ಅಂತೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಯು ಕಾಲೇಜು ತರಗತಿ ಆರಂಭ

01-09-21 01:48 pm       Mangaluru Correspondent   ಕರಾವಳಿ

ಕೋವಿಡ್ ಎರಡನೇ ಅಲೆ ಕಾರಣದಿಂದ ಮುಚ್ಚಲ್ಪಟ್ಟಿದ್ದ ದ.ಕ. ಜಿಲ್ಲೆಯ ದ್ವಿತೀಯ ಪಿಯು ಕಾಲೇಜುಗಳು ಮತ್ತೆ ತೆರೆದುಕೊಂಡಿದೆ‌‌. 

ಮಂಗಳೂರು, ಸೆ.1 : ಕೋವಿಡ್ ಎರಡನೇ ಅಲೆ ಕಾರಣದಿಂದ ಮುಚ್ಚಲ್ಪಟ್ಟಿದ್ದ ದ.ಕ. ಜಿಲ್ಲೆಯ ದ್ವಿತೀಯ ಪಿಯು ಕಾಲೇಜುಗಳು ಮತ್ತೆ ತೆರೆದುಕೊಂಡಿದೆ‌‌. 

ಕೋವಿಡ್ ಮಾರ್ಗಸೂಚಿ ಅನ್ವಯ, ಬೆಳಗ್ಗೆ 9.30ರಿಂದ ಮಧ್ಯಾಹ್ನ 1.30ರ ವರೆಗೆ ಶೇ.50ರಷ್ಟು ವಿದ್ಯಾರ್ಥಿಗಳ ಹಾಜರಾತಿಯೊಂದಿಗೆ ತರಗತಿ ನಡೆಸಲು ಸೂಚಿಸಲಾಗಿದೆ. ಅದಕ್ಕಾಗಿ ಬ್ಯಾಚ್‌ವೈಸ್ ತರಗತಿ ನಡೆಸಲಾಗುತ್ತಿದೆ. ಅಲ್ಲದೆ, ಕೋವಿಡ್ ಮಾರ್ಗಸೂಚಿ ಪಾಲನೆಯ ಜವಾಬ್ದಾರಿಯನ್ನು ಆಯಾ ಕಾಲೇಜಿನ ಪ್ರಾಂಶುಪಾಲರು ವಹಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

18 ವರ್ಷದೊಳಗಿನ ಮಕ್ಕಳಿಗೆ ಇನ್ನೂ ಲಸಿಕೆ ಕೊಡಿಸುವ ಪ್ರಕ್ರಿಯೆ ಆರಂಭಗೊಂಡಿಲ್ಲ. ಹಾಗಾಗಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಲಸಿಕೆಯ ಕಡ್ಡಾಯ ಅನ್ನುವುದು ಅನ್ವಯವಾಗುತ್ತಿಲ್ಲ. ಆದರೆ, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದ ಎಲ್ಲರೂ ಕಡ್ಡಾಯವಾಗಿ ಲಸಿಕೆ ಕೊಡಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣ ಪತ್ರ ಹೊಂದಿರಬೇಕು.‌ ವಸತಿ ನಿಲಯದ ಹಾಗೂ ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ತರಗತಿಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Dakshina Kannada second PUC college starts today after a long hault due to covid.