ಬ್ರೇಕಿಂಗ್ ನ್ಯೂಸ್
16-09-21 12:26 pm Mangaluru Correspondent ಕರಾವಳಿ
ಮಂಗಳೂರು, ಸೆ.16: ಮೈಸೂರಿನ ನಂಜನಗೂಡಿನಲ್ಲಿ ದೇವಸ್ಥಾನ ಒಡೆದು ಹಾಕಿದ ಕ್ರಮವನ್ನು ಖಂಡಿಸಿ ಹಿಂದು ಸಂಘಟನೆ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಮಲ್ಲಿಕಟ್ಟೆ ವೃತ್ತದಲ್ಲಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಮೆರವಣಿಗೆ ನಡೆಸಿ, ಪ್ರತಿಭಟಿಸಿದ್ದಾರೆ. ಈ ವೇಳೆ, ಬಿಜೆಪಿ ಮತ್ತು ಬಿಜೆಪಿ ಸರಕಾರಕ್ಕೆ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ.
ಹಿಂದುಗಳ ಹೆಸರಲ್ಲಿ ಆಡಳಿತಕ್ಕೆ ಬಂದವರು ಹಿಂದು ವಿರೋಧಿಯಾಗಿ ನಡೆದುಕೊಂಡಿದ್ದಾರೆ. ದೇವಾಲಯ ಕೆಡವಿದವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಘೋಷಣೆ ಕೂಗಿದ್ದಾರೆ. ಈ ಕೂಡಲೇ ದೇಗುಲ ಒಡೆಯುವ ನಿರ್ಧಾರದಿಂದ ರಾಜ್ಯ ಸರಕಾರ ಹಿಂದಕ್ಕೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.
ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ಬಿಜೆಪಿಗೆ ಧಿಕ್ಕಾರ, ಬಿಜೆಪಿಗೆ ಧಿಕ್ಕಾರ ಎನ್ನುತ್ತಾ ಘೋಷಣೆ ಕೂಗಿದ್ದಾರೆ. ಬಿಜೆಪಿ ಕಾರ್ಯಕರ್ತರೇ ಪ್ರತಿಭಟನೆಯ ನೆಪದಲ್ಲಿ ತಮ್ಮದೇ ಪಕ್ಷ ಮತ್ತು ತಮ್ಮದೇ ಸರಕಾರಕ್ಕೆ ಧಿಕ್ಕಾರ ಕೂಗಿದ್ದು ವಿಶೇಷವಾಗಿತ್ತು. ಹನುಮಾನ್ ಚಾಲೀಸಾ ಮಂತ್ರಪಠಣವನ್ನು ಮಾಡಿ, ಬಳಿಕ ಪ್ರತಿಭಟನೆ ನಡೆಸಿದ್ದಾರೆ.
ದೇವಸ್ಥಾನ ಒಡೆದು ಹಾಕಿರುವ ಘಟನೆಯ ಹಿಂದೆ ಷಡ್ಯಂತ್ರವಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಯಾರು ತಪ್ಪಿತಸ್ಥರಿದ್ದಾರೆ, ಅಧಿಕಾರಿಗಳು ತಪ್ಪು ಮಾಡಿದ್ದರೆ ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
Video:
Demolition of Temples in Mysuru VHP and Bajarang Dal activits protest in Mangalore against BJP govt
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 09:24 pm
HK News Desk
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm