ಬ್ರೇಕಿಂಗ್ ನ್ಯೂಸ್
13-09-21 11:59 am Mangaluru Correspondent ಕರಾವಳಿ
ಮಂಗಳೂರು, ಸೆ.13: ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹವು ತಣ್ಣೀರುಬಾವಿ ಬೀಚ್ ಸಮೀಪ ರವಿವಾರ ರಾತ್ರಿ ವೇಳೆ ಪತ್ತೆಯಾಗಿದೆ.
ಕಸಬಾ ಬೆಂಗರೆ ನಿವಾಸಿ ಮುಹಮ್ಮದ್ ಶರೀಫ್ (35) ಎಂಬವರ ಮೃತದೇಹ ಪತ್ತೆಯಾಗಿದೆ.
ಸೆ.11ರಂದು ನಸುಕಿನಜಾವ ಮೀನುಗಾರಿಕೆಗೆ ತೆರಳಿದ್ದ ಐವರ ಪೈಕಿ ನಾಲ್ವರು ರಕ್ಷಣೆಗೊಳಗಾಗಿದ್ದರು. ಆದರೆ ಶರೀಫ್ ನಾಪತ್ತೆಯಾಗಿದ್ದರು. ಇವರಿಗಾಗಿ ಕಳೆದ ಎರಡು ದಿನಗಳಿಂದ ತೀವ್ರ ಶೋಧ ಕಾರ್ಯ ನಡೆದಿತ್ತು. ಶನಿವಾರ ಕಡಲು ಪ್ರಕ್ಷುಬ್ಧತೆಯಿಂದ ಕೂಡಿದ್ದರಿಂದ ಇಡೀ ದಿನ ಹುಡುಕಾಟ ನಡೆದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ರವಿವಾರವೂ ಪತ್ತೆ ಕಾರ್ಯ ಮುಂದುವರಿದಿತ್ತು. ಸಂಜೆ ವೇಳೆ ಸ್ಥಳೀಯ ಮುಳುಗುತಜ್ಞರ ಶ್ರಮದಿಂದಾಗಿ ಕೊನೆಗೂ ಶರೀಫ್ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.
ಮೀನುಗಾರ ಶರೀಫ್ ನಾಪತ್ತೆಯಾಗಿದ್ದ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸಮುದ್ರದಲ್ಲಿ ಕಬ್ಬಿಣದ ಪೈಪುಗಳು: ನಾಪತ್ತೆಯಾಗಿದ್ದ ಶರೀಫ್ ಅವರಿಗಾಗಿ ಸತತ ಎರಡು ದಿನಗಳಿಂದ ಪತ್ತೆ ಕಾರ್ಯ ನಡೆದಿತ್ತು. ಹುಡುಕಾಟಕ್ಕೆ ಸಮುದ್ರಕ್ಕೆ ಧುಮುಕಿದ ಡಿವೈಎಫ್‌ಐ ಕಾರ್ಯಕರ್ತ ಮಯ್ಯದ್ದಿ ಎಂಬವರ ಕಾಲಿಗೆ ಗಂಭೀರ ಗಾಯವಾಗಿದೆ. ಕಡಲಲ್ಲಿ ಕಬ್ಬಿಣದ ಪೈಪುಗಳು ಇದ್ದವು ಎಂದು ಆರೋಪಿಸಲಾಗಿದೆ. ಗಾಯಾಳು ಮಯ್ಯದ್ದಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Read: ಪಣಂಬೂರು ತೀರದಲ್ಲಿ ಗಿಲ್ ನೆಟ್ ಬೋಟ್ ಪಲ್ಟಿ ; ಒಬ್ಬ ಮೀನುಗಾರ ಸಮುದ್ರಪಾಲು
Panambur Gill net boat Accident missing fishermen body found in Tannirbhavi beach. The deceased has been identified as Sharrif (35).
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
03-10-25 11:28 pm
HK News Desk
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm