ವೆಂಟಿಲೇಟರ್, ಐಸಿಯು ಕೊರತೆ ; ವೆನ್ಲಾಕ್ ಮುಂದೆ ಕಾಂಗ್ರೆಸ್ ಧರಣಿ 

07-09-20 05:20 pm       Mangalore Reporter   ಕರಾವಳಿ

ವೆಂಟಿಲೇಟರ್ ಇಲ್ಲದೆ ತುರ್ತು ಅಗತ್ಯವುಳ್ಳ ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾ‌ಂಗ್ರೆಸ್ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ‌

ಮಂಗಳೂರು, ಸೆ.7: ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ವೆಂಟಿಲೇಟರ್, ಐಸಿಯು ಬೆಡ್ ಗಳ ಕೊರತೆ ಎದುರಾಗಿದೆ. ಸೂಕ್ತ ಸೌಲಭ್ಯ ಒದಗಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾ‌ಂಗ್ರೆಸ್ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ‌

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ‌ ಮುಂದೆ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನೇತೃತ್ವದಲ್ಲಿ ಧರಣಿ ನಡೆಸಲಾಯಿತು.

ವೆಂಟಿಲೇಟರ್ ಇಲ್ಲದೆ ತುರ್ತು ಅಗತ್ಯವುಳ್ಳ ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಜಿಲ್ಲೆಯ ಅಗತ್ಯಗಳನ್ನು ಪೂರೈಸಲು ರಾಜ್ಯ ಸರಕಾರ ಹಾಗೂ ರಾಜ್ಯದ ಆರೋಗ್ಯ ಸಚಿವರು ವಿಫಲರಾಗಿದ್ದಾರೆ. ಈ ಹೊಣೆ ಹೊತ್ತು ತಕ್ಷಣ ಆರೋಗ್ಯ ಸಚಿವರು ರಾಜೀನಾಮೆ ನೀಡಬೇಕು‌ ಎಂದು ದ.ಕ‌. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಒತ್ತಾಯ ಮಾಡಿದ್ದಾರೆ‌. 

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಐವನ್ ಡಿಸೋಜ, ಜೆ.ಆರ್.ಲೋಬೋ, ಮೊಯ್ದಿನ್ ಬಾವಾ, ಪಕ್ಷದ ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಮುಹಮ್ಮದ್ ಮೋನು, ವಸಂತ ಬೆರ್ನಾಡ್, ಸಂತೋಷ್ ಕುಮಾರ್ ಶೆಟ್ಟಿ ಅಸೈಗೋಳಿ, ಸುರೇಂದ್ರ ಕಂಬಳಿ ಮತ್ತಿತರರು ಧರಣಿಯಲ್ಲಿ ಪಾಲ್ಗೊಂಡಿದ್ದರು.

Join our WhatsApp group for latest news updates