ಮಂಗಳೂರು ವಿವಿ ; ಸೆ.30 ರಿಂದ ಪದವಿ ವಿದ್ಯಾರ್ಥಿಗಳಿಗೆ ಅಂತಿಮ ಸೆಮಿಸ್ಟರ್ ಪರೀಕ್ಷೆ

16-09-21 08:52 pm       Mangaluru Correspondent   ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ಸೆ.30ರಿಂದ ಪದವಿ ಮಟ್ಟದ ಅಂತಿಮ ಸೆಮಿಸ್ಟರ್‌ ಪರೀಕ್ಷೆಗಳನ್ನು ಕೋವಿಡ್ ನಿಯಮದಂತೆ ನಡೆಸಲು ನಿರ್ಧರಿಸಲಾಗಿದೆ.

ಮಂಗಳೂರು, ಸೆ.16 : ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ಸೆ.30ರಿಂದ ಪದವಿ ಮಟ್ಟದ ಅಂತಿಮ ಸೆಮಿಸ್ಟರ್‌ ಪರೀಕ್ಷೆಗಳನ್ನು ಕೋವಿಡ್ ನಿಯಮದಂತೆ ನಡೆಸಲು ನಿರ್ಧರಿಸಲಾಗಿದೆ.

ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಪರೀಕ್ಷೆಗಳಿಗೆ ಹಾಜರಾಗಬಹುದು. ಪರೀಕ್ಷಾ ಶುಲ್ಕ ಮತ್ತು ನೋಂದಣಿಗೆ ಸಂಬಂಧಿಸಿದಂತೆ ಆಯಾ ಕಾಲೇಜುಗಳಿಂದ ಮಾಹಿತಿ ಪಡೆದುಕೊಳ್ಳಬೇಕು.

ಸೆ.27ರಿಂದ 1, 3, 5, 7ನೇ ಸೆಮಿಸ್ಟರ್‌ಗೆ ನಡೆದಿರುವ ಪದವಿ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಪ್ರಾರಂಭಿಸಲಾಗುವುದು.ಹ ಹಿಂಬಾಕಿ ಇರುವ ವಿದ್ಯಾರ್ಥಿಗಳಿಗೆ, ಕೋವಿಡ್ ಬಾಧಿತರಿಗೆ ಹಾಗೂ ಪ್ರಯಾಣದ ತೊಂದರೆ ಉಂಟಾಗಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆಯನ್ನು ನಡೆಸಲಾಗುವುದು. ಮಾಹಿತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರ ಕಚೇರಿಯ ದೂ.ಸಂ: 0824-2287327, 2287659, 2284359 ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Mangalore final semester exams to commence from Sep 30 in Mangalore University.