ಬ್ರೇಕಿಂಗ್ ನ್ಯೂಸ್
14-08-21 11:16 pm Bengaluru Correspondent ಕರಾವಳಿ
ಬೆಂಗಳೂರು, ಆಗಸ್ಟ್ 14: ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮಗಳ ಜಾರಿ ಸಂಬಂಧ ತಜ್ಞರು, ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸದ್ಯಕ್ಕೆ ಲಾಕ್ ಡೌನ್ ಆಗಲಿ ಅಥವಾ ವೀಕೆಂಡ್ ಕರ್ಫ್ಯೂ ಬೇಡ, ಮುಂದಿನ ಎರಡು ವಾರ ಈಗ ಜಾರಿಯಲ್ಲಿರುವ ಕೋವಿಡ್ ನಿಯಮಗಳನ್ನೇ ಮುಂದುವರಿಸುವಂತೆ ಸೂಚಿಸಿದ್ದಾರೆ. ಕೊರೋನಾ 2ನೇ ಅಲೆ ಇನ್ನೂ ಸಂಪೂರ್ಣವಾಗಿ ಹೋಗಿಲ್ಲ, ಸೋಂಕು ಹೆಚ್ಚು ಇರುವ ಜಿಲ್ಲೆಗಳನ್ನು ಬಿಟ್ಟು ಉಳಿದ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ಆರಂಭಿಸುವಂತೆಯೂ ತಿಳಿಸಿದ್ದಾರೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ತಜ್ಞರ ಜೊತೆಗೆ ಸುಧೀರ್ಘವಾದ ಚರ್ಚೆಯಾಗಿದೆ. ನೆರೆಯ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಹೆಚ್ಚಾಗುತ್ತಿರುವ ಕೋವಿಡ್ ಸ್ಥಿತಿಗತಿ ಸೇರಿದಂತೆ ಎಲ್ಲಾ ಅಂಶಗಳ ಬಗ್ಗೆ ವಿವರವಾದ ವರದಿ ನೀಡಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 9, 10 ಮತ್ತು ಪಿಯುಸಿ ತರಗತಿ ಆರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹಾಗೂ ಗಡಿ ಭಾಗದ ತಾಲ್ಲೂಕುಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶಾಲೆಗಳಲ್ಲಿ ಶೇ 2ಕ್ಕಿಂತ ಹೆಚ್ಚು ಸೋಂಕು ಪ್ರಕರಣಗಳು ವರದಿಯಾದರೆ, ಒಂದು ವಾರ ಕಾಲ ಶಾಲೆ ಮುಚ್ಚಿ, ಸ್ವಚ್ಛಗೊಳಿಸಿದ ನಂತರ ಮತ್ತೆ ತೆರೆಯಲು ಕ್ರಮ ವಹಿಸಲಾಗುವುದು. ಶಾಲೆಗಳ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪೋಷಕರು ಆದ್ಯತೆ ಮೇರೆಗೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಕೋವಿಡ್ ಪ್ರಕರಣಗಳು ಹೆಚ್ಚಿರುವ 8 ಜಿಲ್ಲೆಗಳಲ್ಲಿ ಮತ್ತೆ ವಾರಾಂತ್ಯದ ಕರ್ಫ್ಯೂ ಮುಂದುವರೆಯಲಿದೆ ಎಂದು ಸ್ಪಷಪಡಿಸಿದರು. ದಕ್ಷಿಣ ಕನ್ನಡ, ಕಲಬುರ್ಗಿ, ಮೈಸೂರು, ಚಾಮರಾಜನಗರ, ಕೊಡಗು, ಬೆಳಗಾವಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಮುಂದುವರೆಯಲಿದೆ ಎಂದರು.
