ಬ್ರೇಕಿಂಗ್ ನ್ಯೂಸ್
23-08-21 10:18 pm Mangaluru correspondent ಕರಾವಳಿ
ಮಂಗಳೂರು, ಆಗಸ್ಟ್ 23: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲಿನ ಮಿಲಿಟರಿ ಏರ್ ಬೇಸ್ ನಲ್ಲಿ ಉದ್ಯೋಗದಲ್ಲಿದ್ದ ಮಂಗಳೂರು ಮೂಲದ ನಾಲ್ಕು ಮಂದಿ ಸುರಕ್ಷಿತವಾಗಿ ಮನೆ ಸೇರಿದ್ದಾರೆ.
ಕಾಬೂಲಿನ ನ್ಯಾಟೋ ಏರ್ ಬೇಸ್ ನಲ್ಲಿ ಕೆಲಸಕ್ಕಿದ್ದ ನಾಲ್ವರನ್ನು ಅಮೆರಿಕದ ವಾಯುಪಡೆ ಆಗಸ್ಟ್ 17 ರಂದು ಕತಾರ್ ಗೆ ಏರ್ ಲಿಫ್ಟ್ ಮಾಡಿತ್ತು. ಅಲ್ಲಿಂದ ಭಾರತದ ವಾಯುಪಡೆ ವಿಮಾನ ಭಾನುವಾರ ದೆಹಲಿಗೆ ಕರೆತಂದಿತ್ತು.
ದೆಹಲಿಯಿಂದ ತೊಕ್ಕೊಟ್ಟು ಕೊಲ್ಯ ನಿವಾಸಿ ಪ್ರಸಾದ್ ಆನಂದ್ ಇಂದು ಬೆಳಗ್ಗೆ ಮನೆ ಸೇರಿದ್ದರೆ, ನಾಲ್ಕು ಮಂದಿ ಇದೀಗ ಮಂಗಳೂರು ವಿಮಾನ ನಿಲ್ದಾಣ ತಲುಪಿದ್ದಾರೆ. ಮೂಡುಬಿದ್ರೆಯ ಜಗದೀಶ ಪೂಜಾರಿ, ಬಜ್ಪೆಯ ದಿನೇಶ್ ರೈ, ಕಿನ್ನಿಗೋಳಿ ಪಕ್ಷಿಕೆರೆಯ ಡೆಸ್ಮಂಡ್ ಡೇವಿಡ್ ಡಿಸೋಜ, ಮಂಗಳೂರು ಉರ್ವಾದ ಶ್ರವಣ್ ಅಂಚನ್ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ.
ದೆಹಲಿಯಿಂದ ರಾತ್ರಿ 8.30 ಕ್ಕೆ ಆಗಮಿಸಿದ ವಿಮಾನದಲ್ಲಿ ಸುರಕ್ಷಿತವಾಗಿ ತಾಯ್ನಾಡು ತಲುಪಿದ್ದಾರೆ. ಇವೆರೆಲ್ಲ 2011 ರಲ್ಲಿ ಉದ್ಯೋಗಕ್ಕೆಂದು ಕಾಬೂಲ್ ಮಿಲಿಟರಿ ಬೇಸ್ ಗೆ ತೆರಳಿದ್ದರು. ದಿನೇಶ್ ರೈ ಮೆಕ್ಯಾನಿಕ್ ಆಗಿದ್ದರೆ, ಇತರರು ಬೇರೆ ಬೇರೆ ಉದ್ಯೋಗದಲ್ಲಿದ್ದರು.
ಜುಲೈ 17 ರಂದು ನಮ್ಮನ್ನು ಕತಾರ್ ಏರ್ಪೋರ್ಟ್ ಗೆ ಏರ್ ಲಿಫ್ಟ್ ಮಾಡಲಾಗಿತ್ತು. ನ್ಯಾಟೋ ಏರ್ ಬೇಸ್ ನಲ್ಲಿ ನಮಗೆ ಯಾವುದೇ ತೊಂದರೆ ಇರಲಿಲ್ಲ. ಹೊರಗೆ ತಾಲಿಬಾನಿಗಳಿಂದ ಗುಂಡಿನ ದಾಳಿಯ ಶಬ್ದ ಕೇಳಿಬರುತ್ತಿತ್ತು. ಒಳಗಡೆ ಇದ್ದವರಿಗೆ ತೊಂದರೆ ಇರಲಿಲ್ಲ. ತುಂಬ ಸುರಕ್ಷಿತವಾಗಿದ್ದೆವು. ಅಮೆರಿಕದ ಪಡೆ ಕತಾರ್ ಗೆ ಒಯ್ದು ಉಳಿಸಿಕೊಂಡಿತ್ತು. ಅಲ್ಲಿಂದ ಭಾರತದ ವಾಯುಪಡೆ ಪರಿಶೀಲನೆ ನಡೆಸಿ, ದೆಹಲಿಗೆ ಕರೆತಂದಿದೆ. ನಾವು ಅಮೆರಿಕ ಮತ್ತು ಭಾರತದ ವಾಯುಪಡೆಗೆ ಧನ್ಯವಾದ ಹೇಳುತ್ತೇವೆ ಎಂದು ಡೆಸ್ಮಂಡ್ ಡಿಸೋಜ ಹೇಳಿದ್ದಾರೆ.
ಈ ಪೈಕಿ ದಿನೇಶ್ ರೈ, ಕಾಬೂಲ್ ಏರ್ಪೋರ್ಟ್ ನಲ್ಲಿ ಜನ ಮುತ್ತಿಗೆ ಹಾಕಿದ್ದು ಸಿಕ್ಕ ಸಿಕ್ಕ ವಿಮಾನದಲ್ಲಿ ಹತ್ತಿ ನೆಲಕ್ಕೆ ಬಿದ್ದಿರುವುದನ್ನು ನೋಡಿದ್ದರಂತೆ. ತಾಲಿಬಾನ್ ಪಡೆಗಳ ಅಟ್ಟಹಾಸದ ಬಗ್ಗೆ ಭಯ ಬಿದ್ದು ಅಲ್ಲಿನ ಜನರು ಬೇರೆ ಕಡೆಗೆ ತೆರಳಲು ಯತ್ನಿಸುತ್ತಿದ್ದರು ಎಂದು ಸ್ಮರಿಸಿದ್ದಾರೆ.
Four Mangalorean stranded in Afghan Kabul reach Mangalore Airport. The four stranded reached Delhi from QATAAR and now reached Mangalore International Airport.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm