ಬ್ರೇಕಿಂಗ್ ನ್ಯೂಸ್
16-08-21 09:52 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 16: ಸ್ವಾತಂತ್ರ್ಯೋತ್ಸವದ ರಥಕ್ಕೆ ಅಡ್ಡಿಪಡಿಸಿದ ಎಸ್.ಡಿ.ಪಿ.ಐ ಕಾರ್ಯಕರ್ತರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿ, ದಾಂಧಲೆ ನಡೆಸುವ ಮೂಲಕ ಇವರ ದೇಶದ್ರೋಹಿ ಮನಸ್ಥಿತಿ ತೋರಿದ್ದಾರೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಎಸ್ ಡಿ ಪಿ ಐ ದೇಶದ್ರೋಹಿ ಸಂಘಟನೆ ಎನ್ನುವುದು ಹಲವು ಬಾರಿ ಸಾಬೀತಾಗಿದೆ. ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ಈ ಸಂಘಟನೆಗಳನ್ನು ನಿಷೇಧ ಮಾಡಬೇಕೆಂದು ಒತ್ತಾಯಿಸುತ್ತೇವೆ. ಘಟನೆಯನ್ನು ಖಂಡಿಸಿ ನಾಳೆ (ಆ.17) ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಜಿಲ್ಲೆಯಲ್ಲಿ ಶಾಂತಿ ಕದಡಲು ಈ ಸಂಘಟನೆಗಳು ಯತ್ನಿಸುತ್ತಲೇ ಇವೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ, ಗಲಭೆ ಎಬ್ಬಿಸುವ ಕೆಲಸ ಮಾಡಲಾಗುತ್ತಿದೆ. ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರ ಇದೆ, ಅಶಾಂತಿ ನಿರ್ಮಾಣದ ಕೆಲಸ ಆಗುತ್ತಿದೆ. ದೂರದ ಸಿರಿಯಾ, ಅಫ್ಘಾನಿಸ್ತಾನ, ಪಕ್ಕದ ಕೇರಳದಲ್ಲಿರುವ ಉಗ್ರರ ಸಂಪರ್ಕದಲ್ಲಿರುವ ಇಲ್ಲಿನ ಮಂದಿ ಈ ರೀತಿ ಕೆಲಸ ಮಾಡುತ್ತಿದ್ದಾರೆ. ಗೋಹತ್ಯೆ, ಲವ್ ಜಿಹಾದ್, ಸಮಾಜ ದ್ರೋಹಿ ಕೃತ್ಯಗಳಲ್ಲಿ ಇವೆರಡು ಸಂಘಟನೆಗಳ ಕಾರ್ಯಕರ್ತರು ತೊಡಗಿದ್ದಾರೆ.
ರಾಷ್ಟ್ರ ಮಟ್ಟದಲ್ಲಿ ಎನ್ಐಎ ಅಧಿಕಾರಿಗಳು ಪಿಎಫ್ಐ ಮತ್ತು ಎಸ್ಡಿಪಿಐ ಮುಖಂಡರ ಮೇಲೆ ದಾಳಿ, ನಡೆಸಿ ಅವರ ಕರಾಳ ಮುಖವನ್ನು ತೋರಿಸಿದ್ದಾರೆ. ಹಾಗಿದ್ದರೂ, ಈ ಸಂಘಟನೆಗಳನ್ನು ನಿಷೇಧ ಯಾಕೆ ಮಾಡಿಲ್ಲ ಎನ್ನುವುದು ತಿಳಿಯುತ್ತಿಲ್ಲ. ಈಗ ಮತ್ತೆ ವಿಶ್ವ ಹಿಂದು ಪರಿಷತ್ ಸರಕಾರವನ್ನು ಆಗ್ರಹಿಸುತ್ತಿದೆ. ಇವೆರಡು ಸಂಘಟನೆಗಳನ್ನು ದೇಶದಲ್ಲಿ ಬ್ಯಾನ್ ಮಾಡಿ ಎಂದು ಆಗ್ರಹಿಸಿದರು.
