ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತೂ ವೀಕೆಂಡ್ ಕರ್ಫ್ಯೂ ರದ್ದು ; ಜಿಲ್ಲೆಯ ಜನತೆಗೆ ಚೌತಿ ಕೊಡುಗೆ !

09-09-21 07:07 pm       Mangaluru Correspondent   ಕರಾವಳಿ

 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊನೆಗೂ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ‌

ಮಂಗಳೂರು, ಸೆ.9 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊನೆಗೂ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ‌

ಪಾಸಿಟಿವ್ ರೇಟ್ 2.0 ಗಿಂತ ಕಡಿಮೆ ಇರುವ ಕಡೆಗಳಲ್ಲಿ ವೀಕೆಂಡ್ ಕರ್ಫ್ಯೂ ಸಡಿಲಿಸಲು ರಾಜ್ಯ ಸರಕಾರ ಸೂಚನೆ ನೀಡಿತ್ತು. ಅಲ್ಲದೆ, ಆಯಾ ಜಿಲ್ಲೆಗಳಲ್ಲಿ ಪಾಸಿಟಿವ್ ರೇಟ್ ಅನುಸರಿಸಿ ವೀಕೆಂಡ್ ಕರ್ಫ್ಯೂ ಸಡಿಲಿಕೆ ಮಾಡಲು ಮತ್ತು ಮರು ಹೇರಿಕೆ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ದ.ಕ. ಜಿಲ್ಲೆಯ ವ್ಯಾಪ್ತಿಯಲ್ಲಿ ವೀಕೆಂಡ್ ಲಾಕ್ಡೌನ್ ರದ್ದುಗೊಳಿಸಿ ಆದೇಶ ಮಾಡಿದ್ದಾರೆ. 

ಪಾಸಿಟಿವ್ ರೇಟ್ ಜಿಲ್ಲೆಯಲ್ಲಿ ಕಳೆದ ವಾರ 2.04 ಇತ್ತು. ಮುಂದಿನ ವಾರ ಎರಡರ ಒಳಗೆ ಬಂದಲ್ಲಿ ಖಚಿತವಾಗಿ ಕರ್ಫ್ಯೂ ರದ್ದುಗೊಳಿಸುವುದಾಗಿ ಹೇಳಿದ್ದರು. ಇಂದು ರಾಜ್ಯ ಸರಕಾರ ಸೆ.13ರ ವರೆಗೆ ವಿಧಿಸಲಾಗಿದ್ದ ಕೋವಿಡ್ ನಿರ್ಬಂಧ ಕ್ರಮಗಳನ್ನು ಸೆ.27 ರ ವರೆಗೆ ವಿಸ್ತರಿಸಿ ಆದೇಶ ಮಾಡಿತ್ತು. ಅದೇ ಆದೇಶದಲ್ಲಿ ಆಯಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗೆ ವಹಿಸಲಾಗಿತ್ತು. ‌

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಂಡರೂ, ನೈಟ್ ಕರ್ಫ್ಯೂ ಎಂದಿನಂತೆ ಇರಲಿದೆ‌. ರಾತ್ರಿ 9 ರಿಂದ ಬೆಳಗ್ಗೆ 5 ರ ವರೆಗೆ ಕರ್ಫ್ಯೂ ಇರುತ್ತದೆ.

Weekend Curfew gets canceld in Dakshina Kannada Mangalore orders Dc Dr Rajendra Kumar. Covid positivity rate in Mangalore has come to 2.4 percent.