ದ.ಕ. ಜಿಲ್ಲೆಯಲ್ಲಿ ಇಂದು 326 ಮಂದಿಯಲ್ಲಿ ಸೋಂಕು - 202 ಮಂದಿ ಡಿಸ್ಚಾರ್ಜ್

06-09-20 09:16 pm       Mangalore Reporter   ಕರಾವಳಿ

ದ.ಕ. ಜಿಲ್ಲೆಯಲ್ಲಿ ಇಂದು 202 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮಂಗಳೂರು ತಾಲೂಕಿನ ಓರ್ವ ಸೋಂಕಿತ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಮಂಗಳೂರು, ಸೆಪ್ಟೆಂಬರ್ 06: ದ.ಕ. ಜಿಲ್ಲೆಯಲ್ಲಿ ಕೊರೋನ ಹಾವಳಿ ಮಿತಿಮೀರಿದ್ದು, ರವಿವಾರ ಮತ್ತೆ 326 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಓರ್ವ ಸೋಂಕಿತ ಮೃತಪಟ್ಟಿದ್ದು, 202 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಮಂಗಳೂರು ತಾಲೂಕಿನ ಓರ್ವ ಸೋಂಕಿತ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತಪಟ್ಟವರ ಸಂಖ್ಯೆ 401ಕ್ಕೆ ಏರಿಕೆಯಾಗಿದೆ.

ಸೋಂಕಿತರ ಪೈಕಿ 168 ಮಂದಿಯಲ್ಲಿ ಸಾಮಾನ್ಯ ಶೀತ ಲಕ್ಷಣ ಕಂಡುಬಂದಿದೆ. ಸೋಂಕಿತರ ಸಂಪರ್ಕದಲ್ಲಿದ್ದ 34 ಮಂದಿ, ತೀವ್ರ ಉಸಿರಾಟ ತೊಂದರೆಯ 15, ಸೋಂಕು ನಿಗೂಢ ಪ್ರಕರಣದಲ್ಲಿ 109 ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.

118 ಪುರುಷರು ಹಾಗೂ 74 ಮಹಿಳೆಯರು ಸೇರಿದಂತೆ 192 ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿವೆ. 81 ಪುರುಷರು ಹಾಗೂ 53 ಮಹಿಳೆಯರು ಸಹಿತ 134 ಮಂದಿಯಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ.

ಸೋಂಕಿತರ ಪೈಕಿ ಮಂಗಳೂರು ತಾಲೂಕು ಅಗ್ರಸ್ಥಾನದಲ್ಲಿದೆ. ಮಂಗಳೂರು-187, ಬಂಟ್ವಾಳ-39, ಪುತ್ತೂರು-28, ಸುಳ್ಯ-27, ಬೆಳ್ತಂಗಡಿ-33, ಹೊರಜಿಲ್ಲೆಯ 12 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14,926ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ರವಿವಾರ 202 ಮಂದಿ ವಿವಿಧ ಆಸ್ಪತ್ರೆ, ಮನೆ, ಕೋವಿಡ್ ಆರೈಕೆ ಕೇಂದ್ರದಿಂದ ಬಿಡುಗಡೆಯಾಗಿದ್ದಾರೆ. ಈ ಪೈಕಿ ಮನೆಯಿಂದ 110 ಮಂದಿ, ಕೋವಿಡ್ ಆರೈಕೆ ಕೇಂದ್ರದಿಂದ ಇಬ್ಬರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 11,441 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3084 ಸಕ್ರಿಯ ಪ್ರಕರಣಗಳಿವೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

Join our WhatsApp group for latest news updates