ದಕ್ಷಿಣ ಕನ್ನಡ, ಮೈಸೂರು, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಾಮರಾಜನಗರ ಈ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಾಗಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಪರೀಕ್ಷೆ, ಲಸಿಕೆ ನೀಡಿಕೆ ಹೆಚ್ಚಿಸಲಾಗುವುದು ಗಡಿ ಜಿಲ್ಲೆಗಳಲ್ಲಿನ ಹಳ್ಳಿಗಳಲ್ಲಿನ 10 ಕಿಲೋಮೀಟರ್ ವ್ಯಾಪ್ತಿಯಲ್ಲಿನ ಎಲ್ಲಾ ಗ್ರಾಮಗಳಲ್ಲಿಯೂ ಕೊರೋನಾ ಪರೀಕ್ಷೆ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಹಬ್ಬದ ದಿನದಲ್ಲಿ ಹೆಚ್ಚು ಜನ ಒಂದೇ ಕಡೆ ಸೇರದಂತೆ ಎಚ್ಚರವಹಿಸಬೇಕು ಅಲ್ಲದೆ ಹಬ್ಬಗಳ ಆಚರಣೆ ಬಗ್ಗೆ ಈ ಹಿಂದಿನ ಮಾರ್ಗಸೂಚಿಗಳೇ ನೀತಿ ಮುಂದುವರಿಯಲಿದೆ. ರಾಜ್ಯದಲ್ಲಿ ಕೊರೋನ ಪರೀಕ್ಷೆಯನ್ನು ಹೆಚ್ಚಿಸಿ, ಇದರ ಜೊತೆಗೆ ಲಸಿಕೆ ನೀಡಿಕೆ ವೇಗ ಹೆಚ್ಚಿಸಲಾಗುವುದು ಎಂದರು.
ಸಂಭಾವ್ಯ ಮೂರನೇ ಅಲೆ ನಿಯಂತ್ರಣಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ಕಲಬುರಗಿ ಮತ್ತು ಬೆಳಗಾವಿ, ಹುಬ್ಬಳ್ಳಿಯಲ್ಲಿ ಮುಂದಿನ ಮೂರು ವಾರಗಳೊಳಗೆ ಜಿನೋಬ್ ಟೆಸ್ಟಿಂಗ್ ಲ್ಯಾಬ್ ಸ್ಥಾಪಿಸಲಾಗುವುದು, ಮಕ್ಕಳ ಆರೈಕೆಗಾಗಿ ಆಸ್ಪತ್ರೆಗಳಲ್ಲಿ ಬೆಡ್, ಐಸಿಯು ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಮುಂದಿನ ವಾರ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ, ಲಸಿಕೆ ಪೂರೈಕೆ ಪ್ರಮಾಣವನ್ನು ಹೆಚ್ಚಿಸುವಂತೆ ಮನವಿ ಮಾಡುವುದಾಗಿ ಮುಖ್ಯಮಂತ್ರಿ ತಿಳಿಸಿದರು.
ರಾಜ್ಯದಲ್ಲಿ 4 ಕೋಟಿಯಷ್ಟು ವ್ಯಾಕ್ಸಿನೇಷನ್ ಆಗಿದೆ. ರಾಜ್ಯದಲ್ಲಿ ಸದ್ಯ 14,89,000 ಡೋಸ್ ಲಸಿಕೆ ಲಭ್ಯವಿದೆ. ಈ ತಿಂಗಳಾಂತ್ಯಕ್ಕೆ ಮತ್ತಷ್ಟು ಕೊವಿಡ್ ಲಸಿಕೆ ಬರಲಿದೆ. ರಾಜ್ಯಕ್ಕೆ ಸದ್ಯ 68 ಲಕ್ಷ ಲಸಿಕೆಯನ್ನು ಕಳುಹಿಸಲಾಗುತ್ತಿದೆ. ಮತ್ತಷ್ಟು ಲಸಿಕೆ ಪೂರೈಕೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
After reviewing the COVID situation in the state, Karnataka Chief Minister Basavaraj Bommai on Saturday said the schools for classes 9 to 12 will be reopened in the state in districts where the positivity rate is less than 2 per cent. However, he did not make it clear when the schools in these districts will be resumed for students. Giving further details, the chief minister stated that it will be made mandatory for all parents and school staff to get vaccinated for entry into the school premises.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 06:22 pm
Giridhar Shetty, Mangaluru
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm