ಬ್ರೇಕಿಂಗ್ ನ್ಯೂಸ್
30-08-21 06:21 pm Mangaluru correspondent ಕರಾವಳಿ
ಉಳ್ಳಾಲ, ಆ.30: ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಆಗಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ರೂಪಿಸಲಾದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ 10 ವರ್ಷದೊಳಗೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಸಿ.ಎನ್. ಹೇಳಿದರು.
ಮಂಗಳೂರು ವಿವಿ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ವತಿಯಿಂದ ಕೊಣಾಜೆಯ ಮಂಗಳಗಂಗೋತ್ರಿಯ ಮಂಗಳಾ ಸಭಾಂಗಣದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ- 2020 ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣದ ಕಲಿಕಾ ನೀತಿ, ಮೌಲ್ಯಮಾಪನ, ಪಠ್ಯಕ್ರಮದಲ್ಲಿ ಸುಧಾರಣೆ ಆಗಬೇಕಿದೆ. ಆದರೆ ಈ ನಿಟ್ಟಿನಲ್ಲಿ ನಾವು ಹೆಚ್ಚಿನ ಆದ್ಯತೆ ನೀಡಿಲ್ಲ. ಕಲಿಕೆಯ ಆವಿಷ್ಕಾರಕ್ಕೆ ಆದ್ಯತೆ ನೀಡಿದರೆ ಸಾಲದು. ಹೊಸ ಶಿಕ್ಷಣ ನೀತಿ ರೂಪಿಸಲು 5 ವರ್ಷ ತೆಗೆದುಕೊಳ್ಳಲಾಗಿದೆ. 15 ವರ್ಷದೊಳಗೆ ಈ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಆದರೆ ರಾಜ್ಯವು 10 ವರ್ಷದೊಳಗೆ ಅನುಷ್ಠಾನಗೊಳಿಸುವ ಗುರಿ ಹೊಂದಿದೆ ಎಂದು ಅಶ್ವಥ್ ನಾರಾಯಣ ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಆತುರದಲ್ಲಿ ಮಾಡಲು ಹೊರಟಿದ್ದಾರೆ ಅಂತ ಕೆಲವರು ಹೇಳ್ತಿದಾರೆ. ಆದರೆ ಈ ಮಾತು ಸರಿಯಲ್ಲ, ಈ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ. ಈ ನೀತಿ ಕೇಸರೀಕರಣ ಅನ್ನೋದು ಸುಮ್ಮನೆ, ಈ ವಾದದಲ್ಲಿಯೂ ಹುರುಳಿಲ್ಲ. ಇದರಲ್ಲಿ ವಿದ್ಯಾರ್ಥಿಗಳಿಗೆ ವಿರುದ್ಧವಾದ ಅಂಶಗಳಿದ್ದರೆ ತೋರಿಸಿ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಲ್ಲಿ ಈಗಿನ ವಿಷಯಗಳನ್ನೇ ಬಳಸುತ್ತೇವೆ. ಆದ್ರೆ ವಿದ್ಯಾರ್ಥಿಗಳ ಆಯ್ಕೆಗೆ ಪ್ರತ್ಯೇಕವಾದ ಅವಕಾಶವಿದೆ ಎಂದು ಹೇಳಿದರು.
ಮಂಗಳೂರು ವಿವಿ ಕುಲಪತಿ ಡಾ.ಪಿ.ಎಸ್. ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶಾಸಕರಾದ ಉಮನಾಥ ಕೋಟ್ಯಾನ್, ಲಾಲಾಜಿ ಮೆಂಡನ್, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ. ಬಿ. ತಿಮ್ಮೇಗೌಡ ಮತ್ತಿತರರು ಉಪಸ್ಥಿತರಿದ್ದರು.
“Some people are saying that the government is trying to implement the National Education Policy (NEP) in haste. This is not correct. Lots of discussions have taken place in this regard. It is a myth that this policy is ‘saffronisation’ of the country. Let anyone show the points that are against the students in this policy. We will use the present subjects itself during the implementation of NEP. But the students have separate opportunity to choose the subjects,” said higher education minister Dr Ashwath Narayan.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm