ಬ್ರೇಕಿಂಗ್ ನ್ಯೂಸ್
26-08-21 08:44 pm Mangaluru Correspondent ಕರಾವಳಿ
ಮಂಗಳೂರು ಆ.26: ಬಾಲ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ಶೀಘ್ರದಲ್ಲೇ ಇತ್ಯರ್ಥ ಪಡಿಸುವಂತೆ ಮಕ್ಕಳ ರಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸಭೆ ಹಾಗೂ ಚೈಲ್ಡ್ ಲೈನ್ ಸಲಹಾ ಮಂಡಳಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಎರಡು ಬಾಲ ನ್ಯಾಯಮಂಡಳಿಯಲ್ಲಿ ಬಾಕಿ ಇರುವ ಒಟ್ಟು 165 ಪ್ರಕರಣಗಳನ್ನು ಶೀಘ್ರವೇ ಇತ್ಯರ್ಥಪಡಿಸಿ, ಬಾಲನ್ಯಾಯ ನಿಧಿಗೆ ನೀಡಿರುವ ಅನುದಾನವನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಆಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಸಂಘ ಸಂಸ್ಥೆಗಳು, ಬಾಲ ದತ್ತು ಕೇಂದ್ರಗಳನ್ನು ನಡೆಸಲು ಆಸಕ್ತಿಯಿದ್ದೂ, ಅವರ ಬಳಿ ಕಟ್ಟಡ ನಿರ್ಮಿಸಲು ಜಾಗವಿದ್ದಲ್ಲಿ ಅಂತಹ ಸಂಘ ಸಂಸ್ಥೆಗಳಿಗೆ ದತ್ತು ಕೇಂದ್ರಗಳನ್ನು ನಡೆಸಲು ಕಟ್ಟಡ ನಿರ್ಮಿಸಿಕೊಡಲಾಗುವುದು ಎಂದ ಜಿಲ್ಲಾಧಿಕಾರಿ, ಕೋವಿಡ್-19 ಕಾರಣದಿಂದ ಪೋಷಕರಿಬ್ಬರನ್ನೂ ಕಳೆದುಕೊಂಡ ಇತರೇ ಕುಟುಂಬ ಸದಸ್ಯರ ಆರೈಕೆಯಲ್ಲಿರುವ ಮಕ್ಕಳಿಗೆ ಪ್ರತಿ ತಿಂಗಳೂ 3,500 ರೂ. ಸಹಾಯಧನವನ್ನು ಮಕ್ಕಳ ಸಮಗ್ರ ಮತ್ತು ಪಾಲನೆಗಾಗಿ ಮುಖ್ಯಮಂತ್ರಿ ಬಾಲ ಸೇವಾ ಯೋಜನೆಯಡಿ ನೀಡಲಾಗುತ್ತಿದೆ ಎಂದರು.

ಕೋವಿಡ್ ಸಂದರ್ಭದಲ್ಲಿ ಇಬ್ಬರು ಪೋಷಕರು ಅಥವಾ ದತ್ತು ಪೋಷಕರನ್ನು ಕಳೆದುಕೊಂಡ 18 ವರ್ಷ ಮೇಲ್ಪಟ್ಟ ಮಕ್ಕಳ ಪಾಲನೆ, ರಕ್ಷಣೆ ಒಳಗೊಂಡಂತೆ ಅವರ ಆರೋಗ್ಯ ವಿಮೆ, ಶಿಕ್ಷಣ ಮತ್ತು ಸಮಾಜದಲ್ಲಿ ಸ್ವಾವಲಂಬಿಯಾಗಿ ಜೀವನ ನಿರ್ವಹಿಸಲು ಅನುಕೂಲವಾಗುವಂತೆ 23 ವರ್ಷ ತುಂಬಿದ ಪ್ರತಿ ಮಗುವಿಗೆ 10 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿಗಳ ಪಿ.ಎಂ. ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಯಡಿ ನೀಡಲಾಗುವುದು. ಈ ಯೋಜನೆಯಡಿ ಈಗಾಗಲೇ 5 ಅನಾಥ ಮಕ್ಕಳನ್ನು ಗುರುತಿಸಿದ್ದು, ಮಕ್ಕಳ ಕಲ್ಯಾಣ ಸಮಿತಿ ವತಿಯಿಂದ ಅವರಿಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.
ಬಾಲನ್ಯಾಯ ಮಕ್ಕಳ ಕಾಯ್ದೆಯಡಿ ನೋಂದಾಯಿಸಿರುವ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿರುವ 18 ವರ್ಷ ಪೂರ್ಣಗೊಂಡ ಮಕ್ಕಳ ಮುಂದಿನ ಪುನರ್ವಸತಿ, ಸಮಾಜದಲ್ಲಿ ಗೌರವಯುತವಾಗಿ ಮತ್ತು ಅವರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಸಲು ಅನುಕೂಲವಾಗುವಂತೆ ಉಪಕಾರ್ ಎಂಬ ಹೊಸ ಯೋಜನೆಯಡಿ 5,000 ರೂ.ಗಳ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದರು.
ನಗರ ಪ್ರದೇಶಗಳಲ್ಲಿ ಮಕ್ಕಳು ಭಿಕ್ಷಾಟಣೆ ಮಾಡಿಸುವಂತಹ ಚಟುವಟಿಕೆಗಳು ಹೆಚ್ಚುತ್ತಿದ್ದು, ಅಂತಹ ವ್ಯಕ್ತಿಗಳನ್ನು ಗುರುತಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ರಕ್ಷಿಸಿ ಅವರಿಗೆ ಪುನರ್ವಸತಿ ಕಲ್ಪಿಸಿಕೊಡಬೇಕು ಎಂದು ತಿಳಿಸಿದರು.

ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ ಅವರ ಸುರಕ್ಷತೆಗೆ ಸಂಬಂಧಿಸಿ ಚೈಲ್ಡ್ ಲೈನ್ ಸಹಾಯವಾಣಿ ಸಂಖ್ಯೆ 1098 ಅನ್ನು ಅನುಷ್ಟಾನಗೊಳಿಸಲಾಗಿದ್ದು, ಈ ಸಹಾಯವಾಣಿಯ ಬಗ್ಗೆ ವ್ಯಾಪಕ ಪ್ರಚಾರ ಮತ್ತು ಜನ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಕೆ.ಎಸ್.ಆರ್.ಟಿ.ಸಿ ಮತ್ತು ರೈಲು ನಿಲ್ದಾಣಗಳಲ್ಲಿ ಚೈಲ್ಡ್ ಲೈನ್ ಸಹಾಯವಾಣಿಯ ಕುರಿತ ಮಾಹಿತಿ ಫಲಕಗಳನ್ನು ಅಳವಡಿಸಲು ಸೂಚಿಸಿದರು.
ಬಂದರು ಪ್ರದೇಶದಲ್ಲಿ ಬಾಲಕಾರ್ಮಿಕರು ಹೆಚ್ಚು ಕಂಡುಬರುತ್ತಿದ್ದು, ಅಂತಹ ಚಟುವಟಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ಚೈಲ್ಡ್ ಲೈನ್ ಸಹಾಯವಾಣಿ ಉಪಯುಕ್ತವಾಗುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪಾಪ ಭೋವಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಯೋಗೇಶ್ ಎಸ್.ಬಿ, ಮಕ್ಕಳ ರಕ್ಷಣಾ ಅಧಿಕಾರಿ ಮಂಜುಳಾ ಹಾಗೂ ಇತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Mangalore, Govt announces Rs 10 lakh, free education for children orphaned in pandemic said DC Dr Rajendra Kumar.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm