ಬ್ರೇಕಿಂಗ್ ನ್ಯೂಸ್
25-09-21 11:43 am Udupi Correspondent ಕರಾವಳಿ
ಉಡುಪಿ, ಸೆ.25 : ಉಡುಪಿಯ ಇತಿಹಾಸ ಪ್ರಸಿದ್ಧ ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕರಸೇವೆ ಮಾಡಿದ್ದಾರೆ. ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರತಿದಿನ ನೂರಾರು ಭಕ್ತರು ದೇವಸ್ಥಾನದಲ್ಲಿ ಕರಸೇವೆ ಕಾರ್ಯ ಮಾಡುತ್ತಿದ್ದಾರೆ. ಶುಕ್ರವಾರ ರಾತ್ರಿ ಆಗಮಿಸಿದ್ದ ಕೇಂದ್ರ ಸಚಿವೆ ಶೋಭಾ ಕಾರ್ಯಕರ್ತರ ಜೊತೆ ಕೆಲ ಹೊತ್ತು ಕರಸೇವೆ ಮಾಡಿದ್ದಾರೆ.
ದೇವಸ್ಥಾನದಲ್ಲಿ ಸುತ್ತು ಪೌಳಿಯ ಕೆಲಸ ನಡೆಯುತ್ತಿದ್ದು, ಹಾರೆ ಹಿಡಿದು, ಕಲ್ಲು ಮಣ್ಣು ಸಾಗಿಸುವ ಕೆಲಸದಲ್ಲಿಯೂ ಶೋಭಾ ಕರಂದ್ಲಾಜೆ ಕೈಜೋಡಿಸಿದ್ದಾರೆ. ಕಡಿಯಾಳಿ ಗ್ರಾಮಸ್ಥರು ಕಳೆದ ಹಲವು ದಿನಗಳಿಂದ ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಕರಸೇವೆ ಮಾಡುತ್ತಿದ್ದು, ಶನಿವಾರ ರಾತ್ರಿ ಕೇಂದ್ರ ಸಚಿವರೂ ಕರಸೇವೆಯಲ್ಲಿ ಭಾಗಿಯಾಗಿದ್ದು, ಕರಸೇವಕರಿಗೆ ಉತ್ಸಾಹ ಗದಿಗೆದರಿಸಿದೆ.
ಕಾರ್ಯಕರ್ತರು ಧರಿಸಿದ್ದ ಕೇಸರಿ ಬಣ್ಣದ ಟೀ ಶರ್ಟ್ ಧರಿಸಿ ಶೋಭಾ ಕರಂದ್ಲಾಜೆ ಕೆಲಸವನ್ನು ಮಾಡಿದ್ದಾರೆ. ಸುತ್ತು ಪೌಳಿಯ ಕೆಲಸ ನಡೆಯುತ್ತಿರುವ ಹಿನ್ನಲೆಯಲ್ಲಿ ದೇವಳದ ಒಳಭಾಗದಿಂದ ಮಣ್ಣು ಕಲ್ಲುಗಳನ್ನು ಬುಟ್ಟಿಯಿಂದ ಹೊರಗೆ ತಂದು ಹಾಕಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ದೇವಸ್ಥಾನದಲ್ಲಿ ಶೋಭಾ ಕರಂದ್ಲಾಜೆ ಕೆಲಸವನ್ನು ಮಾಡಿದ್ದಾರೆ.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, "ಈ ಹಿಂದೆ ದೇವಸ್ಥಾನಕ್ಕೆ ಬಂದ ಸಂದರ್ಭದಲ್ಲಿ ಕರಸೇವೆಗೆ ನಾನೂ ಒಂದು ದಿನ ಬರುವುದಾಗಿ ಹೇಳಿದ್ದೆ, ಈ ದಿನ ಅಂತಹ ಸುಯೋಗ ಕೂಡಿ ಬಂದಿದೆ. ನಮ್ಮ ದೇಶದಲ್ಲಿ ನೂರಾರು ದೇವಸ್ಥಾನಗಳು ಕರಸೇವೆಯಿಂದಲೇ ಎದ್ದು ನಿಂತಿದೆ. ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಇದ್ದಾರೆ. ಎಲ್ಲಾ ಭಕ್ತರ ಸಹಕಾರದೊಂದಿಗೆ ಈ ದೇವಸ್ಥಾನದ ಜೀರ್ಣೋದ್ಧಾರ ಕೆಲಸಗಳು ಬಹಳ ವೇಗವಾಗಿ ಪೂರ್ಣಗೊಳ್ಳಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಖುಷಿ ವ್ಯಕ್ತಪಡಿಸಿದರು.
ದೇವಸ್ಥಾನಕ್ಕೆ 13 ಶತಮಾನದ ಸುದೀರ್ಘ ಇತಿಹಾಸ
ಕಡಿಯಾಳಿ ಮಹಿಷ ಮರ್ಧಿನಿ ದೇವಸ್ಥಾನ ಕ್ರಿಸ್ತಶಕ ಎಂಟನೇ ಶತಮಾನದಲ್ಲಿ ನಿರ್ಮಾಣವಾಯಿತು ಎಂಬ ಇತಿಹಾಸವಿದೆ. ದೇವಿಯ ವಿಗ್ರಹವು ಕ್ರಿ.ಶ. 600- 750ರ ಸಂದರ್ಭದ ಶಿಲ್ಪಶೈಲಿಯನ್ನು ಹೊಂದಿದೆ. ಬಾದಾಮಿ ಚಾಲುಕ್ಯರ ಶಿಲ್ಪ ಲಕ್ಷಣವನ್ನು ವಿಗ್ರಹ ಸ್ಪಷ್ಟವಾಗಿ ಎತ್ತಿ ತೋರಿಸುತ್ತದೆ. ಸುಮಾರು 30 ಇಂಚು ಎತ್ತರದ ವಿಗ್ರಹದಲ್ಲಿ ಪ್ರಸನ್ನತೆ ಮತ್ತು ವಿಜಯದ ಮಂದಹಾಸವಿದೆ. ಮೇಲಿನ ಎರಡು ಕೈಗಳಲ್ಲಿ ಶಂಖ, ಚಕ್ರ, ಕೆಳಗಿನ ಬಲಗೈಯಲ್ಲಿ ತ್ರಿಶೂಲವಿದೆ. ತ್ರಿಶೂಲದ ಕೆಳಬದಿ ತಾಯಿಯ ಕಾಲ ಬುಡದಲ್ಲಿ ಸತ್ತು ಬಿದ್ದಿರುವ ಮಹಿಷನ ತಲೆಯನ್ನು ಒತ್ತಿ ಹಿಡಿದಿದೆ. ಹಿಂಗಾಲು ಎತ್ತಿ ಮುಗ್ಗರಿಸಿ ಬಿದ್ದ ಮಹಿಷನ ಬಾಲ ದೇವಿಯ ಎಡಗೈಯಲ್ಲಿದೆ. ಕ್ಷೇತ್ರದ ದುರ್ಗೆ ನಿರಾಭರಣ ಸುಂದರಿ. ಕಿರೀಟ, ಕುಂಡಲ, ಕೊರಳಲ್ಲಿ ಒಂದು ತಾಳಿ ಮತ್ತು ಸೊಂಟದಲ್ಲಿ ಒಂದು ಉದ್ಯಾಣ ಮಾತ್ರ ದೇವಿಯ ಆಭರಣವಾಗಿದೆ.
ದೇವಸ್ಥಾನ ಇತಿಹಾಸದ ಬಗ್ಗೆ ಗಮನಿಸುವುದಾದರೆ, ತೌಳವ ರಾಜಮಂಡಲದ ರಾಜನಾಗಿದ್ದ ರಾಮಭೋಜ ಸಂತಾನವಾಗಬೇಕೆಂದು ಪುತ್ರಕಾಮೇಷ್ಠಿ ಯಾಗ ಮಾಡಿಸಿದ. ಯಾಗ ಭೂಮಿಯನ್ನು ನೇಗಿಲಿಂದ ಉಳುವಾಗ ಒಂದು ಸರ್ಪ ನೇಗಿಲಿಗೆ ಸಿಕ್ಕು ಸತ್ತು ಹೋಯಿತು. ಆ ಸರ್ಪದ ಹತ್ಯೆಯ ಪ್ರಾಯಶ್ಚಿತ್ತಕ್ಕಾಗಿ ನಾರಾಯಣನ ವಿಶೇಷ ಸನ್ನಿಧಾನವುಳ್ಳ ಶಿವಲಿಂಗವನ್ನು ಪ್ರತಿಷ್ಠಾಪನೆ ಮಾಡಿದ. ಅದೇ ಅನಂತೇಶ್ವರ ದೇವಾಲಯ. ಅಲ್ಲದೆ ಅನಂತೇಶ್ವರ ದೇವಾಲಯದ ಸುತ್ತಮುತ್ತ ನಾಲ್ಕು ದುರ್ಗೆಯ ದೇವಾಲಯವನ್ನು ಸ್ಥಾಪಿಸಿದ, ಅದರಲ್ಲಿ ಒಂದು ಕಡಿಯಾಳಿ ಮಹಿಷ ಮರ್ಧಿನಿ ದೇವಾಲಯ ಎನ್ನುವುದು ಪ್ರತೀತಿ. ಉಳಿದ ಮೂರು ದುರ್ಗೆಯ ದೇಗುಲವೆಂದರೆ ಬೈಲೂರು ಮಹಿಷಾಸುರಮರ್ಧಿನಿ ದೇವಾಲಯ, ಕನ್ನರ್ಪಾಡಿ ಜಯದುರ್ಗೆ, ಪುತ್ತೂರು ದುರ್ಗಾಪರಮೇಶ್ವರಿ ದೇವಾಲಯ.
ಉಡುಪಿ ಶ್ರೀಕೃಷ್ಣ ಮಠಕ್ಕೂ ಕಡಿಯಾಳಿ ದೇವಾಲಯಕ್ಕೂ ನಿಕಟವಾದ ಸಂಬಂಧವಿದೆ. ಉಡುಪಿ ಪರ್ಯಾಯ ಪೀಠವನ್ನು ಏರುವ ಸ್ವಾಮಿಗಳು ತಾಯಿಗೆ ಬಂದು ಮೊದಲು ಪ್ರಾರ್ಥನೆ ಸಲ್ಲಿಸುವುದು ಸಂಪ್ರದಾಯ. ಅಲ್ಲದೆ ಪ್ರತಿ ಶುಕ್ರವಾರ 12 ಸುವಾಸಿನಿಯರ ಸಮಾರಾಧನೆಯನ್ನು ಈ ದೇವಾಲಯದಲ್ಲಿ ನಡೆಸಿಕೊಂಡು ಬಂದಿದ್ದಾರೆ. ಮುಖ ಮಂಟಪದ ಕಂಭದಲ್ಲಿ ಕೊರೆದ ಗಣಪತಿ ವಿಗ್ರಹವಿದೆ. ದೇವಾಲಯದ ಒಂದು ಕಡೆಯಲ್ಲಿ ಧೂಮಾವತಿ ದೈವದ ಮಣೆಯಿದೆ. ಹೊರಗಡೆ ಮರದ ನಂದಿ, ವಾಯವ್ಯ ದಿಕ್ಕಿನಲ್ಲಿ ಸುಬ್ರಮಣ್ಯಸ್ವಾಮಿ ದೇವಾಲಯ ಮತ್ತು ಈಶಾನ್ಯ ಮೂಲೆಯಲ್ಲಿ ವ್ಯಾಘ್ರ ಚಾಮುಂಡಿ ಗುಡಿಯಿದೆ.
Shobha Karandlaje did Karaseva in Mahishamardini Temple Udupi
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm