ಬ್ರೇಕಿಂಗ್ ನ್ಯೂಸ್
14-08-21 11:56 am Mangaluru Correspondent ಕರಾವಳಿ
ಉಡುಪಿ, ಆ.14 : ಸೌದಿ ಅರೇಬಿಯಾದಲ್ಲಿ ಅಲ್ಲಿನ ರಾಜನ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ತಾನು ಮಾಡದ ತಪ್ಪಿಗೆ ಜೈಲು ವಾಸ ಅನುಭವಿಸಿದ್ದ ಕುಂದಾಪುರ ತಾಲೂಕಿನ ಹರೀಶ್ ಬಂಗೇರ ಬಿಡುಗಡೆಯಾಗಿದ್ದು ಆ.18ರಂದು ಬೆಂಗಳೂರು ತಲುಪಲಿದ್ದಾರೆ ಎಂದು ಉಡುಪಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಹರೀಶ್ ಬಂಗೇರ ತಾಯ್ನಾಡಿಗೆ ಮರಳಲು ಮಾಡಬೇಕಾಗಿದ್ದ ಅಗತ್ಯ ನಿಯಮಗಳನ್ನು ಪೂರೈಸಿದ್ದು ಆ.17ರಂದು ಸೌದಿ ಅರೇಬಿಯಾದ ದಮ್ಮಾಮ್ ವಿಮಾನ ನಿಲ್ದಾಣದಿಂದ ದೋಹಾ ಹೊರಟು ಆ.18 ರಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ಸೌದಿ ಅರೇಬಿಯಾದ ರಿಯಾದ್ ನಲ್ಲಿರುವ ಭಾರತೀಯ ದೂತವಾಸದಿಂದ ತನಗೆ ಅಧಿಕೃತ ಮಾಹಿತಿ ಬಂದಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಫೇಸ್ ಬುಕ್ ನಲ್ಲಿ ಹರೀಶ್ ಬಂಗೇರ ಹೆಸರಲ್ಲಿ ನಕಲಿ ಖಾತೆ ತೆರೆದು ಸೌದಿ ದೊರೆ ಹಾಗೂ ಮಕ್ಕಾದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು. ಪ್ರಕರಣ ಸಂಬಂಧಿಸಿ ಹರೀಶ್ ಬಂಗೇರ ಅವರನ್ನು ಸೌದಿ ಪೊಲೀಸರು 2019ರ ಡಿಸೆಂಬರ್ ನಲ್ಲಿ ಬಂಧಿಸಿದ್ದರು. ಈ ನಡುವೆ ಹರೀಶ್ ಬಂಗೇರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಗ್ಗೆ ಉಡುಪಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಮೂಡುಬಿದ್ರೆ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಇದಾಗುತ್ತಿದ್ದಂತೆ, ಪೊಲೀಸರು ಆರೋಪಿಗಳನ್ನು ಬಂಧಿಸಿರುವ ವರದಿಯನ್ನು ಸೌದಿ ಅರೇಬಿಯಾದ ಪೊಲೀಸರಿಗೆ ನೀಡಲಾಗಿತ್ತು. ಇದರಂತೆ, ಸಂತ್ರಸ್ತ ಹರೀಶ್ ಬಂಗೇರ ಅವರನ್ನು ಕೊನೆಗೂ ಸೌದಿ ಪೊಲೀಸರು ಜೈಲಿನಿಂದ ಬಿಡುಗಡೆ ಮಾಡಿದ್ದಾರೆ.
Harish Bangera, native of Udupi, who was arrested and imprisoned by the Saudi authorities for allegedly making blasphemous comments on the Saudi Crown Prince and Mecca, the holy site of Muslims across the world and released recently, will reach Bengaluru on August 18. This information was given by Shobha Karandlaje, union minister for agriculture and farmers’ welfare.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm