ಬ್ರೇಕಿಂಗ್ ನ್ಯೂಸ್
13-09-21 08:46 pm Mangaluru Correspondent ಕರಾವಳಿ
ಮಂಗಳೂರು ಸೆ.13 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಡೆಗೂ ಶಾಲೆ ಆರಂಭಿಸಲು ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ. ಕೋವಿಡ್ ನಿಯಮ ಪಾಲಿಸಿಕೊಂಡು ಸೆ.17 ರಿಂದ ಶಾಲೆಗಳನ್ನು ತೆರೆಯುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ ನೀಡಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಲೆಗಳನ್ನು ತೆರೆಯುವ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು ಶಿಕ್ಷಣ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ.
ಸೆಪ್ಟೆಂಬರ್ 17ರಂದು 8, 9 ಮತ್ತು 10 ನೇ ತರಗತಿಗಳನ್ನು ಆರಂಭಿಸಿ, ಸೆಪ್ಟೆಂಬರ್ 20 ರಂದು 6 ಮತ್ತು 7ನೇ ತರಗತಿಗಳನ್ನು ಆರಂಭಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಜೊತೆಗೆ ಎಲ್ಲಾ ಪ್ರಥಮ ಪಿ.ಯು.ಸಿ ತರಗತಿಗಳನ್ನು ಕೂಡ ಇದೇ ವೇಳೆ ಆರಂಭಿಸುವಂತೆ ಎಲ್ಲ ಕಾಲೇಜುಗಳಿಗೂ ತಿಳಿಸಿದರು.
ಜಿಲ್ಲೆಯಲ್ಲಿ ಈಗಾಗಲೇ ಶೇ.99 ರಷ್ಟು ಶಾಲಾ ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗಳಿಗೆ ಲಸಿಕೆಯನ್ನು ನೀಡಲಾಗಿದೆ. ಇತರ ಬಾಕಿ ಇರುವ ಸಿಬಂದಿ ಕೂಡಲೇ ಲಸಿಕೆ ಕೊಡಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಇದಲ್ಲದೆ, ಜಿಲ್ಲೆಯಲ್ಲಿ ಸದ್ಯಕ್ಕೆ 261 ಮಕ್ಕಳು ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದು ಮಕ್ಕಳಲ್ಲಿ ಕೋವಿಡ್ ಲಕ್ಷಣ ಕಂಡುಬಂದಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು. ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕಂಡುಹಿಡಿದು ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದರು.
ಶಾಲೆಗಳನ್ನು ಆರಂಭಿಸಿದ ನಂತರ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ಶಿಕ್ಷಕರು ಸೂಕ್ತ ಮುಂಜಾಗ್ರತೆ ವಹಿಸಬೇಕು. ಶಾಲೆ ಆರಂಭದ ನೆಪದಲ್ಲಿ ಮಕ್ಕಳಲ್ಲಿ ಶುಲ್ಕ ಪಾವತಿಸಲು ಯಾವುದೇ ಶಾಲಾಡಳಿತಗಳು ಒತ್ತಾಯಿಸಬಾರದೆಂದು ತಿಳಿಸಿದರು. ಶಾಲೆಗಳು ಆರಂಭವಾದ ಬಳಿಕವೂ ಭೌತಿಕ ತರಗತಿ ಜೊತೆಗೆ ಆನ್‍ಲೈನ್ ತರಗತಿಗಳನ್ನು ಕೂಡ ಮುಂದುವರೆಸಬೇಕು. ಭೌತಿಕ ತರಗತಿಗಳಿಗೆ ಹಾಜರಾಗುವ ಸಂಬಂಧ ವಿದ್ಯಾರ್ಥಿಗಳು ಪೋಷಕರ ಅನುಮತಿಯನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ಕೇರಳದಿಂದ ಬರುವ ಮಕ್ಕಳಿಗೆ ವಿದ್ಯಾರ್ಥಿ ನಿಲಯಗಳಲ್ಲಿ ಉಳಿದುಕೊಳ್ಳುವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದಲ್ಲಿ ಆನ್‍ಲೈನ್ ಮೂಲಕ ತರಗತಿಗಳನ್ನು ತೆಗೆದುಕೊಳ್ಳಬೇಕೆಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಎನ್.ಮಾಣಿಕ್ಯ(ಪ್ರಭಾರ), ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಲ್ಲೇಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಯಣ್ಣ, ಖಾಸಗಿ ಶಾಲಾ ಅಸೋಷಿಯೇಶನ್‍ನ ಮುಖ್ಯಸ್ಥರು, ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಇತರ ಇಲಾಖಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Schools to reopen in Mangalore Dakshina Kannada from September 20th orders Dc Dr Rajendra Kumar. Class 6th from Sep 20, Class 8, 9 and 10th from 17th to be reopened.
21-01-25 10:59 pm
HK News Desk
BJP MLA BP Harish, B. Y. Vijayendra, Yatnal:...
20-01-25 07:00 pm
Hassan Suicide, Online Gaming: ಅಮ್ಮಾ ನನ್ನನ್ನು...
20-01-25 04:24 pm
ಕೇಸರಿ ಮನೆಯಲ್ಲಿ ಬಣ ಬಡಿದಾಟ ಜೋರು ; ಯತ್ನಾಳ್ ಬಣದ ಎ...
19-01-25 08:30 pm
ಮುಡಾ ಸೈಟ್ ಹಗರಣ ; 300 ಕೋಟಿ ಮೌಲ್ಯದ 142 ಆಸ್ತಿಗಳನ...
18-01-25 05:05 pm
21-01-25 11:02 pm
HK News Desk
ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ; ಸಿಲಿಂಡರ್ಗಳ ನಿರಂತ...
19-01-25 08:17 pm
Israel War: ಕಡೆಗೂ ಕದನ ವಿರಾಮ ಘೋಷಿಸಿದ ಇಸ್ರೇಲ್ ;...
19-01-25 06:35 pm
ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಎನ್ಎಂಡಿ...
18-01-25 06:20 pm
Vijay Kiran Anand 2025: ಮಹಾ ಕುಂಭ ಮೇಳದ ಮುಖ್ಯ ಉ...
16-01-25 09:01 pm
21-01-25 11:51 pm
Mangalore Correspondent
Mangalore Praveen Nettaru murder case, NIA ar...
21-01-25 09:43 pm
Mangalore University, Phd courses: ಪಿಎಚ್ ಡಿ ಪ...
21-01-25 08:11 pm
Mangalore Kotekar bank robbery, president: 15...
21-01-25 07:43 pm
Mangalore Kotekar Bank Robbery, Accused Photo...
21-01-25 12:21 pm
21-01-25 06:00 pm
Mangaluru Correspondent
Hubballi Bank Robbery, Kotekar, Bidar: ಬೀದರ್...
20-01-25 10:18 pm
Mangalore Kotekar Bank Robbery, Three Arreste...
20-01-25 07:19 pm
Mangalore Kotekar Robbery, Davanagere: ಮಂಗಳೂರ...
20-01-25 05:20 pm
Mysuru Robbery, Bidar Mangalore, Crime; ಬೀದರ್...
20-01-25 01:25 pm