ಬ್ರೇಕಿಂಗ್ ನ್ಯೂಸ್
30-08-21 11:17 pm Mangaluru Correspondent ಕರಾವಳಿ
ಉಡುಪಿ, ಆಗಸ್ಟ್ 30: ಇಂದು ಸಂಜೆ ನಗರದ ಸಂತೆಕಟ್ಟೆಯ ನಡುರಸ್ತೆಯಲ್ಲಿ ಪ್ರಿಯಕರನ ಚಾಕು ಇರಿತಕ್ಕೊಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಯುವತಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾಳೆ.
ಅಂಬಾಗಿಲು ಸಮೀಪದ ಕಕ್ಕುಂಜೆ ನಿವಾಸಿ ಸೌಮ್ಯಶ್ರೀ(26) ಕೊಲೆಯಾದ ಯುವತಿ. ಕೃತ್ಯ ಎಸಗಿದ್ದ ಆರೋಪಿ ಅಲೆವೂರು ರಾಂಪುರ ನಿವಾಸಿ ಸಂದೇಶ್ ಕುಲಾಲ್(26) ಗಂಭೀರ ಸ್ಥಿತಿಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಸೌಮ್ಯಶ್ರೀ ಸಂತೆಕಟ್ಟೆಯ ರಾಷ್ಟ್ರೀಕೃತ ಬ್ಯಾಂಕ್ ಒಂದರ ಆಧಾರ್ ಕಾರ್ಡ್ ಲಿಂಕ್ ವಿಭಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಡೇಟಾ ಎಂಟ್ರಿ ಆಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರೆ, ಸಂದೇಶ್ ಕುಲಾಲ್ ಉಡುಪಿಯ ಐಡಿಯಲ್ ಮೆಡಿಕಲ್ ಸಂಸ್ಥೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ. ಇವರು ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗುತ್ತಿದೆ.
ಸೌಮಶ್ರೀ ಸೋದರರಿಬ್ಬರು ವಿದೇಶದಲ್ಲಿದ್ದು, ತಂದೆ ಅನಾರೋಗ್ಯ ಪೀಡಿತರಿದ್ದಾರೆ. ಈ ನಡುವೆ, ಇತ್ತೀಚೆಗೆ ಸೌಮ್ಯಶ್ರೀಗೆ ಬೇರೆ ಯುವಕನ ಜೊತೆ ನಿಶ್ಚಿತಾರ್ಥ ಆಗಿತ್ತು. ಇದರಿಂದ ಕುಪಿತನಾಗಿದ್ದ ಸಂದೇಶ ಕುಲಾಲ್, ಆಕೆಯ ಜೊತೆ ಜಗಳ ನಡೆಸಿದ್ದ. ಇಂದು ಸಂಜೆ ಕೆಲಸ ಮುಗಿಸಿ ತನ್ನ ಸ್ಕೂಟಿಯಲ್ಲಿ ಮನೆಗೆ ವಾಪಸ್ಸು ಹೋಗುತ್ತಿದ್ದ ಸೌಮ್ಯಶ್ರೀಯನ್ನು ಬೈಕಿನಲ್ಲಿ ಹಿಂಬಾಲಿಸಿದ್ದ ಸಂದೇಶ್, ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆದು ನಿಲ್ಲಿಸಿದ್ದ. ಇಬ್ಬರೂ ವಾಗ್ವಾದ ನಡೆಸಿದ್ದು ಬಳಿಕ ಸಂದೇಶ್ ತನ್ನಲ್ಲಿದ್ದ ಚೂರಿಯಿಂದ ಸೌಮ್ಯಶ್ರೀಗೆ ಇರಿದಿದ್ದಾನೆ. ನಂತರ ಅದೇ ಚಾಕುವಿನಿಂದ ಆತ ತನ್ನ ಕುತ್ತಿಗೆ ಕೊಯ್ದುಕೊಂಡಿದ್ದ.
ರಸ್ತೆಯಲ್ಲಿ ಹೊರಳಾಡಿದ್ರೂ ಯಾರೂ ಹತ್ತಿರ ಸುಳಿಯಲಿಲ್ಲ !
ಆದರೆ, ರಸ್ತೆಯಲ್ಲಿ ಬಿದ್ದು ಹೊರಳಾಡುತ್ತಿದ್ದರೂ ಸ್ಥಳೀಯರು ಸೇರಿ ವಿಡಿಯೋ ಮಾಡಿ, ಮನಸ್ಸಿಗೆ ಬಂದ ರೀತಿ ಹೀಯಾಳಿಸಿದ್ದರೇ ವಿನಾ ಅವರನ್ನು ಆಸ್ಪತ್ರೆಗೆ ಸೇರಿಸಿರಲಿಲ್ಲ. ಆಕೆಯನ್ನು ಕೊಂದವನು ಸಾಯಲಿ ಬಿಡಿ ಎಂದು ದೂರುತ್ತಾ ನಿಂತಿದ್ದರು. ಯುವತಿಯನ್ನು ಕೂಡಲೇ ಆಸ್ಪತ್ರೆಗೆ ಒಯ್ಯುತ್ತಿದ್ದರೆ ಬದುಕುತ್ತಿದ್ದಳೋ ಏನೋ.. ಹದಿನೈದಿಪ್ಪತ್ತು ನಿಮಿಷ ಕಾಲ ರಸ್ತೆಯಲ್ಲಿ ಬಿದ್ದು ಹೊರಳಾಡುತ್ತಿದ್ದರೆ, ಜನ ಸೇರಿ ನೋಡುತ್ತಿದ್ದರು. ಕೆಲವರು ಅವರನ್ನು ಆಸ್ಪತ್ರೆಗೆ ಒಯ್ಯುವ ಎಂದು ಮುಂದಾಗಿದ್ದರೆ, ಅದಕ್ಕೆ ಇತರರು ತಡೆ ಒಡ್ಡುತ್ತಿದ್ದುದು ವಿಡಿಯೋದಲ್ಲಿ ದಾಖಲಾಗಿದೆ. ಅಷ್ಟು ಹೊತ್ತು ರಸ್ತೆಯಲ್ಲಿ ಕೋಡಿಯಂತೆ ನೆತ್ತರು ಹರಿದಿತ್ತು. ಇದರಿಂದಲೇ ಸಾವಾಗಿದೆ.
In the incident where a man stabbed woman in broad daylight here on Monday August 30, the woman was declared brought dead at the hospital. The deceased is 28-year-old Soumyashree Bhandary. The man who stabbed her is Sandeesh Kulal (28). The incident took place near Santhekatte petrol pump.It maybe recalled, earlier in the evening on Monday, the man waylaid the woman on the road when she was travelling on her scooter. He then stabbed her in the stomach with a knife. He then slit his own throat.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm