ಡ್ರಗ್ಸ್ ವಿಚಾರದಲ್ಲಿ ‌ನಮ್ಮದು ಜೀರೋ‌ ಟಾಲರೆನ್ಸ್ : ಡಿಜಿಪಿ ಪ್ರವೀಣ್ ಸೂದ್

08-09-20 06:46 pm       Udupi Reporter   ಕರಾವಳಿ

ಡ್ರಗ್ಸ್ ಬಗ್ಗೆ ನಮ್ಮದು ಝೀರೋ ಟಾಲರೆನ್ಸ್. ಡ್ರಗ್ಸ್ ವಿರುದ್ಧದ ಕಾರ್ಯಚರಣೆ ಕೇವಲ ಬೆಂಗಳೂರಿಗೆ ಸೀಮಿತವಲ್ಲ, ರಾಜ್ಯಾದ್ಯಂತ ನಿಯಂತ್ರಣ ಮಾಡಬೇಕಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.

ಉಡುಪಿ, ಸೆಪ್ಟಂಬರ್ 8: ಡ್ರಗ್ಸ್ ವಿಚಾರದಲ್ಲಿ ‌ನಮ್ಮದು ಜೀರೋ‌ ಟಾಲರೆನ್ಸ್. ಡ್ರಗ್ಸ್ ಸಮುದ್ರಮಾರ್ಗ, ಆಕಾಶಮಾರ್ಗ, ಭೂ ಮಾರ್ಗ ಎಲ್ಲಿಂದ ಬಂದರೂ ಮಟ್ಟ ಹಾಕುತ್ತೇವೆ ಎಂದು ಡಿಜಿಪಿ ಪ್ರವೀಣ ಸೂದ್ ಎಚ್ಚರಿಕೆ ‌ನೀಡಿದ್ದಾರೆ.

ಈ ಸಂಬಂಧ ಉಡುಪಿ ಎಸ್​​ಪಿ ಕಚೇರಿಯಲ್ಲಿ‌ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರವೀಣ್​ ಸೂದ್​​, ಡ್ರಗ್ಸ್ ನಿಯಂತ್ರಣದ ಬಗ್ಗೆ ಚರ್ಚೆ ಮಾಡಿದ್ದೇವೆ.‌ ಬೆಂಗಳೂರಲ್ಲಿ ಕಳೆದ ಹತ್ತು ದಿನಗಳಿಂದ ಅನೇಕ ಪ್ರಕರಣ ಬೆಳಕಿಗೆ ಬಂದಿದೆ. ನಮ್ಮ ಕಾರ್ಯಚರಣೆ ಕೇವಲ ಬೆಂಗಳೂರಿಗೆ ಸೀಮಿತವಾಗಿಲ್ಲ. ಜತೆಗೆ ಬೆಳಗಾಂ, ಹುಬ್ಬಳ್ಳಿ, ಚಿತ್ರದುರ್ಗ, ಕರಾವಳಿ ಭಾಗದಲ್ಲೂ ಕಾರ್ಯಚರಣೆ ನಡೆಸಿದ್ದೇವೆ ಎಂದರು.

ಇನ್ನು, ಸದ್ಯ ಆಗಿರುವ ಕಾರ್ಯಾಚರಣೆಗಳಿಂದ ನಮಗೆ ಸಮಾಧಾನವಾಗಿಲ್ಲ. ಸಾಫ್ಟ್ ಡ್ರಗ್ಸ್, ನ್ಯಾಚುರಲ್ ಡ್ರಗ್ಸ್, ಗಾಂಜಾ, ಸಿಂಥೆಟಿಕ್ ಡ್ರಗ್ಸ್ ಎಲ್ಲವನ್ನೂ ನಿಯಂತ್ರಣ ಮಾಡ್ತೇವೆ. ಚಾಕಲೇಟ್ ಡ್ರಿಂಕ್ಸ್​ಗಳಲ್ಲೂ ಡ್ರಗ್ಸ್ ಮಿಕ್ಸ್ ಮಾಡಿ ಕೊಡ್ತಾರೆ. ಎಲ್ಲಾ ಬಗೆಯ ಡ್ರಗ್ಸ್ ಬಗೆಗೂ ಕ್ರಮ ತೆಗೆದುಕೊಳ್ಳಲು ಐಜಿ- ಎಪ್​​ಪಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಸೆಲೆಬ್ರಿಟಿಗಳ ಬಂಧನ ಇತ್ಯಾದಿ ವಿಚಾರ ಬೆಂಗಳೂರು ಕಮಿಷನರ್ ಮಾತಾಡ್ತಾರೆ.‌ ತನಿಖೆ ನಡೆಯುತ್ತಿರುವಾಗ ಪೊಲೀಸ್ ಅಧಿಕಾರಿಯಾಗಿ ಮಾತನಾಡುವುದು ಸರಿಯಲ್ಲ. ರಾಜ್ಯ ಸರ್ಕಾರ ಮುಕ್ತ ಅವಕಾಶ ನೀಡಿದೆ. ಅಷ್ಟು ಮಾತ್ರವಲ್ಲ ಕಠಿಣ ಸೂಚನೆಯನ್ನು ನೀಡಿದ್ದಾರೆ. ರಾಜ್ಯವನ್ನು ಡ್ರಕ್ಸ್ ಮುಕ್ತ ಮಾಡುವ ಸೂಚನೆ ನೀಡಿದ್ದಾರೆ.‌ ಇದೀಗ ಬೆಂಗಳೂರು-ಮಂಗಳೂರು ದೊಡ್ಡ ಡ್ರಕ್ಸ್ ಹಬ್ ಆಗಿದೆ ಎಂದು ಹೇಳಿದ್ರು.