾಲ ಕೇಂದ್ರ ಜುಮ್ಮಾ ಮಸೀದಿ ಹಾಗೂ ಸಯ್ಯದ್ ಮದನಿ ಆಡಳಿತ ಸಮಿತಿ ಉಳ್ಳಾಲ ದರ್ಗಾ ಉರೂಸ್ ಕಾರ್ಯಕ್ರಮವನ್ನು ಡಿ.23 ಜ.16ರ ವರೆಗೆ ನಡೆಸಲು ನಿರ್ಧರಿಸಿದೆ. ಐದು ವರ್ಷಕ್ಕೊಮ್ಮೆ ನಡೆಯುವ ಉಳ್ಳಾಲ ದರ್ಗಾ ಉರೂಸ್ 2020 ರಲ್ಲಿ ನಡೆಯಬೇಕಿತ್ತು. ಕೊರೊನಾ ಲಾಕ್ಡೌನ್ ಕಾರಣದಿಂದ ಉರೂಸ್ ನಡೆಸಲು ಆಗಲಿಲ್ಲ. 2021 ರಲ್ಲಿ ನಡೆಯಬೇಕಿದ್ದ ಸಮಾರಂಭವನ್ನು ಮತ್ತೆ ಕೊರೊನ ಎರಡನೇ ಅಲೆಯಿಂದಾಗಿ ಮುಂದೂಡಲಾಯಿತು. ಈ ಕಾರಣದಿಂದ 21ನೇ ಪಂಚ ವಾರ್ಷಿಕ ಉರೂಸ್ ಸಮಾರಂಭವನ್ನು ಡಿ.23 ರಿಂದ 2022 ಜ.16 ವರೆಗೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಸಮಾರಂಭಕ್ಕೆ ಕರ್ನಾಟಕ ರಾಜ್ಯ ಅಲ್ಲದೆ ಭಾರತದ ವಿವಿಧ ಕಡೆಗಳಿಂದ ಭಕ್ತಾದಿಗಳು ಬರುತ್ತಾರೆ. ಉರೂಸ್ ಕಾರ್ಯಕ್ರಮದಲ್ಲಿ ಎಪಿ ಉಸ್ತಾದ್, ಜಿಫ್ರಿ ತಂಙಳ್ ಸಹಿತ ಹಲವು ಧಾರ್ಮಿಕ, ಸಾಮಾಜಿಕ, ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ದರ್ಗಾ ಉಪಾಧ್ಯಕ್ಷರಾದ ಯು.ಕೆ.ಮೋನು ಇಸ್ಮಾಯಿಲ್, ಬಾವ ಮೊಹಮ್ಮದ್, ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ತ್ವಾಹ, ಜತೆ ಕಾರ್ಯದರ್ಶಿಗಳಾದ ನೌಷಾದ್ ಅಲಿ, ಆಝಾದ್ ಇಸ್ಮಾಯಿಲ್, ಕೋಶಾಧಿಕಾರಿ ಯು.ಕೆ.ಇಲ್ಯಾಸ್, ಲೆಕ್ಕ ಪರಿಶೋಧಕ ಯು.ಟಿ.ಇಲ್ಯಾಸ್, ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷರಾದ ಮುಸ್ತಫಾ ಅಬ್ದುಲ್ಲಾ , ಯು.ಕೆ.ಇಬ್ರಾಹಿಂ, ಜತೆ ಕಾರ್ಯದರ್ಶಿ ಎ.ಕೆ.ಮೊಯಿದ್ದೀನ್, ಅರೆಬಿಕ್ ಟ್ರಸ್ಟ್ ಉಪಾಧ್ಯಕ್ಷ ಅಬೂಬಕ್ಕರ್ ಕೋಟೆಪುರ, ಉಳ್ಳಾಲ ಕೇಂದ್ರ ಜುಮ್ಮಾ ಮಸೀದಿ ಖತೀಬ್ ಅನ್ವರ್ ಅಲಿ ದಾರಿಮಿ ಮೊದಲಾದವರು ಉಪಸ್ಥಿತರಿದ್ದರು.
Syed Madani dargah in Ullal to hold Urus 2021 from December 23rd to 16th. Every five years, Uroos celebrations are held at the dargah, which attracts lakhs of visitors. People of all faiths pray at the dargah and also offer “harake” (a vow).
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 02:30 pm
Mangalore Correspondent
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am