ವೀರ ಸಾವರ್ಕರ್ ಅಪ್ರತಿಮ ದೇಶಭಕ್ತ. ಸ್ವಾತಂತ್ರ್ಯ ಹೋರಾಟಗಾರ. ಸಾವರ್ಕರ್ ಫೋಟೊ ತೆಗೆಯಬೇಕೆಂದು ಸ್ವಾತಂತ್ರ್ಯ ರಥಕ್ಕೆ ತಡೆಯೊಡ್ಡಿದ್ದನ್ನು ಬಲವಾಗಿ ಖಂಡಿಸುತ್ತೇವೆ. ಇದು ಜಿಹಾದಿ ಮನಸ್ಥಿತಿಯ ಕೆಲಸ. ಈ ರೀತಿಯ ಘಟನೆಯನ್ನು ವಿರೋಧಿಸಿ, ವೀರ್ ಸಾವರ್ಕರ್ ಫೋಟೊ ಹಿಡಿದು ನಾಳೆ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಾಗುವುದು. ಪುತ್ತೂರಿನಲ್ಲಿ ಮಹಾಲಿಂಗೇಶ್ವರ ದೇವಸ್ಥಾನದಿಂದ ಮೆರವಣಿಗೆ ಆರಂಭಿಸಿ, ಪೊಲೀಸ್ ಠಾಣೆಗೆ ತೆರಳುತ್ತೇವೆ. ಜಿಲ್ಲೆಯ ಎಲ್ಲ 40 ಪೊಲೀಸ್ ಠಾಣೆಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
ಸ್ವಾತಂತ್ರ್ಯ ರಥಕ್ಕೆ ಎಸ್ ಡಿಪಿಐ ಕಾರ್ಯಕರ್ತರ ತಡೆ ; ಸಾವರ್ಕರ್ ಫೋಟೊ ಬದಲು ಟಿಪ್ಪು ಫೋಟೊ ಹಾಕಲು ಒತ್ತಡ !
ಸ್ವಾತಂತ್ರ್ಯ ರಥಕ್ಕೆ ಎಸ್ಡಿಪಿಐ ತಡೆ ; ಮೂವರು ಆರೋಪಿಗಳ ಬಂಧಿಸಿದ ಪುತ್ತೂರು ಪೊಲೀಸರು
ತಾಲಿಬಾನಿ ಸಂಸ್ಕೃತಿ ನಡೆಯಲು ಬಿಡಲ್ಲ ; ಸಚಿವ ಕೋಟ, ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ ನೀಡಿದ ಶಾಸಕ
Vishwa Hindu Parishad (VHP), Bajrang Dal (BD) and Hindu Jagarana Vedike (HJV) will stage protest on August 17 at 40 police stations across Dakshina Kannada condemning the act of disrupting of Independence Day programme by SDPI activists at Kabaka in Puttur. At the same time, a procession will be carried out displaying Veer Savarkar’s portrait by Hindu organisations from Puttur Mahalingeshwar temple to the place where the incident took place.
28-11-24 10:41 pm
Bangalore Correspondent
Karkala Drowning, Udupi News; ಕಾರ್ಕಳದ ದುರ್ಗಾ...
28-11-24 09:41 pm
ಲಾಕಪ್ ಡೆತ್ ; ನಾಲ್ವರು ಪೊಲೀಸರಿಗೆ ಏಳು ವರ್ಷ ಜೈಲು...
28-11-24 05:04 pm
MLA Gaviyappa, DK Shivakumar: ಯಾವುದೇ ಕಾರಣಕ್ಕೂ...
26-11-24 10:46 pm
Shivamogga, Monkey fever, Dinesh Gundu Rao: ಮ...
26-11-24 10:23 pm
27-11-24 02:00 pm
HK News Desk
ರಸ್ತೆ ಬದಿ ಮಲಗಿದ್ದ ಅಲೆಮಾರಿ ಗುಂಪಿನ ಮೇಲಿಂದ ಹರಿದ...
27-11-24 12:36 pm
ಕ್ಯುಆರ್ ಕೋಡ್ ಸಹಿತ ಹೊಸ ನಮೂನೆಯ ಪ್ಯಾನ್ 2.0 ಜಾರಿ...
26-11-24 09:43 pm
BJP Devendra Fadnavis, Eknath Shinde: ಮಹಾರಾಷ್...
26-11-24 07:32 pm
ಪ್ರವಾಸೋದ್ಯಮ ಇಲಾಖೆಗೆ ನಿಗದಿಪಡಿಸಿದ್ದ ದರ್ಶನ ಟಿಕೆಟ...
23-11-24 11:07 pm
28-11-24 09:58 pm
Mangalore Correspondent
Mangalore, DFYI protest, Anupam Agarwal: ಪೊಲೀ...
28-11-24 06:05 pm
VHP, Mangalore, Bangladesh: ಬಾಂಗ್ಲಾದೇಶದಲ್ಲಿ ಹ...
28-11-24 03:24 pm
Belthangady suicide, Crime, Mangalore; ನಂಬಿಸಿ...
28-11-24 02:13 pm
Mangalore, Anupam Agarwal, Ramanatha Rai: ರಸ್...
28-11-24 01:56 pm
27-11-24 03:36 pm
HK News Desk
Mangalore, Robbery, Crime : ಕೊಲ್ಯದ ಜಾಯ್ ಲ್ಯಾಂ...
27-11-24 01:11 pm
Mangalore crime, ACP Dhanya Nayak, Drugs: ಎಸಿ...
26-11-24 03:10 pm
ಹುಬ್ಬಳ್ಳಿ ದರೋಡೆ ಪ್ರಕರಣದಲ್ಲಿ ಮಂಗಳೂರು ನಂಟು ; ಉಳ...
25-11-24 06:17 pm
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm