ಬ್ರೇಕಿಂಗ್ ನ್ಯೂಸ್
15-08-21 12:49 pm Mangaluru Correspondent ಕರಾವಳಿ
ಪುತ್ತೂರು, ಆಗಸ್ಟ್ 15: ಸಾವರ್ಕರ್ ಫೋಟೊ ಇದೆಯೆಂಬ ಒಂದೇ ಕಾರಣಕ್ಕೆ ಸ್ವಾತಂತ್ರ್ಯ ರಥಕ್ಕೆ ಎಸ್ ಡಿಪಿಐ ಕಾರ್ಯಕರ್ತರು ತಡೆಯೊಡ್ಡಿದ ಘಟನೆ ಪುತ್ತೂರು ತಾಲೂಕಿನ ಕಬಕ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆದಿದೆ.
ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯೋತ್ಸವ ರಥ ಸಂಚರಿಸಲಿದ್ದು ರಥಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ವಿನಯ ಕಲ್ಲೇಗ ಚಾಲನೆ ನೀಡಿದ್ದರು. ಚಾಲನೆ ನೀಡಿದ ಕೂಡಲೇ ಅಲ್ಲಿಯೇ ಇದ್ದ ಎಸ್ ಡಿಪಿಐ ಕಾರ್ಯಕರ್ತರು ಧಿಕ್ಕಾರ ಕೂಗುತ್ತಾ ಸ್ವಾತಂತ್ರ್ಯ ರಥಕ್ಕೆ ತಡೆ ಒಡ್ಡಿದ್ದಾರೆ.
ಈ ವೇಳೆ ಪರಸ್ಪರ ವಾಗ್ವಾದ, ತಳ್ಳಾಟ ನಡೆದಿದ್ದು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಿಡಿಒ ಅವರು ಸಮಾಧಾನಪಡಿಸಲು ಯತ್ನಿಸಿದರೂ ಕೇಳಿಸಿಕೊಳ್ಳದ ತಂಡ ವೀರ ಸಾವರ್ಕರ್ ಫೋಟೋವನ್ನು ತೆಗೆಯುವಂತೆ ಪಟ್ಟು ಹಿಡಿದಿದ್ದಾರೆ.
ಅಲ್ಲದೆ, ಸಾವರ್ಕರ್ ಫೋಟೊ ಬದಲು ಟಿಪ್ಪು ಸುಲ್ತಾನ್ ಫೋಟೋ ಅಳವಡಿಸುವಂತೆ ಪಟ್ಟು ಹಿಡಿದು ರಥ ಹೋಗಲು ಬಿಡುವುದಿಲ್ಲ ಎಂದು ಅಡ್ಡ ಹಾಕಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ ಪುತ್ತೂರು ನಗರ ಠಾಣಾ ಇನ್ಸ್ ಪೆಕ್ಟರ್ ಗೋಪಾಲ್ ನಾಯ್ಕ್ ನೇತೃತ್ವದ ಪೊಲೀಸರು ಬಳಿಕ ಪ್ರತಿಭಟನಾಕಾರರನ್ನು ಚದುರಿಸಿ ರಥ ಸಾಗಲು ಅನುವು ಮಾಡಿಕೊಟ್ಟರು.
Puttur Clash Erupts in Kadaba Panchayat by SDPI members over Savarkar photo on 75th Independence Day celebration. SDPI members demand to replace the photo with Tipu Sultans picture. Wars of words exchange between Presidents and SDPI members. Puttur Police arrive at the spot.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 11:06 pm
Mangalore Correspondent
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm