ಬ್ರೇಕಿಂಗ್ ನ್ಯೂಸ್
13-09-21 02:27 pm Mangaluru Correspondent ಕರಾವಳಿ
ಉಳ್ಳಾಲ, ಆ.13: ಮಂಗಳೂರು ವಿವಿಯ ಪದವಿ ವಿಭಾಗದ ಐದನೇ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ವಿಳಂಬವನ್ನ ವಿರೋಧಿಸಿ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು ಸಿಂಡಿಕೇಟ್ ಸಭೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
ಕೊಣಾಜೆಯ ಮಂಗಳೂರು ವಿ.ವಿ.ಯ ಆಡಳಿತ ಸೌಧದಲ್ಲಿ ಇಂದು ಸಿಂಡಿಕೇಟ್ ಸಭೆ ನಡೆಯುತ್ತಿದ್ದಾಗ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ಕಾರ್ಯಕರ್ತರನ್ನ ತಡೆದಿದ್ದಾರೆ. ಈ ವೇಳೆ ಎಬಿವಿಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತಳ್ಳಾಟ ನಡೆದಿದೆ. ಮಂಗಳೂರು ವಿ.ವಿ.ಯ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಯ ಮೌಲ್ಯಮಾಪನವನ್ನು ತ್ವರಿತವಾಗಿ ನಡೆಸಿ ಫಲಿತಾಂಶ ನೀಡುವಂತೆ ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಬಂದ ಮಂಗಳೂರು ವಿವಿ ಉಪಕುಲಪತಿ ಪಿ.ಎಸ್ ಯಡಪಡಿತ್ತಾಯ ಮತ್ತು ಪರೀಕ್ಷಾಂಗ ಕುಲಸಚಿವರಾದ ಪ್ರೊ.ಪಿ.ಎಲ್ ಧರ್ಮ ಅವರು ಎರಡು ದಿವಸಗಳಲ್ಲಿ ಫಲಿತಾಂಶ ಪ್ರಕಟಿಸುವ ಬಗ್ಗೆ ಅಧಿಕೃತ ಆದೇಶ ಹೊರಡಿಸುವುದಾಗಿ ಭರವಸೆ ನೀಡಿದ ಹಿನ್ನಲೆಯಲ್ಲಿ ಪ್ರತಿಭಟನೆಯನ್ನ ಹಿಂಪಡೆಯಲಾಯಿತು. ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ ಮೊದಲಾದ ಪ್ರಮುಖರು ಪ್ರತಿಭಟನೆಯಲ್ಲಿದ್ದರು.
Video:
Mangalore ABVP Gherao Mangalore university for delay in results of 5th semester. P S Yadapadithaya Chancellor promised of faster announcement of results.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm