ಬ್ರೇಕಿಂಗ್ ನ್ಯೂಸ್
15-08-21 09:47 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 15: ವೀರ ಸಾರ್ವಕರ್ ಫೋಟೋ ತೆಗೆಯಲು ಹೇಳುವ ನೆಪದಲ್ಲಿ ರಥದ ಸಂಚಾರಕ್ಕೆ ಅಡ್ಡಿಪಡಿಸಿ ದಾಂಧಲೆ ಮಾಡಿದ್ದಾರೆ. ಇಡೀ ದೇಶ ಸ್ವಾತಂತ್ರ್ಯ ದಿನ ಆಚರಿಸುತ್ತಿದ್ದರೆ ಕೆಲವರು ದಾಂಧಲೆ ನಡೆಸಿದ್ದಾರೆ. ಈ ವಿಚಾರವನ್ನು ಗೃಹ ಮಂತ್ರಿಗಳ ಗಮನಕ್ಕೆ ತರಲಾಗಿದೆ. ಸ್ವಾತಂತ್ರೋತ್ಸವ ರಥಕ್ಕೆ ಅಡ್ಡಹಾಕುವ ತಾಲಿಬಾನಿ ಸಂಸ್ಕೃತಿಯನ್ನ ದ.ಕ ಜಿಲ್ಲೆಯಲ್ಲಿ ನಡೆಯಲು ಬಿಡಲ್ಲ. ಸರ್ಕಾರ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತದೆ. ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಲು ಗೃಹಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಇದೇ ವೇಳೆ, ಪುತ್ತೂರಿನ ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್ಡಿಪಿಐನಿಂದ ಅಡ್ಡಿಪಡಿಸಿದ ಸ್ಥಳಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ಕೊಟ್ಟಿದ್ದಾರೆ. ಕಬಕ ಭಾಗದ ಮತೀಯವಾದಿಗಳು ರಥಕ್ಕೆ ತಡೆ ಒಡ್ಡಿದ್ದಾರೆ. ಮತೀಯವಾದಿ ದೇಶದ್ರೋಹಿಗಳನ್ನ ಬಂಧಿಸಿ ಗಡಿಪಾರು ಮಾಡಬೇಕು. ಭಟ್ಕಳ, ಕಾಸರಗೋಡಿನ ಮತೀಯ ಸಂಘಟನೆಗಳ ಪಿತೂರಿ ಇದಾಗಿದೆ. ಸಮರ್ಪಕ ತನಿಖೆ ನಡೆಸಲು ಪ್ರಕರಣವನ್ನು ಎನ್ಐಎಗೆ ಕೊಡಬೇಕು. ಕಬಕ ಕಾಶ್ಮೀರ ಆಗೋದನ್ನ ಸಹಿಸುವುದಿಲ್ಲ ಎಂದು ಸಂಜೀವ ಮಠಂದೂರು ಹೇಳಿಕೆ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಬಳಿಕ ಪುತ್ತೂರು ಪೊಲೀಸ್ ಠಾಣೆಗೆ ತೆರಳಿ ಆರೋಪಿಗಳ ಬಂಧನಕ್ಕೆ ಆಗ್ರಹ ವ್ಯಕ್ತಪಡಿಸಿದ್ದಾರೆ. ತಕ್ಷಣ ಕೇಸು ದಾಖಲಿಸಿ ಬಂಧಿಸದೇ ಇದ್ರೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಸೂಚನೆ ಮೇರೆಗೆ ದೇಶಭಕ್ತರ ಫೋಟೋಗಳನ್ನು ಪಂಚಾಯತ್ ಅಳವಡಿಸಿತ್ತು. ಆದರೆ ಕಬಕ ಭಾಗದ ಮತೀಯವಾದಿ ಕಿಡಿಗೇಡಿಗಳು ರಥಕ್ಕೆ ತಡೆ ಒಡ್ಡಿದ್ದಾರೆ. ಈ ಮತೀಯವಾದಿ ದೇಶದ್ರೋಹಿಗಳನ್ನ ಬಂಧಿಸಿ ಗಡಿಪಾರು ಮಾಡಬೇಕು. ಯಾವುದೇ ಸಂಘಟನೆ ಆಗಿದ್ದರೂ ಅವರನ್ನು ಬಂಧಿಸಿ ಸಂಘಟನೆಯನ್ನು ನಿಷೇಧಿಸಬೇಕು ಎಂದು ಹೇಳಿದ್ದಾರೆ.
SDPI activists disrupt Independence Day celebrations in Puttur Kadaba kota writes to Home Minister to take action.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm