ಬ್ರೇಕಿಂಗ್ ನ್ಯೂಸ್
03-09-21 05:59 pm Mangaluru Correspondent ಕರಾವಳಿ
ಉಳ್ಳಾಲ, ಸೆ.3: ಉಳ್ಳಾಲ ಸಯ್ಯದ್ ಮದನಿ ದರ್ಗಾ ಸಮಿತಿ ಮತ್ತು ಉಳ್ಳಾಲ ಜುಮಾ ಮಸೀದಿ ಆಶ್ರಯದಲ್ಲಿ ಕುದ್ರೋಳಿ ಕ್ಷೇತ್ರದ ಗುರುಬೆಳದಿಂಗಳು ಸೇವಾ ಸಂಸ್ಥೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮದಿನಾಚರಣೆ ಅಂಗವಾಗಿ ಉಳ್ಳಾಲ ದರ್ಗಾ ವಠಾರದಲ್ಲಿ ಔಷಧೀಯ ಸಸಿಗಳನ್ನು ನೆಡಲಾಯಿತು.
ಗುರುಬೆಳದಿಂಗಳು ಸೇವಾ ಸಂಸ್ಥೆ ಅಧ್ಯಕ್ಷರು ಹಾಗೂ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಖಜಾಂಚಿ ಆರ್.ಪದ್ಮರಾಜ್ ಮಾತನಾಡಿ ನಾರಾಯಣ ಗುರುಗುಳ ತತ್ವ , ಆದರ್ಶಗಳನ್ನು ಸಮಾಜಕ್ಕೆ ತಿಳಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ಹೇಳಿದರು. ನಮ್ಮ ದೇಶವು ವಿವಿಧತೆಯಲ್ಲಿ ಏಕತೆ ಹೊಂದಿದೆ. ನಾವೆಲ್ಲರು ಜಾತಿ, ಧರ್ಮ ಮರೆತು ಜೊತೆಯಾಗಿ ನಡೆಯಬೇಕು. ಈ ಅರ್ಥಪೂರ್ಣ ಕಾರ್ಯದ ಸಂದೇಶವು ನಮ್ಮ ಜಿಲ್ಲೆಯಿಂದ ದೇಶಕ್ಕೆ ರವಾನಿಸುವಂತಾಗಬೇಕು ಎಂದರು.
ಶಾಸಕ ಯು.ಟಿ ಖಾದರ್ ಮಾತನಾಡಿ ಇಂದು ಸಮಾಜಕ್ಕೆ ಸೌಹಾರ್ದ, ಸಹೋದರತ್ವದ ಅಗತ್ಯ ಕಾಣುತ್ತಿದೆ. ನಮ್ಮ ಮುಂದಿನ ಪೀಳಿಗೆ ಸೌಹಾರ್ದದ ಸಮಾಜ ನಿರ್ಮಾಣ ಮಾಡಬೇಕಾದರೆ ಮೊದಲು ನಾವು ಸೌಹಾರ್ದದ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಜಾತಿ, ಧರ್ಮ ಆಧಾರದಲ್ಲಿ ನಮ್ಮನ್ನು ವಿಭಾಗಿಸುವವರನ್ನ ಎಲ್ಲರೂ ಜೊತೆಯಾಗಿ ಹಿಮ್ಮೆಟ್ಟಿಸಬೇಕು ಎಂದರು.




ರಾಜ್ಯಸಭಾ ಪ್ರತಿಪಕ್ಷದ ಮುಖ್ಯ ಸಚೇತಕ ಡಾ.ಸಯ್ಯದ್ ನಾಸಿರ್ ಹುಸೇನ್, ಉಳ್ಳಾಲ ದರ್ಗಾ ಅಧ್ಯಕ್ಷರಾದ ರಶೀದ್ ಹಾಜಿ , ಉಪಾಧ್ಯಕ್ಷರಾದ ಯು.ಕೆ.ಮೋನು ಇಸ್ಮಾಯಿಲ್, ಬಾವ ಮೊಹಮ್ಮದ್, ಪ್ರದಾನ ಕಾರ್ಯದರ್ಶಿ ಮೊಹಮ್ಮದ್ ತ್ವಾಹ, ಜತೆ ಕಾರ್ಯದರ್ಶಿಗಳಾದ ನೌಷಾದ್ ಅಲಿ, ಕೋಶಾಧಿಕಾರಿ ಯು.ಕೆ.ಇಲ್ಯಾಸ್, ನಗರಸಭಾ ಅಧ್ಯಕ್ಷೆ ಚಿತ್ರಕಲಾ , ಉಪಾಧ್ಯಕ್ಷರಾದ ಆಯೂಬ್ ಮಂಚಿಲ ಮೊದಲಾದವರು ಉಪಸ್ಥಿತರಿದ್ದರು.
ಕುದ್ರೋಳಿಯ ಗುರುಬೆಳದಿಂಗಳು ಸೇವಾ ಸಂಸ್ಥೆಯ ವತಿಯಿಂದ ಚರ್ಚ್, ದರ್ಗಾ, ಬಸದಿ, ದೈವಸ್ಥಾನ, ದೇವಸ್ಥಾನ, ಗುರುದ್ವಾರ, ಗರೋಡಿಗಳಲ್ಲಿ ಅಳಿವಿನಂಚಿನಲ್ಲಿರುವ ಔಷಧೀಯ ಸಸ್ಯಗಳನ್ನು ನೆಡುವ ಯೋಜನೆಗೆ ಇಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ, ಗುರುಪೂಜೆ ನೇರವೇರಿಸಿ, ಶ್ರೀ ಗೆಜ್ಜೆಗಿರಿ ನಂದನಬಿತ್ತ್ಲ್ ಕ್ಷೇತ್ರದಲ್ಲಿ ಸಸಿಗಳನ್ನು ನೆಡುವ ಮೂಲಕ ಚಾಲನೆ ನೀಡಲಾಯಿತು.
Ullal sayed mdani darga places Narayana Guru statue In memory
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm