ಬ್ರೇಕಿಂಗ್ ನ್ಯೂಸ್
01-09-21 01:29 pm Mangaluru Correspondent ಕರಾವಳಿ
ಮಂಗಳೂರು, ಸೆ.1: ಫಲ್ಗುಣಿ ನದಿಯಿಂದ ವಿಷಯುಕ್ತ ನೀರನ್ನು ಜನರಿಗೆ ಕುಡಿಯಲು ಕೊಡುತ್ತಿರುವ ವಿಚಾರದ ಬಗ್ಗೆ ಹೈಕೋರ್ಟಿಗೆ ವರದಿ ಸಲ್ಲಿಕೆಯಾಗಿದ್ದು, ನ್ಯಾಯಾಧೀಶರು ಮಂಗಳೂರು ಮಹಾನಗರ ಪಾಲಿಕೆಯ ಕಾರ್ಯಶೈಲಿ ಬಗ್ಗೆ ಮತ್ತೆ ಗರಂ ಆಗಿದ್ದಾರೆ. ನೀವು ನೀರಿನೊಂದಿಗೆ ವಿಷವನ್ನು ಬೆರಸಿ ಜನರಿಗೆ ಕುಡಿಯಲು ಕೊಡುತ್ತಿದ್ದೀರಾ ಎಂದು ಮಹಾನಗರ ಪಾಲಿಕೆಯನ್ನು ತೀವ್ರವಾಗಿ ತರಾಟೆಗೆ ಎತ್ತಿಕೊಂಡಿದೆ.

ಮಂಗಳೂರು ತಾಲೂಕಿನ 12 ಗ್ರಾಮಗಳ ವ್ಯಾಪ್ತಿಗೆ ಮರವೂರು ಡ್ಯಾಮಿನಿಂದ ಕುಡಿಯುವ ನೀರನ್ನು ಕೊಡಲಾಗುತ್ತಿದೆ. ಇದರ ಬಗ್ಗೆ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಲಿನ ನೀರನ್ನು ಕುಡಿಯಲು ಕೊಡುತ್ತಿರುವುದಾಗಿ ಆಕ್ಷೇಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಲಾಗಿತ್ತು. ಆನಂತರ ಹೈಕೋರ್ಟ್, ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾಧಿಕಾರಕ್ಕೆ ನೀರಿನ ತಪಾಸಣೆಗೆ ಸೂಚನೆ ನೀಡಿತ್ತು. ತಿಂಗಳ ಹಿಂದೆ ಮಾಲಿನ್ಯ ನಿಯಂತ್ರಣ ಮಂಡಳಿಯವರು ನೀರಿನಲ್ಲಿ ವಿಷಕಾರಿ ವಸ್ತು ಇರುವ ಬಗ್ಗೆ ಹೈಕೋರ್ಟಿಗೆ ವರದಿಯನ್ನೂ ನೀಡಿದ್ದರು.



ಇದೀಗ ಮಾಲಿನ್ಯ ನಿಯಂತ್ರಣ ಮಂಡಳಿಯ ಪರ ವಕೀಲರು ಪ್ರಯೋಗಾಲಯ ವರದಿಯನ್ನು ನ್ಯಾಯಾಧೀಶರ ಮುಂದೆ ಸಲ್ಲಿಸಿದ್ದಾರೆ. ಜಲಾಶಯ ಸೇರುವ ನೀರಿನಲ್ಲಿ ಅಮೋನಿಯಂ ನೈಟ್ರೇಟ್ ಮತ್ತು ಕಬ್ಬಿಣ, ಗಂಧಕ ರೀತಿಯ ವಿಷಕಾರಿ ಅಂಶಗಳು ಇರುವ ಬಗ್ಗೆ ವರದಿ ನೀಡಿದ್ದರು. ಅಲ್ಲದೆ, ಈ ನೀರನ್ನು ಕುಡಿಯಲು ಬಳಸುವುದು ಸೂಕ್ತವಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದ್ದರು. ಅಲ್ಲದೆ, ಪಚ್ಚನಾಡಿ ತ್ಯಾಜ್ಯ ಶುದ್ಧೀಕರಣ ಘಟಕದಿಂದ ಯಾವುದೇ ರೀತಿಯಲ್ಲಿ ಕಲುಷಿತ ನೀರನ್ನು ಬಿಡಬಾರದು ಎಂದು ಮಂಗಳೂರಿನ ಪರಿಸರ ಅಧಿಕಾರಿಗಳು ವರದಿಯಲ್ಲಿ ಹೇಳಿದ್ದರು.
ವರದಿಯ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಕುಡಿಯುವ ನೀರು ಮಲಿನವಾಗಿರುವುದು ಗಂಭೀರ ವಿಚಾರ. ನೀವು ಜನರಿಗೆ ನೀರಿನೊಂದಿಗೆ ವಿಷ ಬೆರಸಿ ಕೊಡುತ್ತಿದ್ದೀರಾ ? ನದಿಯಲ್ಲಿ ವಿಷಕಾರಿ ಅಂಶಗಳಿವೆ ಅಂದರೆ, ಅದನ್ನೇ ಕುಡಿಯಲು ಕೊಡುತ್ತಿರೋದಾ.. ಶುದ್ಧ ಕುಡಿಯುವ ನೀರಿಗೆ ಏನು ಪರ್ಯಾಯ ವ್ಯವಸ್ಥೆ ಮಾಡಿದ್ದೀರಿ ಎಂದು ರಾಜ್ಯ ಸರಕಾರ ಮತ್ತು ಮಂಗಳೂರು ಮಹಾನಗರ ಪಾಲಿಕೆಯನ್ನು ತೀವ್ರವಾಗಿ ಪ್ರಶ್ನೆ ಮಾಡಿದ್ದು, ಮುಂದಿನ ವಿಚಾರಣೆ ದಿನಾಂಕದ ಒಳಗೆ ಪರ್ಯಾಯ ವ್ಯವಸ್ಥೆ ಬಗ್ಗೆ ವರದಿ ನೀಡುವಂತೆ ನಿರ್ದೇಶನ ನೀಡಿದೆ.
Karnataka high court slams MCC over Maravoor dam issue questions if you have drunk poisoned water. The marvoor dam has been polluted by dirty seepage water and has been getting circulated to 12 villages of Mangalore.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm