ಬ್ರೇಕಿಂಗ್ ನ್ಯೂಸ್
29-08-21 02:25 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 29: ಸೆಪ್ಟಂಬರ್ ಒಂದರಿಂದ ಜಿಲ್ಲೆಯಾದ್ಯಂತ ದ್ವಿತೀಯ ಪಿಯು ತರಗತಿಯನ್ನು ಆರಂಭಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅನುಮತಿ ನೀಡಿದ್ದಾರೆ. ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಕಲಿಕೆಯು ಮಹತ್ವದ್ದಾಗಿರುವುದರಿಂದ ಇದರ ಅಗತ್ಯವನ್ನು ಮನಗಂಡು ಷರತ್ತುಗಳೊಂದಿಗೆ ತರಗತಿ ನಡೆಸಲು ಅನುಮತಿ ನೀಡಿದ್ದಾಗಿ ತಿಳಿಸಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಸೆ.15ರ ವರೆಗೂ ಭೌತಿಕ ತರಗತಿಗಳನ್ನು ನಡೆಸದಂತೆ ಆದೇಶ ನೀಡಿದ್ದ ಜಿಲ್ಲಾಧಿಕಾರಿ ಈಗ ದ್ವಿತೀಯ ಪಿಯುಸಿ ತರಗತಿಗಳನ್ನು ನಡೆಸಲೇಬೇಕಾದ ಅನಿವಾರ್ಯತೆ ಇರುವುದರಿಂದ ಸೆ.1ರಿಂದ ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಿ ತರಗತಿ ನಡೆಸುವಂತೆ ಸೂಚನೆ ನೀಡಿದ್ದಾರೆ.
ಇದೇ ವೇಳೆ, ಮೊದಲ ಪಿಯು ತರಗತಿಯನ್ನು ಹಾಗೂ ಪದವಿ ಮತ್ತು ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ಪೂರ್ವಾನುಮತಿ ಪಡೆದು ಸೆ.15ರ ಬಳಿಕ ತರಗತಿ ಆರಂಭಿಸುವಂತೆ ಸೂಚಿಸಿದ್ದಾರೆ. ಕೇರಳದಿಂದ ಬರುವ ವಿದ್ಯಾರ್ಥಿಗಳು ಏಳು ದಿನಗಳ ಕಾಲ ಕ್ವಾರಂಟೈನ್ ಇಡಲು ಕಾಲೇಜಿನಲ್ಲಿ ವಸತಿ ಸಹಿತ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಅಲ್ಲದೆ, ಸೋಂಕು ಪೀಡಿತ ವಿದ್ಯಾರ್ಥಿಗಳಿಗೆ ಕೋವಿಡ್ ಕೇರ್ ಸೆಂಟರ್ ಗಳನ್ನು ಕಡ್ಡಾಯವಾಗಿ ತೆರೆಯಬೇಕು. ಏಳು ದಿನಗಳ ಕ್ವಾರಂಟೈನ್ ಬಳಿಕ ವಿದ್ಯಾರ್ಥಿಗಳು ಆರ್ ಟಿವಿಸಿಆರ್ ಟೆಸ್ಟ್ ಮಾಡಿಸಿ ತರಗತಿಗೆ ಹಾಜರಾಗಬೇಕು. ಕ್ವಾರಂಟೈನಲ್ಲಿದ್ದರೂ, ವಿದ್ಯಾರ್ಥಿಗಳು ಆನ್ ಲೈನ್ ತರಗತಿಯಲ್ಲಿ ಭಾಗವಹಿಸಬೇಕು ಎಂದು ಷರತ್ತು ವಿಧಿಸಿದ್ದಾರೆ.
ಕಾಲೇಜಿನಲ್ಲಿ ನೂರಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಇರುವಂತಿಲ್ಲ. ಮೂರು ದಿನಗಳಿಗೊಮ್ಮೆ ಪಾಳಿಯಂತೆ ತರಗತಿ ನಡೆಸಬೇಕು. ಪಾಳಿಯಂತೆ ನಡೆಸುವ ತರಗತಿಯಲ್ಲಿ 50 ಶೇಕಡಾ ವಿದ್ಯಾರ್ಥಿಗಳು ಮಾತ್ರ ಇರಬೇಕು. ಮೂರು ದಿನ ಆನ್ ಲೈನ್, ಇತರ ಮೂರು ದಿನ ಭೌತಿಕ ತರಗತಿಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಇದಲ್ಲದೆ, ಕಾಲೇಜಿನ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬಂದಿಗಳು ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಪ್ರಮಾಣ ಪತ್ರ ಹೊಂದಿರಬೇಕು. ಅಲ್ಲದೆ, ಕೊರೊನಾ ಲಸಿಕೆಯನ್ನು ಹಾಕಿಸಿರಬೇಕು. ಕಾಲೇಜು ತರಗತಿ ವೇಳೆ ಕೋವಿಡ್ ನಿಯಮ ಪಾಲನೆಯಾಗುವ ಬಗ್ಗೆ ನಿಗಾ ವಹಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳು, ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳು, ಆಯಾ ಕಾಲೇಜುಗಳ ಪ್ರಾಂಶುಪಾಲರನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕೇರಳದಿಂದ ಪ್ರತೀ ದಿನ ಬರುವ ವಿದ್ಯಾರ್ಥಿಗಳು ಮತ್ತು ಇತರ ಕಾಲೇಜು ಸಿಬಂದಿ ಏಳು ದಿನಗಳಿಗೊಮ್ಮೆ ಆರ್ ಟಿಪಿಸಿಆರ್ ಟೆಸ್ಟ್ ನಡೆಸಿ, ಕೋವಿಡ್ ನೆಗೆಟಿವ್ ವರದಿ ಹಾಜರುಪಡಿಸಬೇಕು ಎಂದು ಜಿಲ್ಲಾಧಿಕಾರಿ ಷರತ್ತು ವಿಧಿಸಿದ್ದಾರೆ.
Deputy commissioner (DC) of Dakshina Kannada district Dr Rajendra K V has issued guidelines ahead of the resumption of physical classes for second PU students in the district. After several months of closure due to second wave of coronavirus, physical classes for second PU students are now set to begin from September 1.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm