ಬ್ರೇಕಿಂಗ್ ನ್ಯೂಸ್
15-09-21 06:02 pm Mangaluru Correspondent ಕರಾವಳಿ
ಉಳ್ಳಾಲ, ಸೆ.15: ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಗುತ್ತಿಗೆ ಕಾರ್ಮಿಕನೊಬ್ಬ 33,000 ವೋಲ್ಟ್ ವಿದ್ಯುತ್ ಹರಿಯುವ ಕಂಬಕ್ಕೇರಿ ಭಾಗಶಃ ಸುಟ್ಟು ಹೋದ ಘಟನೆ ತೊಕ್ಕೊಟ್ಟಿನ ಚೆಂಬುಗುಡ್ಡೆ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆ, ಶಿಗ್ಗಾಂವಿ ತಾಲೂಕು ಮಣಿಕಟ್ಟೆ ನಿವಾಸಿ ಬೊಮ್ಮಪ್ಪ(26) ವಿದ್ಯುತ್ ಅವಘಡಕ್ಕೆ ಭಾಗಶಃ ಸುಟ್ಟು ಆಸ್ಪತ್ರೆ ಸೇರಿದ ದುರ್ದೈವಿ. ಬೊಮ್ಮಪ್ಪ ಅವರು ಪ್ರವೀಣ್ ಸುವರ್ಣ ಎಂಬ ಮೆಸ್ಕಾಂ ಗುತ್ತಿಗೆದಾರರ ಜೊತೆ ಕಳೆದ ಐದು ತಿಂಗಳುಗಳಿಂದ ಚೆಂಬುಗುಡ್ಡೆ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು. ಇಂದು ಸಂಜೆ ಇತರ ಕಾರ್ಮಿಕರ ಜೊತೆ ಬೊಮ್ಮಪ್ಪ ಮೆಸ್ಕಾಂ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರೆನ್ನಲಾಗಿದೆ.
ಈ ವೇಳೆ ಕಚೇರಿಯ ಅಂಗಣದಲ್ಲಿರುವ 33,000 ವೋಲ್ಟ್ ಯಾರ್ಡ್ ನಲ್ಲಿರುವ ಕಂಬಕ್ಕೆ ಏರಿ ಜಂಪರ್ ಟೈಟ್ ಮಾಡುವಂತೆ ಮೆಸ್ಕಾಂ ನ ಎಇಇ ದಯಾನಂದ್ ಎಂಬವರು ಹೇಳಿದ್ದಾರೆ ಎನ್ನಲಾಗುತ್ತಿದೆ. ಹೈ ವೋಲ್ಟ್ ವಿದ್ಯುತ್ ಹರಿಯುತ್ತಿದ್ದರೂ ಲೈನ್ ಆಫ್ ಆಗಿದೆ ಎಂದು ಹೇಳಿ ಕಂಬಕ್ಕೇರಿದ್ದು ಕೆಲವೇ ಕ್ಷಣಗಳಲ್ಲಿ ಇತರ ಕಾರ್ಮಿಕರ ಎದುರೇ ಸುಟ್ಟು ಹೋಗಿದ್ದರು.
ಕೂಡಲೇ ಮೆಸ್ಕಾಂ ಸಿಬ್ಬಂದಿ ಬೊಮ್ಮಪ್ಪನನ್ನ ಕೆಳಗಿಳಿಸಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿದ್ಯುತ್ ಆಘಾತಕ್ಕೆ ಬೊಮ್ಮಪ್ಪ ಅವರ ಸೊಂಟಕ್ಕಿಂತ ಕೆಳಗಿನ ಭಾಗ ಸಂಪೂರ್ಣ ಸುಟ್ಟು ಹೋಗಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಿ ಮೈಸೂರ್ ಇಲೆಕ್ಟ್ರಿಕಲ್ಸ್ ಲಿ. ನ ಅಧ್ಯಕ್ಷರಾದ ಸಂತೋಷ್ ಬೋಳಿಯಾರ್, ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಸ್ಥಳೀಯ ಕೌನ್ಸಿಲರ್ ರಾಜೇಶ್ ಯು.ಬಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೆಸ್ಕಾಂ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.
Mangalore Thokottu MESCOM Contractor staff Electrocuted after touching 33 thousand vats current illegally. The person is said to be critically and has been admitted to the local hospital.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm