ದ.ಕ‌. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಕೆ, ರಾತ್ರಿ ಏಳು ಗಂಟೆಗೆ ಪಬ್, ಬಾರ್ ಬಂದ್ ; ಡೀಸಿ ಆರ್ಡರ್ 

16-08-21 11:05 pm       Mangaluru Correspondent   ಕರಾವಳಿ

ಎಲ್ಲಾ ರೀತಿಯ ಪಬ್ ಮತ್ತು ಬಾರ್ ಅಂಡ್ ರೆಸ್ಟೋರೆಂಟ್ ಗಳನ್ನು ರಾತ್ರಿ 7 ಗಂಟೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.  

ಮಂಗಳೂರು, ಆಗಸ್ಟ್ 16: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಮುಂದುವರಿಸಲಾಗಿದೆ. ಅಲ್ಲದೆ, ಎಲ್ಲಾ ರೀತಿಯ ಪಬ್ ಮತ್ತು ಬಾರ್ ಅಂಡ್ ರೆಸ್ಟೋರೆಂಟ್ ಗಳನ್ನು ರಾತ್ರಿ 7 ಗಂಟೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.  

ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ರಾತ್ರಿ 7 ಗಂಟೆಗೆ ಪಬ್, ಬಾರ್ ಗಳನ್ನ ಬಂದ್ ಮಾಡುವಂತೆ ಸೂಚನೆ ನೀಡಿದ್ದಲ್ಲದೆ, ಆಗಸ್ಟ್ 30 ರ ವರೆಗೂ ದ.ಕ ಜಿಲ್ಲೆಯಾದ್ಯಂತ ಈ ಹೊಸ ಆದೇಶ ಜಾರಿ ಇರಲಿದೆ ಎಂದಿದ್ದಾರೆ. ‌

ಕೋವಿಡ್ ಸೋಂಕು ಹೆಚ್ಚಳ ಆಗುತ್ತಿರುವುದರಿಂದ ಈಗಾಗ್ಲೇ ಕಳೆದ ಎರಡು ವಾರಗಳಿಂದ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿತ್ತು.‌ ಇದೀಗ ಕೇರಳದಿಂದ ಬರುವ ವಿದ್ಯಾರ್ಥಿಗಳು ಸೇರಿದಂತೆ ಅವರ ಸಂಪರ್ಕದಲ್ಲಿ ಇರುವವರಲ್ಲಿ ಸೋಂಕು ಹೆಚ್ಚುತ್ತಿರುವುದು ಕಂಡುಬಂದಿದೆ. ‌ಹೀಗಾಗಿ ಆಗಸ್ಟ್ 30ರ ವರೆಗೆ ದ.ಕ ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ಮುಂದುವರಿಸಿ ಆದೇಶ ಮಾಡಲಾಗಿದೆ.

Weekend curfew in Mangalore to continue as usual Pub and bar to close at 7pm orders DC